AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್ ಟರ್ಮಿನಲ್-2‌ರ ಸೌಂದರ್ಯವನ್ನು ಕಂಡು ಶಾಕ್‌ ಆದ ಜಪಾನ್‌ ಮಹಿಳೆ; ವಿಡಿಯೋ ವೈರಲ್‌

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಇದೀಗ ಈ ಸುಂದರ ಏರ್‌ಪೋರ್ಟ್‌ಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಮೊದಲ ಬಾರಿಗೆ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2 ರಲ್ಲಿ ಬಂದಿಳಿದ ಜಪಾನ್‌ ಮಹಿಳೆಯೊಬ್ಬರು ಅಲ್ಲಿನ ಸೊಬಗನ್ನು ಕಂಡು ಫುಲ್‌ ಶಾಕ್‌ ಆಗಿದ್ದು, ಅರೇ ನಾನು ಭಾರತದಲ್ಲಿನ ಏರ್‌ಪೋರ್ಟ್‌ನಲ್ಲಿ ಇದ್ದೇನೆಂದು ನಂಬಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 14, 2024 | 12:05 PM

Share

ಗ್ರೀನ್‌ ಏರ್‌ಪೋರ್ಟ್‌ ಪರಿಕಲ್ಪನೆಯಲ್ಲಿ ನಿರ್ಮಾಣವಾದ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣ ಅಂತಾನೇ ಹೇಳಬಹುದು. ಹಚ್ಚ ಹಸಿರಿನಿಂದ ಕೂಡಿದ ಈ ಪರಿಸರ ಸ್ನೇಹಿ ಏರ್‌ಪೋರ್ಟ್‌ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಇದೀಗ ಮೊದಲ ಬಾರಿಗೆ ಈ ವಿಮಾನ ನಿಲ್ದಾಣಕ್ಕೆ ಭೇಟಿ ಕೊಟ್ಟಂತಹ ಜಪಾನ್‌ ಮಹಿಳೆಯೊಬ್ಬರೂ ಕೂಡಾ ಇಲ್ಲಿನ ಸೌಂದರ್ಕ್ಕೆ ಮಾರು ಹೋಗಿದ್ದು, ಅರೇ ಭಾರತದ ವಿಮಾನ ನಿಲ್ದಾಣದಲ್ಲಿ ಇದ್ದೇನೆಂದು ನಂಬಲಾಗುತ್ತಿಲ್ಲ ಎನ್ನುತ್ತಾ ಫುಲ್‌ ಶಾಕ್‌ ಆಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಜಪಾನಿನ ಟ್ರಾವೆಲ್‌ ವ್ಲಾಗರ್‌ ಕಿಕಿ ಚೆನ್‌ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರಲ್ಲಿ ಬಂದಿಳಿದಾಗ ಇಲ್ಲಿನ ಅದ್ಭುತ ಸೌಂದರ್ಯವನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ಈ ಕುರಿತ ವಿಡಿಯೋವನ್ನು ಆಶೇಂದ್ರ ಪಾಟೇಲ್‌ (IamAshendra) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಜಪಾನ್‌ ಟ್ರಾವೆಲ್‌ ವ್ಲೋಗರ್‌ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2 ರ ಸೊಬಗನ್ನು ಕಂಡು ಮನಸೋತಂತಹ ದೃಶ್ಯವನ್ನು ಕಾಣಬಹುದು. ಆಕೆ ಏರ್‌ಪೋರ್ಟ್‌ನಲ್ಲಿರುವ ಈವೆಂಟ್‌ ಸ್ಪೇಸ್‌, ನಿಕೋಬಾರ್‌ ಲೌಂಜ್‌, ಎಂಟರ್ಟೈನ್ಮೆಂಟ್‌ ಏರಿಯಾಗಳನ್ನೆಲ್ಲಾ ತಿರುಗಾಡುತ್ತಾ ನಾನು ಭಾರತದಲ್ಲಿನ ವಿಮಾನ ನಿಲ್ದಾಣದಲ್ಲಿ ಇದ್ದೇನೆಂದು ನನಗೆ ನಂಬಲಾಗುತ್ತಿಲ್ಲ ಎನ್ನುತ್ತಾ ಏರ್‌ಪೋರ್ಟ್‌ ಸೌಂದರ್ಯವನ್ನು ಕಂಡು ಮನಸೋತಿದ್ದಾರೆ.

ಇದನ್ನೂ ಓದಿ:  ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ

ನವೆಂಬರ್‌ 13 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಾವ್ಹ್‌ ನಿಜಕ್ಕೂ ಈ ಏರ್‌ಪೋರ್ಟ್‌ ಅದ್ಭುತವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಹಾ ಸುಂದರ ದೃಶ್ಯʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ವಿಡಿಯೋವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ