AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಪ್ರಾಧ್ಯಾಪಕರಿಗೆ ಪ್ರಾಂಕ್ ಮಾಡಿದ ಬೆಂಗಳೂರು ವಿದ್ಯಾರ್ಥಿಗಳು, ಪ್ರೊಫೆಸರ್‌ ರಿಯಾಕ್ಷನ್ ಹೇಗಿತ್ತು ನೋಡಿ

ಪ್ರಾಂಕ್ ಮಾಡುವುದು ಕೂಡ ಟ್ರೆಂಡ್ ಆಗಿ ಬಿಟ್ಟಿದೆ. ಹೀಗಾಗಿ ಕೆಲವು ಪ್ರಾಂಕ್‌ ವಿಡಿಯೋಗಳು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದರೆ, ಕೆಲವು ವಿಡಿಯೋಗಳು ನೆಟ್ಟಿಗರ ಮನಸ್ಸು ಗೆಲ್ಲುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಕ್ಲಾಸ್ ರೂಮ್ ನಲ್ಲಿ ಪ್ರಾಧ್ಯಾಪಕರಿಗೆ ಪ್ರಾಂಕ್ ಮಾಡಲು ಹೋಗಿದ್ದಾರೆ. ವಿದ್ಯಾರ್ಥಿಗಳ ಪ್ರಾಂಕ್‌ಗೆ ಪ್ರೊಫೆಸರ್ ಕೊಟ್ಟ ರಿಯಾಕ್ಷನ್ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತವಾಗಿದೆ.

Video : ಪ್ರಾಧ್ಯಾಪಕರಿಗೆ ಪ್ರಾಂಕ್ ಮಾಡಿದ ಬೆಂಗಳೂರು ವಿದ್ಯಾರ್ಥಿಗಳು, ಪ್ರೊಫೆಸರ್‌ ರಿಯಾಕ್ಷನ್ ಹೇಗಿತ್ತು ನೋಡಿ
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: Sep 18, 2024 | 11:17 AM

Share

ಪ್ರಾಂಕ್‌ ಮಾಡುವವರಿಗೇನು ಕೊರತೆಯಿಲ್ಲ ಬಿಡಿ. ಇತ್ತೀಚೆಗಿನ ದಿನಗಳಲ್ಲಿ ವಿಡಿಯೋ ಶೂಟ್‌ ಮಾಡುತ್ತಾ ಜನರನ್ನು ಬಕ್ರಾ ಮಾಡಿ, ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವುದು ಟ್ರೆಂಡ್ ಆಗಿ ಬಿಟ್ಟಿದೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಹೊಟ್ಟೆ ಹುಣ್ಣಾಗುವಂತೆ ನಗಿಸುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಕ್ರೈಸ್ಟ್ ಕಾಲೇಜ್‌ ಪ್ರೊಫೆಸರ್‌ಗೆ ವಿದ್ಯಾರ್ಥಿಗಳು ಪ್ರಾಂಕ್ ಮಾಡಿದ್ದಾರೆ

ಈ ವಿಡಿಯೋದಲ್ಲಿ ಪ್ರಾಧ್ಯಾಪಕರು ಬಂದು ಪಾಠ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳ ನಡುವೆ ಜೋರು ಚರ್ಚೆ ನಡೆಯುತ್ತದೆ. ಇದು ಪ್ರಾಧ್ಯಾಪಕರು ಗಮನ ಸೆಳೆದಿದ್ದು, ಸಮಾಧಾನದಿಂದ ವಿದ್ಯಾರ್ಥಿಗಳ ಬಳಿ ಏನು ವಿಷಯ? ಎಂದು ವಿಚಾರಿಸುತ್ತಾರೆ. ಒಬ್ಬ ವಿದ್ಯಾರ್ಥಿನಿ ಇವರು ನನ್ನ ಮಾತು ಕೇಳುತ್ತನೇ ಇಲ್ಲ ಎಂದು ಹೇಳುತ್ತಾಳೆ. ಅದಕ್ಕೆ ಅವರು, ಏನು ವಿಷಯ ಎಂದು ಕೇಳಿದಾಗ ಇಂಗ್ಲಿಷ್‌ನಲ್ಲಿ ಸರ್, ನೀವು ಮಲಗಿದ್ದೀರಾ? ಅಥವಾ ನೀವು ಮಲಗಬಹುದೇ? ಈ ಎರಡು ವಾಕ್ಯಗಳಲ್ಲಿ ಯಾವುದು ಸರಿ ಎಂದು ಕೇಳುತ್ತಾಳೆ. ಅದಕ್ಕೆ ನೀವು ಮಲಗಬಹುದು” ಎಂದು ಪ್ರಾಧ್ಯಾಪಕರು ಉತ್ತರಿಸಿದಾಗ, ಇಡೀ ಕ್ಲಾಸ್‌ ಮಲಗುವಂತೆ ನಟಿಸುತ್ತಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by psych B (@maardaalapsych)

ಈ ವೇಳೆಯಲ್ಲಿ ಪ್ರಾಧ್ಯಾಪಕರಿಗೆ ಈ ವಿದ್ಯಾರ್ಥಿಗಳೇನು ಕಿತಾಪತಿ ಮಾಡುತ್ತಿರುವುದು ಗೊತ್ತಾಗುತ್ತದೆ. ನೀವು ಸೋಷಿಯಲ್ ಎಕ್ಸ್‌ಪರಿಮೆಂಟ್‌ ಮಾಡ್ತಾ ಇದ್ದೀರಾ? ಎಂದು ಕೇಳುತ್ತಾರೆ. ಪ್ರೊಫೆಸರ್ ಗೆ ವಿದ್ಯಾರ್ಥಿನಿಯು ವಿಡಿಯೋ ತೆಗೆಯುತ್ತಿರುವುದನ್ನು ಕಂಡು ಅವರೊಂದಿಗೆ ಕುಳಿತು ನಗುತ್ತಾ, “ನಾನು ರೀಲ್‌ನಲ್ಲಿದ್ದೇನೆಯೇ? ನಮಸ್ಕಾರ ಗೆಳೆಯರೇ!” ಅವರು ಮಾತನಾಡುವುದನ್ನು ಕಾಣಬಹುದು. ವಿದ್ಯಾರ್ಥಿಗಳೊಂದಿಗೆ ಪ್ರಾಧ್ಯಾಪಕರ ಸ್ನೇಹಭಾವವು ಪ್ರೇಕ್ಷಕರ ಹೃದಯವನ್ನು ಗೆದ್ದಿದೆ.

ಇದನ್ನೂ ಓದಿ: ಮನುಷ್ಯರ ಸಹವಾಸ ಯಾಕ್‌ ಬೇಕಪ್ಪಾ, ಹಾವುಗಳೊಂದಿಗೆ ಬರ್ತ್‌ ಡೇ ಪಾರ್ಟಿ ಮಾಡಿದ ವ್ಯಕ್ತಿ

ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ‘ಸೈಕ್ ಬಿ ‘ ಹೆಸರಿನ ಖಾತೆ ಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, “ಪೂಕಿ ಪ್ರೊಫೆಸರ್” ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಈ ವಿಡಿಯೋವು 37 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಪ್ರೊಫೆಸರ್ ಎಂದರೆ ಹೀಗಿರಬೇಕು’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ನಮ್ಮ ಪ್ರೊಫೆಸರ್ ಆದರೆ ಡಸ್ಟರ್‌ನಿಂದ ಪೆಟ್ಟ ಬೀಳುತ್ತಿತ್ತು’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ