AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ…

ಮೊದಲೇ ಬೆಂಗಳೂರು ಮಹಾನಗರ ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಪ್ರಖ್ಯಾತವಾಗಿರುವ ನಗರ. ಪ್ರತಿನಿತ್ಯ ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ವಾಹನ ಸವಾರರು ಪ್ರತಿನಿತ್ಯ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ನಲ್ಲಿ ಹೆಣಗಾಡುವುದು ಹೊಸತೇನಲ್ಲ. ಆದ್ರೆ ಈಗ ರೈಲು ಕೂಡಾ ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ ನಡುವೆ ಸಿಕ್ಕಿಹಾಕಿಕೊಂಡಿದೆ. ಈ ಕುರಿತ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಈ ಬೆಂಗ್ಳೂರು ಟ್ರಾಫಿಕ್‌ ಜಾಮ್‌ನಿಂದ ಟ್ರೈನ್‌ಗೂ ಕೂಡಾ ತಪ್ಪಿಸಿಕೊಳ್ಳೋಕೆ ಆಗ್ಲಿಲ್ಲ ನೋಡಿ…
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 26, 2024 | 9:43 AM

Share

ನಮ್ಮ ಬೆಂಗಳೂರಿನ ಟ್ರಾಫಿಕ್‌ ಜಾಮ್‌ ಸಮಸ್ಯೆ ಹೊಸದೇನಲ್ಲ ಬಿಡಿ. ನಗರದ ಒಂದಲ್ಲಾ ಒಂದು ಕಡೆ ಪ್ರತಿನಿತ್ಯ ಟ್ರಾಫಿಕ್‌ ಜಾಮ್‌ ಆಗುತ್ತಲೇ ಇರುತ್ತದೆ. ಇನ್ನೂ ವಾಹನ ಸವಾರರು, ಕೆಲಸಕ್ಕೆ ಹೋಗೋರು ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಹೆಣಗಾಡುತ್ತಿರುತ್ತಾರೆ. ಇದೀಗ ಬಸ್ಸು, ಬೈಕು, ಕಾರು ಇತರೆ ವಾಹನಗಳ ಜೊತೆಗೆ ರೈಲಿಗೂ ಕೂಡಾ ನಮ್ಮ ಬೆಂಗಳೂರಿನ ಟ್ರಾಫಿಕ್‌ ಜಾಮ್‌ನಲ್ಲಿ ಸಿಕ್ಕಿ ಹಾಕಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ರೈಲೊಂದು ಟ್ರಾಫಿಕ್‌ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ದೃಶ್ಯ ಕಂಡು ನಮ್‌ ಬೆಂಗ್ಳೂರು ಅಂದ್ರೆ ಸುಮ್ನೇನಾ ಎಂದು ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಈ ಘಟನೆ ಬೆಂಗಳೂರಿನ ಮಾರತಹಳ್ಳಿ ಸಮೀಪದ ಮುನ್ನೆಕೊಲ್ಲಾಲ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದ್ದು, ಟ್ರಾಫಿಕ್‌ ಜಾಮ್‌ನಿಂದ ರೈಲ್ವೆ ಕ್ರಾಸಿಂಗ್‌ ಬಳಿಯೂ ಸಾಲಾಗಿ ವಾಹನಗಳು ನಿಂತಿದ್ದರ ಪರಿಣಾಮ ರೈಲ್ವೆ ಕ್ರಾಸಿಂಗ್‌ ದಾಟಲು ಸಾಧ್ಯವಾಗದೇ ರೈಲು ಕೂಡಾ ಟ್ರಾಫಿಕ್‌ ಜಾಮ್‌ನಲ್ಲಿಯೇ ಸಿಲುಕಿದೆ. ಈ ಕುರಿತ ವಿಡಿಯೋವೊಂದನ್ನು ಸುಧೀರ್‌ ಚಕ್ರವರ್ತಿ (sudhirchakravarthi4142) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನಾನು ಅಥವಾ ನೀವು ಮಾತ್ರವಲ್ಲ ರೈಲಿಗೂ ಕೂಡಾ ಬೆಂಗಳೂರು ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಾರತಹಳ್ಳಿ ಸಮೀಪದ ಮುನ್ನೆಕೊಲ್ಲಾಲ ರೈಲ್ವೆ ಕ್ರಾಸಿಂಗ್‌ ಬಳಿ ವಾಹನ ದಟ್ಟಣೆಯಿಂದದ ಟ್ರಾಫಿಕ್‌ ಜಾಮ್‌ ಆಗಿದ್ದು, ಈ ಟ್ರಾಫಿಕ್‌ ಜಾಮ್‌ನಲ್ಲಿ ಕ್ರಾಸಿಂಗ್‌ ದಾಟಲಾಗದೆ ಒಂದು ರೈಲು ಕೂಡಾ ಸಿಕ್ಕಿ ಹಾಕಿಕೊಂಡಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮನೆ ಮಕ್ಕಳನ್ನು ರಕ್ಷಿಸಲು ಕಾಳಿಂಗ ಸರ್ಪವನ್ನೇ ಕಚ್ಚಿ ಕೊಂದ ಪಿಟ್‌ ಬುಲ್‌

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸ್ಟೇಷನ್‌ ಮಾಸ್ಟರ್‌ ರೈಲು ಏಕೆ ತಡವಾಗಿ ಬಂತು ಎಂದು ಕೇಳಿದ್ರೆ ಪಾಪ ಲೋಕೋ ಪೈಲೆಟ್‌ ಟ್ರಾಫಿಕ್‌ ಸಮಸ್ಯೆ ಅಂತ ಅದು ಹೆಂಗ್‌ ಹೇಳ್ತಾರೋʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಪ್ರತಿ ಸಾರಿ ರೈಲು ದಾಟುವಾಗ ನಾವು ಕಾಯ್ತೇವೆ. ಈ ಸಲ ರೈಲು ನಾವು ದಾಟುವವರೆಗೆ ಕಾಯಲಿʼ ಎಂದು ತಮಾಷೆ ಮಾಡಿದ್ದಾರೆ. ಇನ್ನೂ ಅನೇಕರು ನಮ್ಮ ಬೆಂಗ್ಳೂರು ಅಂದ್ರೆ ಸುಮ್ನೇನಾ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 4:38 pm, Wed, 25 September 24

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ