AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವರ್ಕ್‌ ಫ್ರಮ್‌ ರೋಡ್; ಬೀದಿಯಲ್ಲಿ ನಡೆದುಕೊಂಡು ಹೋಗುತ್ತಲೇ ಲ್ಯಾಪ್‌ಟಾಪ್‌ ಹಿಡಿದು ಮೀಟಿಂಗ್‌ಗೆ ಹಾಜರಾದ ಟೆಕ್ಕಿ

ಬೆಂಗಳೂರಿನ ಟ್ರಾಫಿಕ್‌ ಮಧ್ಯೆ ಸಿಲುಕಿ ಕೆಲಸಕ್ಕೆ ತಡ ಆಗುತ್ತೆ ಅಂತ ವಾಹನದಲ್ಲಿ ಕೂತು ದಾರಿ ಮಧ್ಯೆಯೇ ಲ್ಯಾಪ್‌ಟಾಪ್‌ ಹಿಡಿದು ಆಫೀಸ್‌ ಕೆಲಸ ಮಾಡಿದವರ ಸುದ್ದಿ ಈ ಹಿಂದೆ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಬೆಂಗಳೂರಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಲೇ ವ್ಯಕ್ತಿಯೊಬ್ಬರು ಲ್ಯಾಪ್‌ಟಾಪ್‌ ಹಿಡಿದು ಆಪೀಸ್‌ ಮೀಟಿಂಗ್‌ ಅಟೆಂಡ್‌ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ‌

ಮಾಲಾಶ್ರೀ ಅಂಚನ್​
| Edited By: |

Updated on: Nov 24, 2024 | 12:15 PM

Share

ಮೀಟಿಂಗ್‌ಗಳು ಕೂಡಾ ನಮ್ಮ ಕೆಲಸದ ಒಂದು ದೊಡ್ಡ ಭಾಗ ಅಂದ್ರೆ ತಪ್ಪಾಗಲಾರದು. ಹೀಗಾಗಿ ಮೀಟಿಂಗ್‌ಗೆ ಸರಿಯಾಗಿ ತಯಾರಾಗುವುದು ಮುಖ್ಯ ಜೊತೆಗೆ ಮೀಟಿಂಗ್‌ಗೆ ಸರಿಯಾದ ಸಮಯಕ್ಕೆ ಹಾಜರಾಗುವುದು ಕೂಡಾ ಮುಖ್ಯ. ಇದೇ ರೀತಿ ಇಲ್ಲೊಬ್ರು ವ್ಯಕ್ತಿ ಕೂಡಾ ಕಾಯಕವೇ ಕೈಲಾಸ ಎನ್ನುತ್ತಾ ಮೀಟಿಂಗ್‌ಗೆ ತಡ ಆಗಬಾರದು ಅಂತ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗಲೇ ಲ್ಯಾಪ್‌ಟಾಪ್‌ ಹಿಡಿದು ಆಫೀಸ್‌ನ ವರ್ಚುವಲ್ ಮೀಟಿಂಗ್‌ಗೆ ಅಟೆಂಡ್‌ ಆಗಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈ ವ್ಯಕ್ತಿಯ ಕೆಲಸದ ಶ್ರದ್ಧೆಯನ್ನು ಕಂಡು ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಬೆಂಗಳೂರಿನ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಟ್ರಾಫಿಕ್‌ ಮಧ್ಯೆಯೇ ಲ್ಯಾಪ್‌ಟಾಪ್‌ ಹಿಡಿದು ಕೆಲಸ ಮಾಡುವ ಮೀಟಿಂಗ್‌ ಅಟೆಂಡ್‌ ಆಗುವಂತಹವರ ಸುದ್ದಿಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ರು ವ್ಯಕ್ತಿ ಕೂಡಾ ಬೆಂಗಳೂರಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಲೇ ಲ್ಯಾಪ್‌ಟಾಪ್‌ ಹಿಡಿದು ಆಫೀಸ್‌ ಮೀಟಿಂಗ್‌ ಅಟೆಂಡ್‌ ಮಾಡಿದ್ದಾರೆ. ಈ ಕುರಿತ ವಿಡಿಯೋವನ್ನು karnatakaportf ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕಾರ್ಪೊರೇಟ್‌ ಕಂಪೆನಿಯಲ್ಲಿ ಕೆಲಸ ಮಾಡುವಂತಹ ಬೆಂಗಳೂರಿನ ವ್ಯಕ್ತಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಲೇ ಲ್ಯಾಪ್‌ಟಾಪ್‌ ಹಿಡಿದು ಆಫೀಸ್‌ ಮೀಟಿಂಗ್‌ಗೆ ಅಟೆಂಡ್‌ ಆಗಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ನವೆಂಬರ್‌ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕೆಲವರು ಶಾಪಿಂಗ್‌ ಮಾಲ್‌ನಲ್ಲಿ ಇದ್ದುಕೊಂಡು ಹೀಗೆ ಮೀಟಿಂಗ್‌ಗೆ ಹಾಜರಾಗುತ್ತಾರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹುಶಃ ಅವನು ಸೋಮಾರಿಯಾಗಿರಬೇಕು, ಮೀಟಿಂಗ್‌ ಇದೆ ಅಂತ ಗೊತ್ತಿದ್ರೂ ಯಾಕಿಷ್ಟು ತಡ ಮಾಡಿದʼ ಎಂದು ಕೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು