AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಬೆಂಗಳೂರಿನಲ್ಲಿ ಮಳೆಗೆ ಉಂಟಾದ ಟ್ರಾಫಿಕ್​​ ಕಾರಣ 3 ಗಂಟೆ ಟ್ರಾಫಿಕ್​​ನಲ್ಲಿ ಸಿಲುಕಿ ಅನುಭವಿಸಿದ ಕೆಟ್ಟ ಅನುಭವವನ್ನು ವ್ಯಕ್ತಿಯೋರ್ವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ ತಲುಪಲು 1.5 ಗಂಟೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಯಾವೊಬ್ಬ ಸಂಚಾರ ಪೊಲೀಸ್​​ ಸಿಬ್ಬಂದಿಯನ್ನೂ ತಾನು ಕಂಡಿಲ್ಲ ಎಂದವರು ದೂರಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಝತ್​​ ವೈರಲ್ ಆಗಿದೆ.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:May 20, 2026 | 12:18 PM

Share

ಬೆಂಗಳೂರು, ಮೇ 20: ಮಳೆ ಬಂತೆಂದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳು ಹೊಳೆಯಂತಾಗೋದು ನಗರ ನಿವಾಸಿಗಳಿಗೆ ಹೊಸದೇನೂ ಅಲ್ಲ. ಈ ವೇಳೆ ಉಂಟಾಗುವ ಟ್ರಾಫಿಕ್​​ ಸಮಸ್ಯೆಯ ಕುರಿತಂತೂ ಮತ್ತೆ ಹೇಳಬೇಕಿಲ್ಲ. ಯಾವಾಗ ಮನೆ, ಕಚೇರಿ ಅಥವಾ ಗಮ್ಯ ಸ್ಥಾನ ತಲುಪುತ್ತೇವೆ ಎಂದು ವಾಹನ ಸವಾರರು ಹೇಳಲು ಸಾಧ್ಯವೇ ಇಲ್ಲ. ಈ ನಡುವೆ ಮೊನ್ನೆ ಬೆಂಗಳೂರಲ್ಲಿ ಸುರಿದ ಮಳೆಯ ವೇಳೆ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಸುಮಾರು 4 ಕಿ.ಮೀ. ಕ್ರಮಿಸಲು ವ್ಯಕ್ತಿಯೋರ್ವರು ಒಂದೂವರೆ ಗಂಟೆ ಸಮಯ ತೆಗೆದುಕೊಂಡ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​​ ಆಗಿದೆ.

ಎಕ್ಸ್​​ ಪೋಸ್ಟ್​​ನಲ್ಲಿ ಏನಿದೆ?

ಮೇ 18ರ ಸೋಮವಾರ ಸಂಜೆ ಸುರಿದ ಭಾರೀ ಮಳೆಯು ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿತು. ಇದರಿಂದ ಬೇಸತ್ತ ವರುಣ್​​ ರಂಗರಾಜನ್​​ ಎಂಬವರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಪ್ರಕಾರ, ಅವರು ಸಂಜೆ 5:17ಕ್ಕೆ ಬೆಳ್ಳಂದೂರಿನಿಂದ ಹೊರಟಿದ್ದು, ಔಟರ್ ರಿಂಗ್ ರೋಡ್‌ನಲ್ಲಿ ಭಾರೀ ಟ್ರಾಫಿಕ್‌ಗೆ ಸಿಲುಕಿದ್ದಾರೆ. ಹೀಗಾಗಿ ಬರೋಬ್ಬರಿ 3 ಗಂಟೆಗಳ ಕಾಲ ತಾನು ಟ್ರಾಫಿಕ್​​ನಲ್ಲಿ ಸಿಲುಕಿದ್ದೆ. ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಬರಲು ಸುಮಾರು ಒಂದೂವರೆ ಗಂಟೆ ಸಮಯ ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ 

ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಒಬ್ಬ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೂ ಕಾಣಿಸಲಿಲ್ಲ. ಗೂಗಲ್ ಮ್ಯಾಪ್ ಪ್ರಕಾರ ಮನೆಗೆ ನಡೆದು ಹೋದರೂ ಇದೇ ಸಮಯ ತೆಗೆದುಕೊಳ್ಳುತ್ತಿತ್ತು ಎಂದು ಎಕ್ಸ್​​ ಪೋಸ್ಟ್​​ನಲ್ಲಿ ವರುಣ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಪೋಸ್ಟ್​​ಗೆ ಅನೇಕರು ಪ್ರತಿಕ್ರಿಯಿಸಿದ್ದು, ಹಲವರು ಇದು ನಮ್ಮ ದೈನಂದಿನ ಕಥೆ ಎಂದು ಹೇಳಿಕೊಂಡಿದ್ದಾರೆ. ಮಳೆ ಬಂತೆಂದರೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಳ್ಳೂವುದು ಹೊಸತೇನಲ್ಲ ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:04 pm, Wed, 20 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು