AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಮ್ಮ ಮಾಸಿಕ ಹೂಡಿಕೆ 1.7 ಲಕ್ಷ ರೂ; ಇನ್ವೆಸ್ಟ್ಮೆಂಟ್ ಸೀಕ್ರೆಟ್ ರಿವೀಲ್ ಮಾಡಿದ ಬೆಂಗಳೂರಿನ ದಂಪತಿ

ಬೆಂಗಳೂರು ದುಬಾರಿ, ಇಲ್ಲಿ ಬದುಕೋದು ಕಷ್ಟ ಎನ್ನುವುದು ಅನೇಕರ ಅಭಿಪ್ರಾಯ. ಆದರೆ ಬೆಂಗಳೂರಿನ ದಂಪತಿ ಎಸ್ ಐಪಿ ಹಾಗೂ ಷೇರುಗಳಲ್ಲಿ ಹೂಡಿಕೆ ಮಾಡುವ ಮೂಲಕ ತಮ್ಮ ಮಾಸಿಕ 1.7 ಲಕ್ಷ ರೂ ಉಳಿತಾಯವಾಗುತ್ತದೆ ಎಂದಿದ್ದಾರೆ. ತಮ್ಮ ತಿಂಗಳ ಹೂಡಿಕೆ ತಂತ್ರವನ್ನು ರಿವೀಲ್ ಮಾಡಿದ್ದಾರೆ. ಈ ಪೋಸ್ಟ್ ಸದ್ಯ ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಮ್ಮ ಮಾಸಿಕ ಹೂಡಿಕೆ 1.7 ಲಕ್ಷ ರೂ; ಇನ್ವೆಸ್ಟ್ಮೆಂಟ್ ಸೀಕ್ರೆಟ್ ರಿವೀಲ್ ಮಾಡಿದ ಬೆಂಗಳೂರಿನ ದಂಪತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Jul 07, 2026 | 1:17 PM

Share

ಬೆಂಗಳೂರು, ಜುಲೈ 07: ಬೆಂಗಳೂರು (Bengaluru) ಅಂದ್ರೆ ಸಾಕು, ಕೆಲವರಿಗೆ ಎಷ್ಟು ದುಡಿದ್ರೂ ಸಾಕಾಗಲ್ಲ. ಉಳಿತಾಯ ಬಿಡಿ, ತಿಂಗಳ ಖರ್ಚು ವೆಚ್ಚ ಸರಿದೂಗಿಸುವುದರಲ್ಲೇ ಸಾಕಾಗಿ ಹೋಗುತ್ತದೆ. ಹೀಗಿರುವಾಗ ಬೆಂಗಳೂರಿನ ಈ ದಂಪತಿಯ ಮಾಸಿಕ ಹೂಡಿಕೆ ತಿಳಿದ್ರೆ ನೀವು ಶಾಕ್ ಆಗ್ತೀರಾ. ಹೌದು, ತಿಂಗಳಿಗೆ 1.7 ಲಕ್ಷ ರೂವನ್ನು ಎಸ್ಐಪಿ, ಇಕ್ವಿಟಿ ಸೇರಿದಂತೆ ಇನ್ನಿತ್ತರ ಷೇರುಗಳಲ್ಲೂ ಹೂಡಿಕೆ ಮಾಡಿ ಆರ್ಥಿಕ ಭವಿಷ್ಯವನ್ನು ಭದ್ರಪಡಿಸಿಕೊಳ್ಳುವುದಾಗಿ ಹೇಳಿದ್ದಾರೆ. ಈ ದಂಪತಿಯ ಹೂಡಿಕೆ ತಂತ್ರಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಮೇಘಾ ಹಾಗೂ ಶುಭಮ್ (@the12absproject) ಹೆಸರಿನ ಜಂಟಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಬೆಂಗಳೂರು ಮೂಲದ ಮಿಲೇನಿಯಲ್ ದಂಪತಿ ಹಣವನ್ನು ಹೇಗೆ ನಿರ್ವಹಿಸುತ್ತಾರೆ ಎಂದು ವಿವರಿಸಿದ್ದಾರೆ. ಈ ದಂಪತಿಯರಿಬ್ಬರೂ ಬೆಂಗಳೂರಿನಲ್ಲಿ ಮಿಲೇನಿಯಲ್ ಕುಟುಂಬವಾಗಿ ನಾವು ನಮ್ಮ ಹಣವನ್ನು ಹೇಗೆ ಹೂಡಿಕೆ ಮಾಡುತ್ತೇವೆ ಎಂಬುದು ಇಲ್ಲಿದೆ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ವರ್ಷಗಳಲ್ಲಿಎಸ್‌ಐಪಿಗಳನ್ನು ಹೆಚ್ಚಿಸಿದ್ದು, ತಿಂಗಳಿಗೆ 65,000 ರೂ ಹೂಡಿಕೆ ಮಾಡುತ್ತೇವೆ. ಈಕ್ವಿಟಿಗಳಲ್ಲಿ ಇನ್ವೆಸ್ಟ್ ಮಾಡುತ್ತೇವೆ. ಸಾಧ್ಯವಾದಾಗಲೆಲ್ಲಾ ದೊಡ್ಡ ಮೊತ್ತದ ಹಣವನ್ನು ಹಾಕುತ್ತೇವೆ. ತಮ್ಮ ನಿವೃತ್ತಿ ನಿಧಿಗೆ ಸ್ವಲ್ಪ ಹಣವನ್ನು ವಿನಿಯೋಗಿಸುತ್ತೇವೆ. ತಮ್ಮ ಮಗಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸರ್ಕಾರಿ ಯೋಜನೆಯಲ್ಲಿ ಹೂಡಿಕೆಮಾಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಂದು ಕಾಲೇಜ್ ಫೀಸ್ ಕಟ್ಟಲು ದುಡ್ಡಿಗಾಗಿ ಪರದಾಟ, ಇಂದು ಕೋಟಿ ರೂ ಸಂಪಾದನೆ; ಇದು ಬೆಂಗಳೂರು ಸಾಫ್ಟ್‌ವೇರ್ ಇಂಜಿನಿಯರ್‌ನ ಕಥೆ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರ, ಈ ತಂತ್ರವು ಒಂದು ನಿರ್ದಿಷ್ಟ ಗುಂಪಿಗೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಇಷ್ಟು ಮೊತ್ತವನ್ನು ಹೂಡಿಕೆ ಮಾಡಿದ್ರೆ ಮಧ್ಯಮವರ್ಗದವರು ಖರ್ಚು ವೆಚ್ಚಗಳನ್ನು ಹೇಗೆ ನಿಭಾಯಿಸೋದು ಎಂದು ಕೇಳಿದ್ದಾರೆ. ಮತ್ತೊಬ್ಬರು, ಲಕ್ಷಾನುಗಟ್ಟಲೇ ಸಂಬಳವಿಲ್ಲದವರಿಗೆ ನಿಮ್ಮ ಸಲಹೆಗಳು ಪ್ರಸ್ತುತವಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 7 July 26

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ