AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್​​ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್‌

ಬೆಂಗಳೂರು ರಸ್ತೆಗಳ ಕಳಪೆ ಸ್ಥಿತಿ ಮತ್ತೆ ಚರ್ಚೆಗೆ ಬಂದಿದೆ. ಗುಂಡಿಯಿಂದಾಗಿ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಿಂದ ವಿಡಿಯೋ ಹಂಚಿಕೊಂಡಿದ್ದಾರೆ. ಕಳಪೆ ಮೂಲಸೌಕರ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿ, ರಸ್ತೆ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಗಳೂರು ರಸ್ತೆಗಳ ಸುಧಾರಣೆಗೆ ತಕ್ಷಣದ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್​​ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್‌
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 28, 2025 | 12:05 PM

Share

ಬೆಂಗಳೂರಿನ ಗುಂಡಿಗಳು (Bangalore Roads Crisis) ಮತ್ತೆ ಚರ್ಚೆಗೆ ಬಂದಿವೆ. ಈ ಹಿಂದೆ ಬೆಂಗಳೂರಿನ ಹೊಂಡಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಬೆಂಗಳೂರಿನ ಗುಂಡಿಗಳು ಮತ್ತೆ ಚರ್ಚೆಗೆ ಬರಲು ಈ ಘಟನೆ ಕಾರಣ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನ ಗುಂಡಿಯಿಂದ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದಲ್ಲೇ ವಿಡಿಯೋ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಈ ಸ್ಥಿತಿಗೆ ಕಳಪೆ ಮೂಲಸೌಕರ್ಯ ಕಾರಣ ಎಂದು ಆರೋಪಿಸಿದ್ದಾರೆ.ಈ ವಿಡಿಯೋವನ್ನು ಅವರ ಸ್ನೇಹಿತೆ ಶ್ರೀ ಎಂಬವವರು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

ರಸ್ತೆ ಸುರಕ್ಷತೆ, ಹೊಣೆಗಾರಿಕೆ ಮತ್ತು ಪ್ರಯಾಣಿಕರು ಎದುರಿಸುತ್ತಿರುವ ದೈನಂದಿನ ಸಮಸ್ಯೆ ಬಗ್ಗೆ ಈ ಪೋಸ್ಟ್​​ನಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಳನ್ನು ಸರಿಪಡಿಸಲು ನಿಮಗೆ ಸಾಧ್ಯವಾಗದಿದ್ದರೆ, ದಯವಿಟ್ಟು ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ನಿಷೇಧಿಸಿ ಎಂದು ಈ ಪೋಸ್ಟ್​​ನಲ್ಲಿ ಶೀರ್ಷಿಕೆಯನ್ನು ಕೂಡ ನೀಡಿದ್ದಾರೆ. ಈ ಬಗ್ಗೆ ವಿಡಿಯೋದಲ್ಲಿ ಗಾಯಗೊಂಡ ಸೌರಭ್ ಪಾಂಡೆ ಹೀಗೆ ಹೇಳಿಕೊಂಡಿದ್ದಾರೆ. “ಕಳಪೆ ರಸ್ತೆ, ಗುರುತು ಹಾಕದ ಸ್ಪೀಡ್ ಬ್ರೇಕರ್‌ನಿಂದಾಗಿ ನನ್ನ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡಿತ್ತು. ಇದರಿಂದ ನನ್ನ ಕಾಲು, ಕೈ ಮತ್ತು ತೋಳಿಗೆ ತೀವ್ರವಾದ ಗಾಯಗಳಾಗಿವೆ. ದಯವಿಟ್ಟು ನಗರದ ರಸ್ತೆಗಳ ಬಗ್ಗೆ ಏನಾದರೂ ಮಾಡಿ” ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಮ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Khyati Shree (@khyatishree2)

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿರುವ ಸೌರಭ್ ಪಾಂಡೆ ಅವರ ಸ್ನೇಹಿತೆ ಶ್ರೀ ಅವರು ಹೀಗೆ ಹೇಳಿದ್ದಾರೆ. “ಅವೈಜ್ಞಾನಿಕ ಸ್ಪೀಡ್ ಬ್ರೇಕರ್‌ನಿಂದ ಬೈಕ್​​​​ನ ನಿಯಂತ್ರಣ ಕಳೆದುಕೊಂಡ ನನ್ನ ಸ್ನೇಹಿತನಿಗೆ ಗಾಯಗಳಾಗಿವೆ. ಇದೀಗ ಅವನಿಗೆ ವೈದ್ಯರು ತಕ್ಷಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವನು ಈ ತಿಂಗಳಿನ ಕೊನೆಯಲ್ಲಿ ಊರಿಗೆ ಹೋಗಬೇಕಿತ್ತು. ಆದರೆ ಇದೀಗ ಅವನಿಗೆ ನಡಿಯಲು ಸಾಧ್ಯವಿಲ್ಲ. ಈ ಶಸ್ತ್ರಚಿಕಿತ್ಸೆ 6 ಲಕ್ಷ ರೂ. ಖರ್ಚಾಗಿದೆ. ಇದಕ್ಕೆ ನಿಜವಾಗಿ ಯಾರು ಹೊಣೆ, ಹೆಲ್ಮೆಟ್ ಹಾಕದಿದ್ದರೆ ದಂಡ ಹಾಕುತ್ತಾರೆ, ಆದರೆ ಸ್ಪೀಡ್ ಬ್ರೇಕರ್​​ನ್ನು ಯಾಕೆ ಸರಿಯಾಗಿ ಮಾಡಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದಾರಿಯಲ್ಲಿ ಮಹಿಳೆಗೆ ಸಿಕ್ತು 10 ಲಕ್ಷ ರೂ.ಹಣ ಇದ್ದ ಬ್ಯಾಗ್: ಬಳಿಕ ಆಕೆ ಮಾಡಿದ್ದೇನು?

ಸೋಶಿಯಲ್​​​ ಮೀಡಿಯಾದಲ್ಲಿ ನೆಟ್ಟಿಗರ ಪ್ರತಿಕ್ರಿಯೆ ಹೀಗಿತ್ತು :

ಬೆಂಗಳೂರಿನಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ದೈನಂದಿನ ಸಮಸ್ಯೆ ಇದು ಎಂದು ಹಲವು ನೆಟ್ಟಿಗರು ಕೋಪದಿಂದ ಪ್ರತಿಕ್ರಿಯಿಸಿದ್ದಾರೆ. ನೀವು ಬೆಂಗಳೂರಿನಲ್ಲಿ ಸರಿಯಾಗಿ ವಾಹನ ಚಲಾಯಿಸಲು ಕಲಿತರೆ, ಜಗತ್ತಿನ ಯಾವ ಮೂಲೆಯಲ್ಲೂ ಬೇಕಾದರೂ ವಾಹನ ಓಡಿಸಬಹುದು ಎಂದು ಒಬ್ಬ ನೆಟ್ಟಿಗ ಹೇಳಿದ್ದಾರೆ. ವಾಹನ ಚಲಾಯಿಸುವಾಗ ಕಣ್ಣು ತೆರೆದು ಓಡಿಸಿ, ಏಕೆಂದರೆ ಇದು ಬೆಂಗಳೂರಿನ ರಸ್ತೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ