AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​, ವಿಡಿಯೋ ವೈರಲ್

ಗುರುವಾರ ರಾತ್ರಿಯಿಂದ ಇಂದು ಬೆಳಗಿನ ಜಾವದ ವರೆಗೂ ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಟ್ರಾಫಿಕ್ ಸಮಸ್ಯೆ ಕೂಡ ಕಂಡುಬಂದಿದೆ. ಇದರಿಂದಾಗಿ ಇಲೆಕ್ಟ್ರಾನಿಕ್ ಸಿಟಿಯ ಫ್ಲೈಓವರ್​ ತುಂಬಿ ತುಳುಕುತ್ತಿದೆ. ಮಳೆರಾಯನಿಂದಾದ ರಸ್ತೆಯ ದುಸ್ಥಿತಿಯನ್ನು ಕುರಿತು ನಗರದ ನಿವಾಸಿಯೊಬ್ಬರು ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ ನೋಡಿ.

ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​, ವಿಡಿಯೋ ವೈರಲ್
ಗುರುವಾರ ರಾತ್ರಿಯ ಭಾರಿ ಮಳೆಗೆ ಬೆಂಗಳೂರಿನ ಪ್ಲೈಓವರ್​ಗಳು ಜಲಾವೃತಗೊಂಡಿವೆ
ಭಾವನಾ ಹೆಗಡೆ
|

Updated on:Sep 19, 2025 | 4:17 PM

Share

ಬೆಂಗಳೂರು, (ಸೆಪ್ಟೆಂಬರ್ 19):  ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಟ್ರಾಫಿಕ್  (Traffic) ಸಮಸ್ಯೆ ಕೂಡ ಕಂಡುಬಂದಿದೆ. ರಾತ್ರಿಯಿಡೀ ಸುರಿದಿರುವ ಮಳೆಯಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಜಲಾವೃತವಾಗಿರುವುದರ ಜೊತೆಗೆ ಪ್ರಯಾಣಿಕರು  ಫ್ಲೈಓವರ್​ನಲ್ಲಿ ವಾಹನ ಚಲಾಯಿಸಲು ಕಷ್ಟಪಡುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾನಲ್ಲಿ ಹಂಚಿಕೊಂಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ತೀವ್ರ ಮಳೆಯಿಂದಾಗಿ ಬೆಂಗಳೂರಿನ ಹಲವು  ಭಾಗಗಳು ಎಷ್ಟರ ಮಟ್ಟಿಗೆ ನೀರಿನಿಂದ ತುಂಬಿಹೋಗಿವೆ ಮತ್ತು ರಸ್ತೆಗಳ ದುಸ್ಥಿತಿ ಹೇಗಿದೆ ಎಂಬುದನ್ನು ನೋಡಲು ಈ ವೀಡಿಯೋ ವೀಕ್ಷಿಸಿ

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಮಳೆ?

ಇಂದು ಬೆಳಿಗ್ಗೆ 5.30ರವರೆಗೆ ಬೆಂಗಳೂರಿನಲ್ಲಿ 65.55 ಮಿ.ಮೀ ಮಳೆಯಾಗಿದೆ.  ದೊಡ್ಡಬಳ್ಳಾಪುರದಲ್ಲಿ 60 ಮೀ.ಮೀ, ಬೆಂಗಳೂರು ಗ್ರಾಮಾಂತರದ ಹೇಸರಘಟ್ಟದಲ್ಲಿ 43 ಮಿ.ಮೀ ಮಳೆಯಾಗಿದ್ದು,  ಮುಂದಿನ ದಿನಗಳಲ್ಲಿ ಮತ್ತೆ ಮಳೆಯಾಗುವ ಮೂನ್ಸೂಚನೆ ನೀಡಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ 30-40 kmh ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತದ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ; ಲಾಲ್ ಬಾಗ್ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ!

ಭಾರೀ ಮಳೆಯಿಂದಾಗಿ ತಾತ್ಕಾಲಿಕ ವಿದ್ಯುತ್ ಕಡಿತ, ನೀರು ನಿಲ್ಲುವಿಕೆ ಮತ್ತು ಮಳೆಯಿಂದ ಶಿಥಿಲಗೊಂಡ ಮರದ ಕೊಂಬೆಗಳು ಬೀಳುವ ಸಾಧ್ಯತೆಯಿದೆ. ಹಾಗೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ಪ್ಲಗ್​ ಮಾಡುವಂತೆ ಮತ್ತು ಪ್ರಯಾಣೀಸುವಾಗ ಸುರಕ್ಷಿತವಾಗಿರುವಂತೆ  ಮುನ್ನೆಚ್ಚರಿಕೆ ನೀಡಲಾಗಿದೆ.

ಕರ್ನಾಟಕದಲ್ಲಿ ಎಲ್ಲಲ್ಲಿ ಮಳೆ?

ಕರ್ನಾಟಕದಲ್ಲಿ ಹಲವೆಡೆ ಗಮನಾರ್ಹ ಪ್ರಮಾಣದಲ್ಲಿ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣ ಕೇಂದ್ರದ (KSNDMC) ಪ್ರಕಾರ  ಚಿಕ್ಕಬಳ್ಳಾಪುರದ ಕಾನಗಮಾಕಲಪಲ್ಲಿಯಲ್ಲಿ 130 ಮಿ.ಮೀ, ತಿರುಮಾನಿಯಲ್ಲಿ 114 ಮಿ.ಮೀ, ಬೀಚಗನಹಳ್ಳಿಯಲ್ಲಿ 114 ಮಿ.ಮೀ , ಚೆಲೂರಿನಲ್ಲಿ 101 ಮಿ.ಮೀ, ಬೀದರ್​ನ ಬಂದರ್​ಕುಮಟದಲ್ಲಿ 112 ಮಿ.ಮೀ, ಗದಗದಲ್ಲಿ 51.9 ಮಿ.ಮೀ, ರಾಮನಗರದ ಚಂದುರಾಯನಹಳ್ಳಿಯಲ್ಲಿ 46 ಮಿ.ಮೀ,ಕೋಲಾರದ ತಮಕದಲ್ಲಿ 21.5 ಮಿ.ಮೀ, ಮಂಗಳೂರಿನಲ್ಲಿ 20.7 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದೆ.

Published On - 4:15 pm, Fri, 19 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ