ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on:May 24, 2024 | 12:31 PM

ಬೆಂಗಳೂರಿನ ಜೆಪಿ ನಗರದ ಬೀದಿಗಳಲ್ಲಿ ಸ್ಪೈಡರ್ ಮ್ಯಾನ್ ವೇಷ ತೊಟ್ಟ ವ್ಯಕ್ತಿಯೊಬ್ಬರು ಮೋಟಾರ್ ಬೈಕ್‌ನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಯೂಟ್ಯೂಬರ್‌ ಜೋಡಿಯೊಂದು ಸ್ಪೈಡರ್ ಮ್ಯಾನ್ ವೇಷ ಹಾಕಿಕೊಂಡು ಬೈಕ್‌ ಮೇಲೆ ಜಾಲಿ ರೈಡ್ ಹೊರಟ ವಿಡಿಯೊ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮದ ಉಲ್ಲಂಘನೆಯ ಅಡಿಯಲ್ಲಿ ಈ ಜೋಡಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಬೆಂಗಳೂರು ಸ್ಪೈಡರ್ ಮ್ಯಾನ್ ವಿಡಿಯೋವನ್ನು @vishalanandtwts ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಜೆಪಿ ನಗರದಲ್ಲಿ ಸ್ಪೈಡರ್ ಮ್ಯಾನ್ ಎಂಬ ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಒಬ್ಬರು ಬಳಕೆದಾರರು ” ತಲೆಗೆ ಹೆಲ್ಮೆಟ್​​, ಕಾಲಿಗೆ ಚಪ್ಪಲಿ ಧರಿಸಿದ ಸ್ಪೈಡರ್ ಮ್ಯಾನ್ ನ ಎಂದಾದರೂ ನೋಡಿದ್ದೀರಾ” ಎಂದು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ” ಬೀದಿಗಳಲ್ಲಿ ಸೂಪರ್ ಹೀರೋಗಳು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Fri, 24 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ