Video: ಚಿಂತೆಯಿಲ್ಲದವನಿಗೆ ಸಂತೆಯಲ್ಲೂ ನಿದ್ದೆ; ಬೆಂಗಳೂರು ಏರ್‌ಪೋರ್ಟ್‌ನ ಪ್ರಯಾಣಿಕರ ಸೀಟಿನಲ್ಲೇ ನಿದ್ರೆಗೆ ಜಾರಿದ ಶ್ವಾನ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೀಟಿನ ಮೇಲೆ ಅನಿರೀಕ್ಷಿತ ಪ್ರಯಾಣಿಕನೊಬ್ಬ ವಿಶ್ರಾಂತಿ ಪಡೆಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಾಪ ಫ್ಲೈಟ್ ಮಿಸ್ ಆಗಿರಬೇಕು ಎಂದು ತಮಾಷೆ ಮಾಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್ 08: ಸೋಶಿಯಲ್ ಮೀಡಿಯಾವೇ ಹಾಗೆ, ಕೆಲವೊಮ್ಮೆ ಅಪರೂಪದ ದೃಶ್ಯಗಳು ವೈರಲ್ ಆಗುತ್ತಿರುತ್ತದೆ. ಇದೀಗ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International airport) ಮುದ್ದಾದ ದೃಶ್ಯದ ವಿಡಿಯೋ ಗಮನ ಸೆಳೆದಿದೆ. ಹೌದು, ವಿಮಾನ ನಿಲ್ದಾಣದ ಪ್ರಯಾಣಿಕರ ಸೀಟಿನ ಮೇಲೆ ಬೀದಿ ನಾಯಿಯೊಂದು (stray dog) ವಿಶ್ರಾಂತಿ ಪಡೆಯುತ್ತಿರುವ ಹೃದಯ ಸ್ಪರ್ಶಿ ದೃಶ್ಯ ಇದಾಗಿದೆ. ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದು ಕೊಂಡಿದ್ದು ವಿಮಾನ ನಿಲ್ದಾಣದ ಸಿಬ್ಬಂದಿಯ ಒಳ್ಳೆಯ ಮನಸ್ಸನ್ನು ಮೆಚ್ಚಿಕೊಂಡಿದ್ದಾರೆ.
ಅಖಿಲೇಶ್ ರಾವತ್ (rawat – akhilesh) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸೀಟಿನಲ್ಲಿ ಬೀದಿಬದಿಯ ಶ್ವಾನವೊಂದು ನಿದ್ರಿಸಿ ವಿಶ್ರಾಂತಿ ಪಡೆದುಕೊಂಡಿದೆ. ದೋಗೇಶ್ ಭಾಯ್ ಅವರ ಫ್ಲೈಟ್ ಮಿಸ್ ಆಗಿರಬೇಕು ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ
View this post on Instagram
ಈ ಕ್ಲಿಪ್‌ನಲ್ಲಿ ಕೆಲ ಪ್ರಯಾಣಿಕರು ಕುರ್ಚಿ ಮೇಲೆ ಕುಳಿತು ವಿಶ್ರಾಂತಿ ಪಡೆಯುವುದನ್ನು ಹಾಗೂ ಕೆಲವರು ನಿಂತು ಫ್ಲೈಟ್ ಗಾಗಿ ಕಾಯುತ್ತಿರುವುದನ್ನು ಕಾಣಬಹುದು. ಆದರೆ ಇದೆಲ್ಲದರ ಹೊರತಾಗಿ ಶ್ವಾನವೊಂದು ಏರ್ ಪೋರ್ಟ್ ನ ಪ್ರಯಾಣಿಕರ ಸೀಟಿನಲ್ಲಿ ನಿದ್ರಿಸುವುದನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.
ಇದನ್ನೂ ಓದಿ:Video:18 ಅಡಿ ಎತ್ತರದ ಗೋಡೆ ಹಾರಿದ ಭಾರತೀಯ ಶ್ವಾನ, ಇಲ್ಲಿದೆ ನೋಡಿ ವಿಡಿಯೋ
ಈ ವಿಡಿಯೋ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಈ ಶ್ವಾನ ಯಾವಾಗಲೂ ಅಲ್ಲೇ ಇರುತ್ತದೆ. ಕಳೆದ ಎರಡು ವರ್ಷಗಳಿಂದ ನಾನು ಈ ಶ್ವಾನವನ್ನು ವಿಮಾನ ನಿಲ್ದಾಣದಲ್ಲಿ ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಯಾವುದೇ ತೊಂದರೆ ಮಾಡದೇ ವಿಶ್ರಾಂತಿ ಪಡೆಯಲು ಅವಕಾಶ ಮಾಡಿದ್ದಕ್ಕೆ ವಿಮಾನ ನಿಲ್ದಾಣದ ಸಿಬ್ಬಂದಿಗೆ ಧನ್ಯವಾದಗಳು ಎಂದಿದ್ದಾರೆ. ಇನ್ನೊಬ್ಬ ಬಳಕೆದಾರ ಇದು ಕರ್ನಾಟಕ, ನಾವು ಎಲ್ಲರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತೇವೆ ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:25 pm, Wed, 8 October 25








