Post Viral: 5 ವರ್ಷದಲ್ಲಿ ಬಾಡಿಗೆ ಜಾಸ್ತಿ ಮಾಡಿಲ್ಲ, ಊಟ ಕೂಡ ಅವರದೇ, ಬಹಳ ಒಳ್ಳೆಯ ಓನರ್​​​

ಈ ಪೋಸ್ಟ್​​​​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಜೊತೆಗೆ ಇಷ್ಟು ಒಳ್ಳೆಯ ವ್ಯಕ್ತಿ ನಮಗೂ ಓನರ್​ ಆಗಿ ಸಿಗಲಿ ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ.

Post Viral: 5 ವರ್ಷದಲ್ಲಿ ಬಾಡಿಗೆ ಜಾಸ್ತಿ ಮಾಡಿಲ್ಲ, ಊಟ ಕೂಡ ಅವರದೇ, ಬಹಳ ಒಳ್ಳೆಯ ಓನರ್​​​
Follow us
ಅಕ್ಷತಾ ವರ್ಕಾಡಿ
|

Updated on:Aug 22, 2024 | 12:19 PM

ಐಟಿ ಸಿಟಿ, ಮೆಟ್ರೊಪಾಲಿಟನ್ ನಗರಿ ಬೆಂಗಳೂರಿನಲ್ಲಿ ಮನೆ ಬಾಡಿಗೆ ದರ ಏರಿಕೆಯಾಗುತ್ತಲೇ ಇದೆ. ಇದೀಗ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಮನೆ ಓನರ್​​ ಬಗ್ಗೆ ಬರೆದ ಪೋಸ್ಟ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ನನ್ನ ಮಾಲೀಕರು ಎಷ್ಟು ಒಳ್ಳೆಯ ವ್ಯಕ್ತಿ ಎಂಬುದನ್ನು ವ್ಯಕ್ತಿ ರೆಡ್ಡಿಟ್​​ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಇಂತಹ ಒಳ್ಳೆಯ ವ್ಯಕ್ತಿ ನಮಗೂ ಓನರ್​ ಆಗಿ ಸಿಗಲಿ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ರೆಡ್ಡಿಟ್​​ನಲ್ಲಿ ಹಂಚಿಕೊಂಡಿರುವ ಫೋಸ್ಟ್​​ ಪ್ರಕಾರ ” ನಾನು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನನ್ನ ಮನೆ ಓನರ್​​ 65 ವರ್ಷದ ವ್ಯಕ್ತಿ. ಇಂದು ಅವರು ನನಗಾಗಿ ಊಟವನ್ನು ತಂದುಕೊಟ್ಟಿದ್ದಾರೆ. ಯಾವತ್ತೂ ಅವರು ನನ್ನನ್ನು ಹೊರಗಿನ ವ್ಯಕ್ತಿಯಂತೆ ನೋಡಿಲ್ಲ. ಮನೆಯ ಒಬ್ಬ ಸದ್ಯಸನಂತೆ ಪ್ರೀತಿ ನೀಡುತ್ತಿದ್ದಾರೆ. ಈ ಮನೆಯಲ್ಲಿ ನಾನು 2018ರಿಂದ ವಾಸವಿದ್ದೇನೆ, ಅವಾಗ ಎಷ್ಟು ಬಾಡಿಗೆ ನೀಡುತ್ತಿದ್ದೇನೋ, ಅಷ್ಟೇ ಬಾಡಿಗೆಯನ್ನು ನಾನು ಈವಾಗಲೂ ನೀಡುತ್ತಿರುವೇ, ಒಂದು ರೂಪಾಯಿಗೂ ಬಾಡಿಗೆ ಜಾಸ್ತಿ ಕೊಡು ಎಂದು ನನ್ನ ಬಳಿ ಕೇಳಿಲ್ಲ. ತುಂಬಾ ಒಳ್ಳೆಯ ವ್ಯಕ್ತಿ. ದೇವರ ಆಶೀರ್ವಾದ ಸದಾ ಇವರ ಮೇಲಿರಲಿ” ಎಂದು ಬರೆದುಕೊಂಡಿದ್ದಾರೆ.

my landlord bought me dinner today byu/sweetestasshole inbangalore

ಇದನ್ನೂ ಓದಿ: Viral News: 117 ವರ್ಷ ಬದುಕಿದ್ದ ವಿಶ್ವದ ಅತ್ಯಂತ ಹಿರಿಯ ಮಹಿಳೆ ನಿಧನ

ಈ ಪೋಸ್ಟ್​​​​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಜೊತೆಗೆ ಇಷ್ಟು ಒಳ್ಳೆಯ ವ್ಯಕ್ತಿ ನಮಗೂ ಓನರ್​ ಆಗಿ ಸಿಗಲಿ ಎಂದು ಸಾಕಷ್ಟು ಜನರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. “ಪ್ರತೀ ವರ್ಷ ನಮ್ಮ ಓನರ್​​ ಬಾಡಿಗೆ ಹೆಚ್ಚು ಮಾಡುತ್ತಲೇ ಇದ್ದಾರೆ” ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:19 pm, Thu, 22 August 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ