AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ

ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಎನ್ನುವಂತಾಗಿದೆ. ಆದರೆ ಮಹಿಳೆಯೊಬ್ಬರು ಬೆಂಗಳೂರು ಹೆಣ್ಣು ಮಕ್ಕಳಿಗೆ ಸೇಫ್ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಟೋದಲ್ಲಿ ಬರೆದ ಸಾಲುಗಳು. ಈ ವಿಡಿಯೋ ವೈರಲ್ ಆಗಿದ್ದು ಮಹಿಳೆಯ ಮಾತನ್ನು ನೆಟ್ಟಿಗರು ಒಪ್ಪಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Dec 12, 2025 | 3:50 PM

Share

ಬೆಂಗಳೂರು, ಡಿ.12: ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಹೆಣ್ಣು ಮಕ್ಕಳ ಜತೆ ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಆದರೆ, ಬೆಂಗಳೂರಿನಲ್ಲಿ (Bengaluru) ಓಡಾಡುತ್ತಿದ್ದ ಮಹಿಳೆಗೆ  ಒಳ್ಳೆಯ ಜನ ಇರ್ತಾರೆ ಎನ್ನುವ ಅಭಿಪ್ರಾಯ ಮೂಡಿದೆ. ಹೌದು, ಈ ಮಹಿಳೆಗೆ ಆಟೋದಲ್ಲಿ (auto) ಬರೆದ ಸಾಲುಗಳು ಕಣ್ಣಿಗೆ ಬಿದ್ದಿದೆ. ಇದನ್ನೂ ನೋಡಿದ ಈ ಮಹಿಳೆಯೂ ಬೆಂಗಳೂರು ರಾತ್ರಿ ವೇಳೆ ಹೆಣ್ಣು ಮಕ್ಕಳಿಗೆ ಸುರಕ್ಷಿತ ಎನ್ನುವ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದು ಈ ಕುರಿತಾದ ಸ್ಟೋರಿ ಇಲ್ಲಿದೆ.

ಲಿಟಲ್ ಬೆಂಗಳೂರು ಸ್ಟೋರೀಸ್ (littlebengalurustories) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೆಂಗಳೂರಿನಲ್ಲಿ ರಾತ್ರಿಯ ವೇಳೆ ಆಟೋದಲ್ಲಿ ತೆರಳಿದ್ದು ಈ ವೇಳೆ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಆಟೋದ ಒಳಗೆ ಬರೆದ ಸಾಲುಗಳನ್ನು ತೋರಿಸಿದ್ದಾರೆ. ನಾನೂ ಒಬ್ಬ ತಂದೆ, ಅಣ್ಣ ನಿಮ್ಮ ಸುರಕ್ಷತೆ ನನಗೆ ಮುಖ್ಯ. ಆರಾಮಾಗಿ ಕುಳಿತುಕೊಳ್ಳಿ” ಎಂದು ಬರೆದಿರುವುದನ್ನು ಕಂಡು ಖುಷಿ ಪಟ್ಟಿದ್ದಾರೆ. ಆ ಬಳಿಕ ಈ ಮಹಿಳೆ ನಾನು ರಾಪಿಡೋ ಆಟೋದಲ್ಲಿ ಪ್ರಯಾಣಿಸುತ್ತಿದ್ದೆ. ಬೆಂಗಳೂರಿನಲ್ಲಿ ರಾತ್ರಿ 12 ಗಂಟೆಯಾಗಿತ್ತು. ಆಗ ನಾನು ಇದನ್ನ ಓದಿದೆ. ನಿಜಕ್ಕೂ ನನಗೆ ಸುರಕ್ಷತಾ ಮನೋಭಾವ ಮೂಡಿತು. ಆರಾಮಾಗಿ ಓಡಾಡಬಹುದು ಅನಿಸಿತು ಎಂದು ಹೇಳಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:“ಇದು ಕಾರು, ವಿಮಾನವಲ್ಲ”: ನೀವು ಬರುತ್ತಿದ್ದೀರಾ? ಎಂದು ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಸಿಟ್ಟಾದ ಚಾಲಕ

ಈ ವಿಡಿಯೋ ಇದುವರೆಗೆ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಾನು ಇಪ್ಪತ್ತು ವರ್ಷದಿಂದ ಈ ಸಿಟಿಯನ್ನ ನೋಡುತ್ತಿದ್ದೇನೆ. ಪ್ರತಿಯೊಬ್ಬರಿಗೂ ಇದು ಸುರಕ್ಷಿತ ಸ್ಥಳ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಳ್ಳೆಯವರು ಇರ್ತಾರೆ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದ್ದಾರೆ. ಇನ್ನೊಬ್ಬರು, ಇವರೇ ನಿಜವಾದ ಬೆಂಗಳೂರು ಆಟೋ ಚಾಲಕರು. ಜವಾಬ್ದಾರಿ ಇದೇ ಅನ್ನೋದಕ್ಕೆ ಇದೆ ಉದಾಹರಣೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್