ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ ; ಬಿಹಾರದ ವ್ಯಕ್ತಿಯ ವಿಡಿಯೋ ವೈರಲ್​​​​

ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ನನ್ನನ್ನು ಕೀಳಾಗಿ ಕಾಣುವುದರ ಜೊತೆಗೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಹಾರದ ವ್ಯಕ್ತಿಯೊರ್ವ ಆರೋಪಿಸಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ ; ಬಿಹಾರದ ವ್ಯಕ್ತಿಯ ವಿಡಿಯೋ ವೈರಲ್​​​​
ಬೆಂಗಳೂರಿನಲ್ಲಿ ಪರಭಾಷಿಗರಿಗೆ ಕಿರುಕುಳ
Follow us
ಅಕ್ಷತಾ ವರ್ಕಾಡಿ
|

Updated on: Apr 13, 2023 | 4:29 PM

ಕನ್ನಡ ಮಾತಾನಾಡಲು ಬರದಿದ್ದರೇ ಅಪರಾಧವೇ? ಕನ್ನಡದಲ್ಲಿ ಮಾತನಾಡಲು ಸಾಧ್ಯವಾಗದ ಕಾರಣ ನನ್ನನ್ನು ಕೀಳಾಗಿ ಕಾಣುವುದರ ಜೊತೆಗೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಹಾರದ ವ್ಯಕ್ತಿಯೊರ್ವ ಆರೋಪಿಸಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಬೆಂಗಳೂರಿನ ಫುಡ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ವ್ಯಕ್ತಿಯೊಬ್ಬರು ಸ್ಥಳೀಯರಿಂದ ಭಾಷಾ ಆಧರಿತ ಕಿರುಕುಳದ ಬಗ್ಗೆ ದೂರು ನೀಡಿದ್ದು, ಕನ್ನಡದಲ್ಲಿ ಸಂವಹನ ಮಾಡಲು ಸಾಧ್ಯವಾಗದ ಕಾರಣ ನಿಂದಿಸಲಾಗಿದೆ ಮತ್ತು ಕೀಳಾಗಿ ಕಾಣಲಾಗಿದೆ ಜೊತೆಗೆ ಬೆದರಿಕೆ ಹಾಕಲಾಗಿದೆ ಎಂದು ವ್ಯಕ್ತಿ ಆರೋಪಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದಲ್ಲಿ, ವ್ಯಕ್ತಿ ನಾನು ಬಿಹಾರದ ಮುಜಾಫರ್‌ಪುರದಿಂದ ಬಂದು ಬೆಂಗಳೂರಿನಲ್ಲಿ ಫುಡ್ ಸ್ಟಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಸ್ಟಾಲ್‌ಗೆ ಬರುವ ಜನರಲ್ಲಿ ಸಾಕಷ್ಟು ಜನರಿಗೆ ಹಿಂದಿ ಮಾತನಾಡುವವರೆಂದರೆ ಏನೋ ದೊಡ್ಡ ಸಮಸ್ಯೆ. ಅವರು ನಮ್ಮ ಮೇಲೆ ಕರುಣೆ ತೋರಿಸದೆ ನಮ್ಮನ್ನು ನಿಂದಿಸುತ್ತಾರೆ ಮತ್ತು ಕೀಳಾಗಿ ಕಾಣುತ್ತಾರೆ. ಕರ್ನಾಟಕದಲ್ಲಿರುವ ಹಿಂದಿ ಮಾತನಾಡುವ ಜನರಿಗೆ ನ್ಯಾಯ ಒದಗಿಸಬೇಕೆಂದು ನಾನು ಸರ್ಕಾರವನ್ನು ವಿನಂತಿಸುತ್ತೇನೆ ಎಂದು ವಿಡಿಯೋದ ಮೂಲಕ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: 6 ಪತ್ನಿಯರ ಮುದ್ದಿನ ಗಂಡನಿಗೆ ಮೊದಲ ಮಗು ಯಾರಿಂದ ಪಡೆಯುವುದು ಎಂಬ ಚಿಂತೆಯಂತೆ..!

ಇದಲ್ಲದೇ ಸ್ಥಳೀಯರಿಂದ ತನಗೆ ಕೊಲೆ ಬೆದರಿಕೆ ಕೂಡ ಬಂದಿತ್ತು ಎಂದು ಹೇಳಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಜನರಿಗೆ ಹಿಂದಿ ಮಾತನಾಡುವ ಜನರ ಮೇಲೆ ಯಾಕಿಷ್ಟು ಸಿಟ್ಟು? ಬಿಹಾರಿಯಾಗಿರುವುದು ಅಪರಾಧವೇ? ನಾವು ಈ ದೇಶಕ್ಕೆ ಸೇರಿದವರಲ್ಲವೇ? ನಾನು ಸವಾಲು ಹಾಕುತ್ತೇನೆ, ಈಗ ಬಂದು ನನ್ನನ್ನು ಕೊಲ್ಲಲಿ, ನಾನು ಸಿದ್ಧನಿದ್ದೇನೆ ಎಂದು ವ್ಯಕ್ತಿ ಕಿರುಚುತ್ತಿರುವುದನ್ನು ಕಾಣಬಹುದು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಸುಬ್ರಹ್ಮಣ್ಯನಗರ ಪೊಲೀಸರು ಇದನ್ನು ಭಾಷಾ ಸಮಸ್ಯೆ ಎಂದು ತಳ್ಳಿಹಾಕಲಿಲ್ಲ. ಬಿಹಾರದ ವ್ಯಕ್ತಿಯ ಅಂಗಡಿಗೆ ಬಂದ ಮೂವರು ಹುಡುಗಿಯರು ಕನ್ನಡದಲ್ಲಿ ಮಾತಾನಾಡಿರುವುದರಿಂದ ಅವರು ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಆದರೆ ಆ ವ್ಯಕ್ತಿ ಅದನ್ನು ಭಾಷಾ ಸಮಸ್ಯೆಯಾಗಿ ಪರಿವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ