Viral: ರೈಲಿನಲ್ಲಿ ಹೃದಯಾಘಾತ, ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯವಂತ ವ್ಯಕ್ತಿಗಳು ಕೂಡಾ ಈ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತನ್ನ ಸಮಯ ಪ್ರಜ್ಞೆಯಿಂದ ತಕ್ಷಣ ಸಿಪಿಆರ್‌ ನೀಡುವ ಮೂಲಕ ಟಿಟಿಇ ಪ್ರಯಾಣಿಕನ ಪ್ರಾಣವನ್ನು ಉಳಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗಿದೆ.

Viral: ರೈಲಿನಲ್ಲಿ ಹೃದಯಾಘಾತ, ದೇವರಂತೆ ಬಂದು ಪ್ರಯಾಣಿಕನ ಪ್ರಾಣ ಉಳಿಸಿದ ಟಿಟಿಇ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 26, 2024 | 11:09 AM

ಇತ್ತೀಚಿನ ದಿನಗಳಲ್ಲಿ ವಯಸ್ಕರರು, ವೃದ್ಧರು ಮಾತ್ರವಲ್ಲದೆ ಮಕ್ಕಳೂ ಕೂಡಾ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಪ್ರತಿನಿತ್ಯ ಹಾರ್ಟ್‌ ಅಟ್ಯಾಕ್‌ ಪ್ರಕರಣದ ಸುದ್ದಿಗಳು ಕೇಳಿ ಬರುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ತಕ್ಷಣ ಸಿಪಿಆರ್‌ ನೀಡುವ ಮೂಲಕ ತನ್ನ ಸಮಯ ಪ್ರಜ್ಞೆಯಿಂದ ಟಿಟಿಇ ಪ್ರಯಾಣಿಕನ ಪ್ರಾಣವನ್ನು ಉಳಿಸಿದ್ದಾರೆ. ಇವರ ಈ ಸಮಯ ಪ್ರಜ್ಞೆ ಮತ್ತು ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಬಿಹಾರದ ದರ್ಭಾಂಗಾದಲ್ಲಿ ನಡೆದಿದ್ದು, ರೈಲ್ವೆ ಟಿಟಿಇ ತಮ್ಮ ಸಮಯ ಪ್ರಜ್ಞೆಯಿಂದ ಅಮೂಲ್ಯ ಜೀವವೊಂದನ್ನು ಉಳಿಸಿದ್ದಾರೆ. ಬಿಹಾರದ ದರ್ಭಾಂಗಾದಿಂದ ಉತ್ತರ ಪ್ರದೇಶದ ವಾರಣಾಸಿಗೆ ತೆರಳುತ್ತಿದ್ದ 11062 ಪವನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ವಿಷಯ ತಿಳಿದು ತಕ್ಷಣ ಆಗಮಿಸಿದ ಟಿಟಿಇ ಸವಿಂದ್‌ ಕುಮಾರ್‌ ವೈದ್ಯರಿಗೆ ಕರೆ ಮಾಡಿ ಅವರು ಕೊಟ್ಟ ಸಲಹೆಯಂತೆ ಸಿಪಿಆರ್‌ ನೀಡಿ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾರೆ. ನಂತರ ರೈಲು ಛಾಪ್ರಾ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಆ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು ರೈಲ್ವೆ ಸಚಿವಾಲಯ (Ministry of Railways) ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ರೈಲ್ವೆ ಪ್ರಯಾಣಿಕರೊಬ್ಬರಿಗೆ ಜೀವ ದಾನ ನೀಡಿದ ಟಿಟಿಇ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ವೈರಲ್‌ ವಿಡಿಯೋದಲ್ಲಿ ಟಿಟಿಇ ಸವಿಂದ್‌ ಕುಮಾರ್‌ ಅವರು ಹೃದಯಾಘಾತಕ್ಕೆ ತುತ್ತಾದ ಪ್ರಯಾಣಿಕರೊಬ್ಬರಿಗೆ ಸಿಪಿಆರ್‌ ನೀಡುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಉಪನ್ಯಾಸಕರು ಪಾಠ ಮಾಡುತ್ತಿದ್ರೂ ಡೋಂಟ್‌ ಕೇರ್‌, ಡೈರೆಕ್ಟ್‌ ಕ್ಲಾಸಿಗೆ ಬಂದು ಫುಡ್‌ ಪಾರ್ಸೆಲ್ ಕೊಟ್ಟು ಹೋದ ಡೆಲಿವರಿ ಬಾಯ್‌

ಸೆಪ್ಟೆಂಬರ್‌ 25 ರಂದು ಹಂಚಿಕೊಳ್ಳಲಾದ ಈ ವಿಡಿಯೋ 54 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಜೀವ ರಕ್ಷಕನಾಗಿ ಬಂದ ಟಿಟಿಇಗೆ ನನ್ನದೊಂದು ಸಲಾಂʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ರೈಲ್ವೆ ಸಚಿವಾಲಯಕ್ಕೆ ವಂದನೆಗಳುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಅಮೂಲ್ಯ ಜೀವವೊಂದನ್ನು ಉಳಿಸಿದ ಟಿಟಿಇ ಸವಿಂದ್‌ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Thu, 26 September 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ