Viral: ರೈಲಿನಲ್ಲಿ ಪ್ರಯಾಣಿಸುವಾಗ ಕಾಣಿಸಿಕೊಂಡ ಹೆರಿಗೆ ನೋವು; ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ವೈದ್ಯಕೀಯ ತಂಡ

ಕೆಲ ಸಮಯದ ಹಿಂದೆಯಷ್ಟೇ ತೆಲಂಗಾಣದಲ್ಲಿ ಚಲಿಸುತ್ತಿರುವ ಬಸ್ಸಿನಲ್ಲಿಯೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಸ್ಪಂದಿಸಿದ ವೈದ್ಯಕೀಯ ತಂಡ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 11, 2024 | 3:39 PM

ಚಲಿಸುತ್ತಿರುವ ಬಸ್‌, ಆಂಬ್ಯುಲೆನ್ಸ್‌ಗಳಲ್ಲಿ ಸುಸೂತ್ರವಾಗಿ ಹೆರಿಗೆ ನಡೆದ ಸುದ್ದಿಗಳನ್ನು ಆಗಾಗ್ಗೆ ಕೆಲುತ್ತಿರುತ್ತೇವೆ. ಕೆಲ ವಾರಗಳ ಹಿಂದೆಯಷ್ಟೆ ತೆಲಂಗಾಣದಲ್ಲಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗ ಮಧ್ಯದಲ್ಲಿಯೇ ಬಸ್ಸಿನ ಮಹಿಳಾ ಕಂಡಕ್ಟರ್‌ ಆಕೆಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆಯ ಸುದ್ದಿಯೊಂದು ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಸ್ಪಂದಿಸಿದ ವೈದ್ಯಕೀಯ ತಂಡ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಈ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

ಈ ಘಟನೆ ಬಿಹಾರದಲ್ಲಿ ನಡೆದಿದ್ದು, ದಿಬ್ರುಗಢ-ಚಂಡೀಗಢ 15903 ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ರೈಲಿನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಾಹಿತಿಗಳ ಪ್ರಕಾರ ಗರ್ಭಿಣಿ ರಹನಿ ದೇವಿ ಮತ್ತು ಆಕೆಯ ಪತಿ ಬರೌನಿಯಿಂದ ಮುಜಾಫರ್‌ ನಗರಕ್ಕೆ ದಿಬ್ರುಗಢ-ಚಂಡೀಗಢ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹೊರಟಿದ್ದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯ ಪತಿ ಟಿಟಿಇ ಮತ್ತು ಆರ್.ಫಿ.ಎಫ್‌ಗೆ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇಲಾಖೆಯಿಂದ ಮಾಹಿತಿ ಲಭಿಸಿದ ತಕ್ಷಣ ವಿಭಾಗೀಯ ರೈಲ್ವೆ ಆಸ್ಪತ್ರೆಯ ವೈದ್ಯೆ ಡಾ. ಪಾಯಲ್‌ ಮಿಶ್ರಾ ನೇತೃತ್ವದ ವೈದ್ಯಕೀಯ ತಂಡ ಸಮಸ್ತಿಪುರದ ಠಾಣೆಗೆ ಆಗಮಿಸಿ ಗರ್ಭಿಣಿ ಮಹಿಳೆಗೆ ರೈಲಿನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮವನ್ನು ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

ಇದನ್ನೂ ಓದಿ: ಸಹಪಾಠಿಯ ಹುಟ್ಟುಹಬ್ಬ, ಶಾಲೆಯಲ್ಲಿ ಭರ್ಜರಿ ಬೀಯರ್‌ ಪಾರ್ಟಿ ಮಾಡಿದ ಹೈಸ್ಕೂಲ್‌ ಹುಡುಗೀರು

ಸುರಕ್ಷಿತ ಹೆರಿಗೆಯ ನಂತರ ಬಾಣಂತಿ ಮಹಿಳೆಯನ್ನು ಸೂಕ್ತ ಸಮಾಲೋಚನೆ ನಡೆಸಿ ಔಷಧಿಗಳನ್ನು ನೀಡಿ ಮುಜಾಫರ್‌ ನಗರಕ್ಕೆ ಕಳುಹಿಸಲಾಗಿದೆ. ಡೆಲಿವರಿ ಆಗುವವರೆಗೂ ರೈಲು ಸುಮಾರು 45 ನಿಮಿಷಗಳ ಕಾಲ ಸಮಸ್ತಿಪುರ ನಿಲ್ದಾಣದಲ್ಲಿಯೇ ನಿಂತಿತ್ತು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Wed, 11 September 24

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ