ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶ್ರೀ ರಾಮನ ಚಿತ್ರಗಳನ್ನು ಒಳಗೊಂಡಿರುವ ಕಾಗದದ ಪ್ಲೇಟ್​​ಗಳಲ್ಲಿ ಬಿರಿಯಾನಿ ಬಡಿಸಿ ಕೊಡುತ್ತಿರುವುದನ್ನು ಕಾಣಬಹುದು. ಇದೀಗ ಬಿರಿಯಾನಿ ಮಾರಾಟ ಮಾಡುವವರ ವಿರುದ್ಧ ಸ್ಥಳೀಯ ಬಜರಂಗದಳದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಹೋಟೆಲ್​ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ
ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ
Follow us
ಅಕ್ಷತಾ ವರ್ಕಾಡಿ
|

Updated on: Apr 24, 2024 | 5:02 PM

ದೆಹಲಿ: ಶ್ರೀರಾಮನ ಚಿತ್ರವಿರುವ ಕಾಗದದ ಪ್ಲೇಟ್‌ಗಳಲ್ಲಿ ಬಿರಿಯಾನಿ ಬಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಜಹಾಂಗೀರ್‌ಪುರಿಯಲ್ಲಿರುವ ಬಿರಿಯಾನಿ ಹೋಟೆಲ್​​​​​ ಒಂದರಲ್ಲಿ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಸ್ಥಳೀಯ ಪೊಲೀಸರು ಹೋಟೆಲ್​ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶ್ರೀ ರಾಮನ ಚಿತ್ರಗಳನ್ನು ಒಳಗೊಂಡಿರುವ ಕಾಗದದ ಪ್ಲೇಟ್​​ಗಳನ್ನು ಕಾಣಬಹುದು. ಸ್ಥಳೀಯ ಬಜರಂಗದಳದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಲ್ಲದೇ ಬಿರಿಯಾನಿ ಮಾರಾಟ ಮಾಡುವುದನ್ನು ವಿರೋಧಿಸಿ ಗಲಾಟೆ ನಡೆದಿದೆ. ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಲ್ಲಿನ ಅವ್ಯವಸ್ಥೆಯನ್ನು ನಿಭಾಯಿಸಿ ಅಂಗಡಿ ಮಾಲೀಕರನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Acid Attack: ಪ್ರೀತಿಸಿ ಮೋಸ ಮಾಡಿದ ಪ್ರಿಯಕರನ ಮೇಲೆ ಆ್ಯಸಿಡ್​ ಎರಚಿದ ಯುವತಿ!

ವರದಿಗಳ ಪ್ರಕಾರ, ಪೇಪರ್ ಪ್ಲೇಟ್‌ಗಳ ಬಂಡಲ್‌ನಲ್ಲಿದ್ದ ಒಂದು ಅಥವಾ ಎರಡು ಪ್ಲೇಟ್‌ಗಳು ಭಗವಾನ್ ರಾಮನ ಫೋಟೋಗಳನ್ನು ಹೊಂದಿದ್ದವು. ಪ್ರಸ್ತುತ, ಜಹಾಂಗೀರ್ಪುರಿ ಪೊಲೀಸ್ ಠಾಣೆ ಸಂಪೂರ್ಣ ಘಟನೆಯ ತನಿಖೆ ನಡೆಸುತ್ತಿದೆ.ಆರೋಪಿಗಳು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಇದನ್ನು ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಇದನ್ನು ಮಾಡಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.ಆಹಾರ ಮಾರಾಟಕ್ಕಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಘಟನೆ ಬೆಳಕಿಗೆ ಬಂದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ