ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನ ಕಟ್ಟಿಸಿದ ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ

PM Narendra Modi Temple: ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಲು ದೇಗುಲ ಕಟ್ಟಿಸಲಾಗಿದೆ ಎಂದು ಬೆಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಹೇಳಿದ್ದಾರೆ.

ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನ ಕಟ್ಟಿಸಿದ ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ
ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನ ಕಟ್ಟಿಸಿದ ಬಿಜೆಪಿ ಕಾರ್ಯಕರ್ತ
Follow us
TV9 Web
| Updated By: shruti hegde

Updated on:Aug 18, 2021 | 9:46 AM

ಪುಣೆ: ಔಧ್​ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ನರೇಂದ್ರ ಮೋದಿಯವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಲು ದೇಗುಲ ಕಟ್ಟಿಸಲಾಗಿದೆ ಎಂದು ಬೆಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಹೇಳಿದ್ದಾರೆ.

ಟ್ವಿಟರ್​ನಲ್ಲಿ ಪ್ರತಿಮೆಯ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಪತ್ರಕರ್ತ ಅಲಿ ಶೇಖ್ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಔದ್ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಗುಲವನ್ನು ನಿರ್ಮಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಒಟ್ಟು 1.5 ಲಕ್ಷ ರೂಪಾಯಿ ಖರ್ಚಾಗಿದೆ. ಸಂಪೂರ್ಣ ಕೆಲಸ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಜಮ್ಮು- ಕಾಶ್ಮೀರಕ್ಕೆ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿ ರದ್ದುಗೊಳಿಸಲಾಗಿದೆ ಎಂದು ಉದ್ಯಮಿಯೂ ಆಗಿರುವ ಮಯೂರ್ ಮುಂಡೆ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರಿಗೆ ದೇಗುಲ ಇರಬೇಕು ಎಂದು ಭಾವಿಸಿದ್ದೆ. ದೇಗುಲವನ್ನು ನನ್ನ ಸ್ವಂತ ಜಾಗದಲ್ಲಿ ನಿರ್ಮಿಸಬೇಕು ಎಂಬ ಆಸೆ ಹೊಂದಿದ್ದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಜೈಪುರದಿಂದ ಕೆಂಪು ಮಾರ್ಬಲ್ ತರಿಸಿ ಮೋದಿಯವರ ಪ್ರತಿಮೆ ನಿರ್ಮಿಸಲಾಗಿದೆ. ಒಟ್ಟು 1.6 ಲಕ್ಷ ರೂಪಾಯಿ ಖರ್ಚಾಗಿದೆ. ಪ್ರತಿಮೆ ಸ್ಥಾಪನೆಯ ಪಕ್ಕದಲ್ಲಿಯೇ ಮೋದಿಯವರ ಕುರಿತಾಗಿ ಕವಿತೆಯನ್ನು ಪ್ರದರ್ಶಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್​ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ

PHOTOS: ಕೊಟ್ಟ ಮಾತು ಉಳಿಸಿಕೊಂಡ ಮೋದಿ: ಪಿವಿ ಸಿಂಧೂ ಜೊತೆ ಐಸ್ ಕ್ರೀಂ ಸವಿದ ಪ್ರಧಾನಿ

Published On - 9:36 am, Wed, 18 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್