ಪುಣೆ: ಔಧ್ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ದೇವಸ್ಥಾನವನ್ನು ಕಟ್ಟಿಸಿದ್ದಾರೆ. ನರೇಂದ್ರ ಮೋದಿಯವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಲು ದೇಗುಲ ಕಟ್ಟಿಸಲಾಗಿದೆ ಎಂದು ಬೆಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಹೇಳಿದ್ದಾರೆ.
ಟ್ವಿಟರ್ನಲ್ಲಿ ಪ್ರತಿಮೆಯ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಪತ್ರಕರ್ತ ಅಲಿ ಶೇಖ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಔದ್ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಗುಲವನ್ನು ನಿರ್ಮಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಒಟ್ಟು 1.5 ಲಕ್ಷ ರೂಪಾಯಿ ಖರ್ಚಾಗಿದೆ. ಸಂಪೂರ್ಣ ಕೆಲಸ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಜಮ್ಮು- ಕಾಶ್ಮೀರಕ್ಕೆ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿ ರದ್ದುಗೊಳಿಸಲಾಗಿದೆ ಎಂದು ಉದ್ಯಮಿಯೂ ಆಗಿರುವ ಮಯೂರ್ ಮುಂಡೆ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರಿಗೆ ದೇಗುಲ ಇರಬೇಕು ಎಂದು ಭಾವಿಸಿದ್ದೆ. ದೇಗುಲವನ್ನು ನನ್ನ ಸ್ವಂತ ಜಾಗದಲ್ಲಿ ನಿರ್ಮಿಸಬೇಕು ಎಂಬ ಆಸೆ ಹೊಂದಿದ್ದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ವಿಶೇಷವಾಗಿ ಜೈಪುರದಿಂದ ಕೆಂಪು ಮಾರ್ಬಲ್ ತರಿಸಿ ಮೋದಿಯವರ ಪ್ರತಿಮೆ ನಿರ್ಮಿಸಲಾಗಿದೆ. ಒಟ್ಟು 1.6 ಲಕ್ಷ ರೂಪಾಯಿ ಖರ್ಚಾಗಿದೆ. ಪ್ರತಿಮೆ ಸ್ಥಾಪನೆಯ ಪಕ್ಕದಲ್ಲಿಯೇ ಮೋದಿಯವರ ಕುರಿತಾಗಿ ಕವಿತೆಯನ್ನು ಪ್ರದರ್ಶಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
Mayur Munde a #BJP worker from Pune has built a temple of Prime Minister Narendra Modi in Aundh area of Pune. Spent Rs 1.5 Lakhs and 6 months to get the work completed.#Pune pic.twitter.com/uHaOPAG8LI
— Ali shaikh (@alishaikh3310) August 17, 2021
ಇದನ್ನೂ ಓದಿ:
ಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ; ಒಂದು ಸೂಟ್ಕೇಸ್ ಬಟ್ಟೆ ಮಾತ್ರ ಅವರ ಆಸ್ತಿ: ಶೋಭಾ ಕರಂದ್ಲಾಜೆ
PHOTOS: ಕೊಟ್ಟ ಮಾತು ಉಳಿಸಿಕೊಂಡ ಮೋದಿ: ಪಿವಿ ಸಿಂಧೂ ಜೊತೆ ಐಸ್ ಕ್ರೀಂ ಸವಿದ ಪ್ರಧಾನಿ
Published On - 9:36 am, Wed, 18 August 21