ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್​ ಕೇಳಿದ ಗಂಡ!

ಬಿಳಿಯ ಬಣ್ಣದ ಪೋಷಕರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ತನಗೆ ಕಪ್ಪು ಮಗು ಹುಟ್ಟಿದ್ದರಿಂದ ಹೆಂಡತಿಯ ಚಾರಿತ್ರ್ಯದ ಮೇಲೆ ಅನುಮಾನಗೊಂಡ ಗಂಡ ಆಕೆಯಿಂದ ಡೈವೋರ್ಸ್​ ಕೇಳಿದ್ದಾನೆ. ಅಲ್ಲದೆ, ಡಿಎನ್ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ.

ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿ ಮೇಲೆ ಅನುಮಾನ; ಡೈವೋರ್ಸ್​ ಕೇಳಿದ ಗಂಡ!
ಮಗು

Updated on: Nov 13, 2024 | 3:48 PM

ಬೀಜಿಂಗ್: ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ ಗಂಡ ಡಿಎನ್​ಎ ಪರೀಕ್ಷೆಗೆ ಒತ್ತಾಯಿಸಿದ್ದಾನೆ. ಹೆಂಡತಿಯ ಚಾರಿತ್ರ್ಯ ಸರಿಯಿಲ್ಲವೆಂದು ಆತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ಚೀನಾ ಟೈಮ್ಸ್ ವರದಿಯ ಪ್ರಕಾರ, ಸುಮಾರು 1 ತಿಂಗಳ ಹಿಂದೆ 30 ವರ್ಷದ ಮಹಿಳೆ ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಅವರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ಆಕೆ ಮತ್ತು ಆಕೆಯ ಗಂಡ ಬಿಳಿ ಬಣ್ಣದವರಾಗಿದ್ದು, ಕಪ್ಪು ಮಗು ಹೇಗೆ ಹುಟ್ಟಿತು ಎಂದು ಆಕೆಯ ಪತಿ ಆಘಾತಕ್ಕೊಳಗಾದ. ಇದೇ ಕಾರಣವನ್ನಿಟ್ಟುಕೊಂಡು ಆತ ವಿಚ್ಛೇದನ ಕೋರಿದ್ದಾನೆ.

ಇದನ್ನೂ ಓದಿ: Viral: ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿ ಪ್ರಯಾಣಿಕನ ಹುಚ್ಚಾಟ; ವಿಡಿಯೋ ವೈರಲ್‌

ಈ ಘಟನೆಯನ್ನು ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಸಲಹೆ ಕೇಳಿದ್ದಾರೆ. ತನ್ನ ಪತಿ ಮೊದಲು ಮಗುವನ್ನು ನೋಡಲು ಬಂದಾಗ ಅವನು ಆಶ್ಚರ್ಯಚಕಿತನಾದನು. ಕಪ್ಪು ಬಣ್ಣದ್ದೆಂಬ ಕಾರಣಕ್ಕೆ ಮಗುವನ್ನು ಹಿಡಿಯಲು ನಿರಾಕರಿಸಿದನು ಎಂದು ಆಕೆ ವಿವರಿಸಿದ್ದಾಳೆ. ನಂತರ ಡಿಎನ್ಎ ಪರೀಕ್ಷೆ ನಡೆಸಿ ಮಗು ಆತನಿಗೇ ಹುಟ್ಟಿದ್ದು ಎಂದು ದೃಢಪಡಿಸುವಂತೆ ಒತ್ತಾಯಿಸಿದನು. ಅದು ನಮ್ಮಿಬ್ಬರದೇ ಮಗು ಎಂದು ಎಷ್ಟೇ ಹೇಳಿದರೂ ಆತ ಕೇಳಲಿಲ್ಲ ಎಂದು ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿ ನಿಂದಿಸಿದ ಮಂಗಳಮುಖಿ; ವಿಡಿಯೋ ವೈರಲ್

ಮಗುವಿನ ಕಪ್ಪು ಮೈಬಣ್ಣದಿಂದ ತನಗೂ ಆಶ್ಚರ್ಯವಾಯಿತು ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಆದರೆ, ಮಗುವಿನ ಬಣ್ಣದ ಕಾರಣಕ್ಕೆ ನಾನು ಹೆತ್ತ ಮಗುವನ್ನು ಕೈಬಿಡುವುದಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ. ಆಕೆಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಈ ವಿಷಯವನ್ನು ಚರ್ಚಿಸಿದರೆ, ಇತರರು ಬಿಳಿ ಚರ್ಮದ ದಂಪತಿಗಳು ಕಪ್ಪು ಚರ್ಮದ ಮಗುವನ್ನು ಹೊಂದುವುದು ಅಸಾಮಾನ್ಯವೇನಲ್ಲ ಎಂದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us