AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿದ್ದು, ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಗೋಧಿ  ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ
ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on:Apr 24, 2024 | 5:57 PM

Share

ಉತ್ತರ ಪ್ರದೇಶ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಮಾಹಿತಿಗಳ ಪ್ರಕಾರ 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದೆ. ಪರಿಣಾಮ ಟಾರ್ಪಾಲ್​​ ಸಮೇತ ಬಾಲಕ ಕಟಾವು ಯಂತ್ರದೊಳಗೆ ಬಾಲಕ ಬಿದ್ದಿದ್ದಾನೆ. ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಗ್ರಾಮಸ್ಥರು ಓಡೋಡಿ ಬಂದಿದ್ದರು ಕೂಡ ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿದೆ.

ಇದನ್ನೂ ಓದಿ: ಬಿರಿಯಾನಿ ಬಡಿಸಲು ಶ್ರೀರಾಮನ ಚಿತ್ರವಿರುವ ಪ್ಲೇಟ್​ ಬಳಕೆ; ಹೋಟೆಲ್​​ ಮಾಲೀಕನ ಬಂಧನ

ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:50 pm, Wed, 24 April 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು