Viral Video: ಸ್ಟೈಲ್ ಆಗಿ ಡಾನ್ಸ್ ಮಾಡೋದಕ್ಕೆ ಹೋಗಿ ವೇದಿಕೆ ಮೇಲೆ ಪಲ್ಟಿಯಾಗಿ ಬಿದ್ದ ಯುವಕನ ವಿಡಿಯೋ ವೈರಲ್

ನಗಿಸುವ ದೃಶ್ಯಗಳು ಮನಸ್ಸಿಗೆ ಹೆಚ್ಚು ಇಷ್ಟವಾಗುತ್ತವೆ. ಅಂಥಹ ಕೆಲವು ವಿಡಿಯೋಗಳನ್ನು ಮತ್ತೆ ಮತ್ತೆ ನೋಡಬೇಕು ಅನಿಸುತ್ತದೆ. ಅಂಥಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video: ಸ್ಟೈಲ್ ಆಗಿ ಡಾನ್ಸ್ ಮಾಡೋದಕ್ಕೆ ಹೋಗಿ ವೇದಿಕೆ ಮೇಲೆ ಪಲ್ಟಿಯಾಗಿ ಬಿದ್ದ ಯುವಕನ ವಿಡಿಯೋ ವೈರಲ್
ಸ್ಟೈಲ್ ಆಗಿ ಡಾನ್ಸ್ ಮಾಡೋದಕ್ಕೆ ಹೋಗಿ ವೇದಿಕೆ ಮೇಲೆ ಪಲ್ಟಿಯಾಗಿ ಬಿದ್ದ ಯುವಕ
Follow us
TV9 Web
| Updated By: shruti hegde

Updated on: Sep 27, 2021 | 3:16 PM

ಸಂತೋಷವೇ ಕಳೆಗಟ್ಟಿರುವ ಮದುವೆ ಸಮಾರಂಭಗಳಲ್ಲಿ ನಡೆಯುವ ಅದೆಷ್ಟೋ ದೃಶ್ಯಗಳು ಹೆಚ್ಚು ಮನ ಕದಿಯುತ್ತವೆ. ಅದರಲ್ಲಿಯೂ ನಗಿಸುವ ದೃಶ್ಯಗಳು ಮನಸ್ಸಿಗೆ ಹೆಚ್ಚು ಇಷ್ಟವಾಗುತ್ತವೆ. ಅಂಥಹ ಕೆಲವು ವಿಡಿಯೋಗಳನ್ನು ಮತ್ತೆ ಮತ್ತೆ ನೋಡಬೇಕು ಅನಿಸುತ್ತದೆ. ಅಂಥಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತನ್ನ ಗೆಳೆಯನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಯುವಕನೊಬ್ಬ ವೇದಿಕೆಯಲ್ಲಿ ಸಕತ್ ಡಾನ್ಸ್ ಮಾಡಲು ಮುಂದಾಗುತ್ತಾನೆ. ಸ್ಟೈಲ್​ಆಗಿ ನೃತ್ಯ ಮಾಡಲು ಮ್ಯೂಸಿಕ್ ಕೂಡಾ ಪ್ರಾರಂಭವಾಗಿದೆ. ಆತ ನೃತ್ಯ ಮಾಡುತ್ತಿದ್ದಂತೆಯೇ ಪಲ್ಟಿಯಾಗಲು ಪ್ರಯತ್ನಿಸುತ್ತಾನೆ. ಹಿಂದಿದ್ದ ಪರದೆಗೆ ಕಾಲು ಸಿಕ್ಕಿ ವೇದಿಕೆಯ ಮೇಲೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಅಗಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ನಂತರ ಇತರ ಸಾಮಾಜಿಕ ವೇದಿಕೆಗಳಲ್ಲಿಯೂ ಸಹ ಹಂಚಿಕೊಳ್ಳಲಾಗುತ್ತಿದೆ. ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನರು ವಿಡಿಯೋವನ್ನು ಲೈಕ್ ಮಾಡಿದ್ದಾರೆ. ದೃಶ್ಯಕ್ಕೆ ಕಾಮೆಂಟ್ ಮಾಡುವ ಮೂಲಕ ನೆಟ್ಟಿಗರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಓ ಸಹೋದರಾ ಏನಾಯ್ತು? ಎಂದು ಓರ್ವರು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ನಗುವಿನ ಇಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ಹಂಚಿಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ವಿಡಿಯೋಗಳಲ್ಲಿ ಕೆಲವು ತಮಾಷೆಯಾಗಿದ್ದರೆ, ಇನ್ನು ಕೆಲವು ಅಚ್ಚರಿಯನ್ನುಂಟು ಮಾಡುತ್ತವೆ. ನಗು ತರಿಸುವ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ. ಅವುಗಳಲ್ಲಿ ಎಚ್ಚರಿಕೆಯ ಸಂದೇಶವನ್ನು ಸಾರುವು ದೃಶ್ಯಗಳೂ ಸಹ ಹರಿದಾಡುತ್ತವೆ. ಈ ತಮಾಷೆಯ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಶಾಪಿಂಗ್​ಗೆಂದು 10 ನಿಮಿಷ ಜೀಪ್ ನಿಲ್ಲಿಸಿ ಹೋದ ವ್ಯಕ್ತಿ; ಮರಳಿದಾಗ ಎದುರುಗೊಂಡಿದ್ದು ಜೇನುನೊಣಗಳು!

Viral Video: ಎಲ್ಲೆಡೆ ಸಖತ್ ಸದ್ದು ಮಾಡ್ತಿದೆ ಈ ‘ದೇಸಿ ಮೈಕಲ್ ಜಾಕ್ಸನ್’ ನೃತ್ಯ; ವಿಡಿಯೊ ನೋಡಿ

(Boy fall down after style dance in wedding stage video goes viral)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ