ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

Updated on: Sep 08, 2024 | 4:11 PM

ರಸ್ತೆ ಅಪಘಾತದ ವೇಳೆ ತಾಯಿಯ ಮೇಲೆ ಆಟೋ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ ತಾಯಿಯ ರಕ್ಷಣೆಗೆ ಧಾವಿಸಿದ್ದಾಳೆ. ಕೆಳಗಡೆ ಸಿಲುಕಿದ್ದ ತಾಯಿಯನ್ನು ಉಳಿಸಲು ಬಾಲಕಿ ಆಟೋವನ್ನೇ ಎತ್ತಿದ್ದಾಳೆ. ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮಂಗಳೂರು: ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ ತಾಯಿಯ ರಕ್ಷಣೆಗೆ ಧಾವಿಸಿದ್ದಾಳೆ. ಕೆಳಗಡೆ ಸಿಲುಕಿದ್ದ ತಾಯಿಯನ್ನು ಉಳಿಸಲು ಬಾಲಕಿ ಆಟೋವನ್ನೇ ಎತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಘಟನೆಗೆ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 08, 2024 04:06 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More