AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕುಡಿದು ಟೈಟ್‌ ಆದ ಮಾಲೀಕನನ್ನು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋದ ಗೂಳಿ; ವಿಡಿಯೋ ವೈರಲ್‌

ಸಾಕು ಪ್ರಾಣಿಗಳನ್ನು ನಾವು ಎಷ್ಟು ಪ್ರೀತಿಸುತ್ತೇವೆಯೋ ಅದಕ್ಕಿಂತ 10 ಪಟ್ಟು ಅವುಗಳು ನಮ್ಮ ಮೇಲೆ ನಿಷ್ಠೆ, ಪ್ರೀತಿಯನ್ನು ತೋರಿಸುತ್ತವೆ. ಮಾಲೀಕ ಹಾಗೂ ಸಾಕು ಪ್ರಾಣಿಗಳ ಬಾಂಧವ್ಯಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಕಂಠ ಪೂರ್ತಿ ಕುಡಿದು ಟೈಟ್‌ ಆದ ಮಾಲೀಕ ಎಣ್ಣೆ ಮತ್ತಿನಲ್ಲಿ ಬೀಳದಂತೆ ಆತನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Jan 03, 2025 | 12:09 PM

Share

ಕಂಠಪೂರ್ತಿ ಕುಡಿದು ಇತರರೊಂದಿಗೆ ಜಗಳವಾಡಿ ರಂಪಾಟ ಮಾಡುವವರು ಒಂದೆಡೆಯಾದರೆ, ಕುಡಿದು ತೂರಾಡಿ ರೋಡ್‌ ಮಧ್ಯೆ, ಚರಂಡಿಯಲ್ಲಿ ಬೀಳುವವರು ಇನ್ನೊಂದು ಕಡೆ. ಕುಡುಕರ ಅವಾಂತರಗಳಿಗೆ ಸಂಬಂಧಿಸಿದ ಇಂತಹ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲೂ ಕೂಡಾ ಹರಿದಾಡುತ್ತಿರುತ್ತವೆ. ಇದೀಗ ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ಕಂಠಪೂರ್ತಿ ಕುಡಿದು ನಡೆದಾಡಲು ಕೂಡಾ ಸಾಧ್ಯವಾಗದ ಮಾಲೀಕನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಹೌದು ಕುಡಿದು ಎಲ್ಲೂ ಬೀಳಬಾರದೆಂದು ಗೂಳಿ ಸ್ವತಃ ಮಾಲೀಕನನ್ನು ಕರೆದುಕೊಂಡು ಹೋಗಿದೆ. ಮಾಲೀಕ ಹಾಗೂ ಗೂಳಿಯ ಬಾಂಧವ್ಯದ ಮುದ್ದಾದ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಬ್ರೆಜಿಲ್‌ ದೇಶದಲ್ಲಿ ನಡೆದ ಘಟನೆ ಇದಾಗಿದ್ದು, ನಿಷ್ಠಾವಂತ ಗೂಳಿಯೊಂದು ಕಂಠಪೂರ್ತಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಮನೆಗೆ ಜೋಪಾನವಾಗಿ ಕರೆದುಕೊಂಡು ಹೋಗಿದೆ. AMAZINGNATURE ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ದೃಶ್ಯವನ್ನು ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕುಡಿದು ಟೈಟ್‌ ಆಗಿದ್ದ ಮಾಲೀಕನನ್ನು ಗೂಳಿಯೊಂದು ನಡುರಸ್ತೆಯಲ್ಲಿ ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮುದ್ದು ಕಂದನ ಮೊದಲ ಹೆಜ್ಜೆ ಕಂಡು ಸಂಭ್ರಮಿಸಿದ ತಾಯಿ; ಮುದ್ದಾದ ವಿಡಿಯೋ ಹಂಚಿಕೊಂಡ ಆನಂದ್‌ ಮಹೀಂದ್ರಾ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಷ್ಟು ಮುದ್ದಾಗಿದೆ ಈ ದೃಶ್ಯʼ ಎಂಬ ಕಾಮೆಂಟ್ಸ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದಲ್ಲವೇ ನಿಜವಾದ ಪ್ರೀತಿ ಅಂದ್ರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಗೂಳಿಗೆ ನಿಷ್ಠೆಯನ್ನು ಕಂಡು ಫುಲ್‌ ಫಿದಾ ಆಗಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು