AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇದಿಕೆಯ ಮೇಲೆ ಪುಶ್ ಆಪ್ ಮಾಡಿದ ವಧು ವರರು , ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ಕ್ಷಣ ಮಾತ್ರದಲ್ಲಿ ನೋಡುಗರ ಮನಸ್ಸನ್ನು ಗೆದ್ದು ಬಿಡುತ್ತದೆ. ಕೆಲವು ವಿಡಿಯೋಗಳು ಅಚ್ಚರಿ ಮೂಡಿಸುತ್ತದೆ. ಇದೀಗ ಇಂತಹದ್ದೇ ಒಂದು ವಿಡಿಯೋವು ವೈರಲ್ ಆಗಿದ್ದು, ಇದರಲ್ಲಿ ನವ ದಂಪತಿಗಳು ವೇದಿಕೆಯ ಮೇಲೆ ಪುಶ್ ಅಪ್ ಮಾಡಿದ್ದಾರೆ. ಈ ದೃಶ್ಯವು ಅಲ್ಲಿ ಸೇರಿದ್ದ ಅತಿಥಿಗಳು ಹಾಗೂ ಸಂಬಂಧಿಕರಿಗೂ ಶಾಕ್ ಆಗುವಂತೆ ಮಾಡಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಾಯಿನಂದಾ
| Edited By: |

Updated on: Dec 14, 2024 | 2:34 PM

Share

ಮದುವೆ ಅಂದ್ಮೇಲೆ ಡ್ಯಾನ್ಸ್‌, ಹಾಡು, ಮೋಜು-ಮಸ್ತಿ, ತಮಾಷೆಯಂತೂ ಇದ್ದೆ ಇರುತ್ತದೆ. ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವಧು-ವರರ ನೃತ್ಯ ಮಾಡುವ ಮೂಲಕ ಗಮನ ಸೆಳೆಯುವುದು ಸರ್ವೇ ಸಾಮಾನ್ಯ. ಈ ವಧು-ವರರ ನೃತ್ಯ ಸೇರಿದಂತೆ ಇನ್ನಿತ್ತರ ಖುಷಿಯ ಕ್ಷಣದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ದಂಪತಿಗಳಿಬ್ಬರೂ ಸ್ಟೇಜ್ ನಲ್ಲೇ ಪುಶ್ ಅಪ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಹಳೆಯ ವಿಡಿಯೋವು ಇದಾಗಿದ್ದು, ಇದೀಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು parulgragmakeup ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ಇಪ್ಪತ್ತೆಂಟು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದೆ. ಈ ವಿಡಿಯೋದಲ್ಲಿ ದಂಪತಿಗಳು ಫಿಟ್ನೆಸ್ ಕೋಚ್ ಅಕ್ಷಿತಾ ಅರೋರಾ ಮಹಾಜನ್ ಮತ್ತು ಅವರ ಪತಿ ಆದಿತ್ಯ ಮಹಾಜನ್ ಎಂದು ಗುರುತಿಸಲಾಗಿದೆ. ಈ ಜೋಡಿಯ ಮದುವೆ ಸಂದರ್ಭದ ಸೆರೆ ಹಿಡಿದ ವಿಡಿಯೋ ಇದಾಗಿದ್ದು ಮತ್ತೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಚಾಲಕ; ವಿಡಿಯೋ ವೈರಲ್‌

ಈ ವಿಡಿಯೋದಲ್ಲಿ ಸಾಂಪ್ರದಾಯಿಕ ಕೆಂಪು ಲೆಹೆಂಗಾ ಚೋಲಿ ಮತ್ತು ಭಾರೀ ಚಿನ್ನದ ಆಭರಣಗಳನ್ನು ಧರಿಸಿರುವ ಅಕ್ಷಿತಾ, ಶೆರ್ವಾನಿ ಧರಿಸಿದ್ದ ಆದಿತ್ಯನೊಂದಿಗೆ ಮದುವೆಯ ವೇದಿಕೆಯಲ್ಲಿಯೇ ಪುಷ್-ಅಪ್ ಮಾಡುವುದನ್ನು ನೋಡಬಹುದಾಗಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ‘ಆರೋಗ್ಯಕರ ಮದುವೆ’ ಎಂದಿದ್ದಾರೆ. ಇನ್ನೊಬ್ಬರು, ‘ಹೊಸತನದಿಂದ ಕೂಡಿದ ಜೋಡಿಗಳು, ದೇವರು ಒಳ್ಳೇದು ಮಾಡಲಿ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ