AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದುಬಾರಿ ಉಡುಗೊರೆ ಬೇಕಿಲ್ಲ; ಸಹೋದರಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ವಿಸಿಟ್ ನೀಡಿ ಖುಷಿ ಪಡಿಸಿದ ಸಹೋದರ

ಸಂಬಂಧಗಳು ಯಾವುದೇ ಇರಲಿ, ದುಬಾರಿ ಉಡುಗೊರೆ ಬೇಕಿಲ್ಲ. ಕಾಳಜಿ ತುಂಬಿದ ಮಾತು, ಪ್ರೀತಿ ತೋರುವ ವ್ಯಕ್ತಿಗಳಿದ್ದರೆ ಸಾಕು. ಇದೀಗ ಈ ದೃಶ್ಯವು ವಯಸ್ಸು ಏರಿದರೂ ಬದಲಾಗದ ಅಕ್ಕ ತಮ್ಮ ಬಾಂಧವ್ಯವನ್ನು ತೋರಿಸುತ್ತಿದೆ. ಅಕ್ಕನ ಹುಟ್ಟುಹಬ್ಬಕ್ಕೆ ತಮ್ಮನು ಸರ್ಪ್ರೈಸ್ ವಿಸಿಟ್ ನೀಡಿದ್ದಾನೆ. ಈ ಹೃದಯಕ್ಕೆ ಹತ್ತಿರವಾಗುವ ಈ ವಿಡಿಯೋ ಕಂಡು ನೆಟ್ಟಿಗರ ಕಣ್ಣು ಒದ್ದೆಯಾಗಿದೆ.

Video: ದುಬಾರಿ ಉಡುಗೊರೆ ಬೇಕಿಲ್ಲ; ಸಹೋದರಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ವಿಸಿಟ್ ನೀಡಿ ಖುಷಿ ಪಡಿಸಿದ ಸಹೋದರ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 27, 2026 | 4:05 PM

Share

ಸಹೋದರ ಸಹೋದರಿಯರ ನಡುವೆ ಬಾಲ್ಯದಲ್ಲಿ ಇದ್ದ ಒಡನಾಟ, ಪ್ರೀತಿ ವಿಶ್ವಾಸವು ಬೆಳೆಯುತ್ತಾ ಹೋದಂತೆ ಕಡಿಮೆಯಾಗುತ್ತದೆ. ಎಲ್ಲರೂ ಅವರವರ ಬದುಕಿನ ದಾರಿ ನೋಡುತ್ತಾರೆ. ಆದರೆ ಆ ಪ್ರೀತಿ, ಕಾಳಜಿ ಇನ್ನು ಜೀವಂತವಾಗಿದ್ದರೆ ಅದಕ್ಕಿಂತ ಇನ್ನೇನು ಬೇಕು. ಇದೀಗ ಅಕ್ಕನ ಹುಟ್ಟುಹಬ್ಬಕ್ಕೆ (birthday) ತಮ್ಮನು ಸರ್ಪ್ರೈಸ್ ನೀಡಿದ್ದಾನೆ. ಅಕ್ಕನಿದ್ದ ಮನೆಗೆ ವಿಸಿಟ್ ಕೊಟ್ಟು ಆಕೆಯ ಮೊಗದಲ್ಲಿ ನಗು ಮೂಡಿಸಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.

ಅಕ್ಕನ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ವಿಸಿಟ್ ಕೊಟ್ಟ ತಮ್ಮ

ಆರತಿ ನಿರ್ಮಲ್ (Arti Nirmal) ಹೆಸರಿನ ಎಕ್ಸ್ ಖಾತೆಯಲ್ಲಿ ಅಕ್ಕ ತಮ್ಮ ಸುಮಧುರ ಬಾಂಧವ್ಯವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಕ್ಕನ ಹುಟ್ಟುಹಬ್ಬದ ದಿನ ಆಕೆಯ ಮನೆಗೆ ಸರ್ಪ್ರೈಸ್ ವಿಸಿಟ್ ನೀಡಿದ್ದಾನೆ. ವಯಸ್ಸಾದ ಮಹಿಳೆ ಬಾಗಿಲು ತೆರೆಯುತ್ತಿದ್ದಂತೆ ತಮ್ಮನ ಆಗಮನ ಕಂಡು ಮುಖವು ಅರಳಿದೆ. ಪರಸ್ಪರ ಇಬ್ಬರೂ ಪ್ರೀತಿಯಿಂದ ತಬ್ಬಿಕೊಂಡಿದ್ದು, ಸಹೋದರಿಯೂ ಭಾವುಕಳಾಗಿದ್ದಾಳೆ. ಆ ಬಳಿಕ ತಮ್ಮನು ತನ್ನ ಅಕ್ಕನಿಗೆ ಉಡುಗೊರೆ ನೀಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತಂದೆಯ 81 ನೇ ಹುಟ್ಟುಹಬ್ಬಕ್ಕೆ ವಿಮಾನದಲ್ಲಿ ವಿಶೇಷ ಅನೌನ್ಸ್ ಮೆಂಟ್ ಮಾಡಿದ ಪೈಲೆಟ್

ಈ ವಿಡಿಯೋ ಇದುವೆರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸಹೋದರನ ಪ್ರೀತಿ ಸಹೋದರಿಗೆ ಯಾವತ್ತೂ ವಿಶೇಷ ಎಂದಿದ್ದಾರೆ. ಮತ್ತೊಬ್ಬರು, ಬ್ಯೂಟಿಫುಲ್ ಎಂದು ಹೇಳಿದರೆ, ಇನ್ನೊಬ್ಬರು, ಆ ನಗುವು ಎಲ್ಲವನ್ನೂ ಹೇಳುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?
ಸ್ಟಿಂಗ್ ಪ್ರಕರಣ: ಸಿಸಿಬಿಗೆ ಇನ್ನೂ ಸಿಕ್ಕಿಲ್ಲ 2 ಮದರ್ ಡಿವೈಸ್, ಮೊಬೈಲ್!
ಸ್ಟಿಂಗ್ ಪ್ರಕರಣ: ಸಿಸಿಬಿಗೆ ಇನ್ನೂ ಸಿಕ್ಕಿಲ್ಲ 2 ಮದರ್ ಡಿವೈಸ್, ಮೊಬೈಲ್!
ಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿಗಳಿಗೆ SIT ನೋಟಿಸ್
ಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿಗಳಿಗೆ SIT ನೋಟಿಸ್
ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್‌; ವಿಶೇಷ ರೈಲು, 200ಕ್ಕೂ ಹೆಚ್ಚು ಬಸ್‌!
ಹಾಸನಾಂಬೆ ಭಕ್ತರಿಗೆ ಗುಡ್‌ನ್ಯೂಸ್‌; ವಿಶೇಷ ರೈಲು, 200ಕ್ಕೂ ಹೆಚ್ಚು ಬಸ್‌!
ಕಬ್ಬು ಬೆಳೆಗಾರರ ಸಭೆ ಮುಗಿಸಿ ಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಕಬ್ಬು ಬೆಳೆಗಾರರ ಸಭೆ ಮುಗಿಸಿ ಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಮನೆಯಲ್ಲಿ ಶೆಟ್ಟಿ ಡಾನ್ ಮದುವೆ; ವರನ ಹುಡುಕಾಟ ಶುರು
ಬಿಗ್ ಬಾಸ್ ಮನೆಯಲ್ಲಿ ಶೆಟ್ಟಿ ಡಾನ್ ಮದುವೆ; ವರನ ಹುಡುಕಾಟ ಶುರು