Viral Video: ಲೈವ್‌ ರಿಪೋರ್ಟಿಂಗ್‌ ವೇಳೆ ಪತ್ರಕರ್ತೆಗೆ ಗುಮ್ಮಿದ ಗೂಳಿ

ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಸಂಬಂಧಿಸಿದ ಒಂದಲ್ಲ ಒಂದು ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಯಾವುದೋ ಒಂದು ಕಾರ್ಯಕ್ರಮದಲ್ಲಿ ವರದಿಗಾರ್ತಿ ಲೈವ್‌ ರಿಪೋರ್ಟಿಂಗ್‌ ಮಾಡುತ್ತಿದ್ದ ವೇಳೆ ಅತ್ತಕಡೆಯಿಂದ ಬಂದ ಗೂಳಿಯೊಂದು ಆಕೆಗೆ ಗುಮ್ಮಿದೆ. ಗೂಳಿ ಗುದ್ದಿದ ಏಟಿಗೆ ಪತ್ರಕರ್ತೆ ದೊಪ್ಪನೆ ಕೆಳಗೆ ಬಿದ್ದಿದ್ದಾರೆ.

Viral Video: ಲೈವ್‌ ರಿಪೋರ್ಟಿಂಗ್‌ ವೇಳೆ ಪತ್ರಕರ್ತೆಗೆ ಗುಮ್ಮಿದ ಗೂಳಿ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 11:28 AM

ಸಾಮಾನ್ಯವಾಗಿ ಪ್ರಾಣಿಗಳು ಶಾಂತವಾಗಿಯೇ ವರ್ತಿಸುತ್ತವೆ. ಆದ್ರೆ ಅವುಗಳಿಗೆ ಏನಾದ್ರೂ ಕೋಪ ಬಂದ್ರೆ, ತಲೆ ಕೆಟ್ರೆ ದೊಡ್ಡ ಅನಾಹುತಗಳನ್ನೇ ಸೃಷ್ಟಿ ಮಾಡುತ್ತವೆ. ಹೀಗೆ ಕೋಪಗೊಂಡ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವಂತಹ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಸದ್ಯ ಅಂತಹದೇ ಭಯಾನಕ ಘಟನೆಯೊಂದು ನಡೆದಿದ್ದು, ಸ್ಥಳೀಯ ಕಾರ್ಯಕ್ರಮದಲ್ಲಿ ಲೈವ್‌ ರಿಪೋರ್ಟಿಂಗ್‌ನಲ್ಲಿ ತೊಡಗಿದ್ದ ವೇಳೆ ಟಿವಿ ವರದಿಗಾರ್ತಿಯೊಬ್ಬರಿಗೆ ಗೂಳಿ ಗುದ್ದಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಜಾತ್ರೆಯೊಂದರಲ್ಲಿ ಸ್ಥಳೀಯ ವ್ಯಾಪಾರಿಗಳೊಂದಿಗೆ ಎತ್ತುಗಳ ಬೆಲೆಗಳ ಬಗ್ಗೆ ಮಹಿಳಾ ವರದಿಗಾರ್ತಿಯೊಬ್ಬರು ಚರ್ಚೆಯಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಬಂದ ಗೂಳಿಯೊಂದು ವರದಿಗಾರ್ತಿಯ ಮೇಲೆ ದಾಳಿ ನಡೆಸಿದೆ. ಗೂಳಿ ಗುದ್ದಿದ ಏಟಿಗೆ ವರದಿಗಾರ್ತಿ ದೊಪ್ಪನೆ ಕೆಳಗೆ ಬಿದ್ದಿದ್ದಾರೆ.

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದ್ದು, “ಪಾಕಿಸ್ತಾನದಲ್ಲಿ ಲೈವ್‌ ರಿಪೋರ್ಟಿಂಗ್‌ ವೇಳೆ ವರದಿಗಾರ್ತಿಗೆ ಗುದ್ದಿದ ಗೂಳಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಪಾಕ್‌ ವರದಿಗಾರ್ತಿ ಸ್ಥಳೀಯ ವ್ಯಾಪಾರಿಗಳ ಬಳಿ ನಿಂತು ಲೈವ್‌ ರಿಪೋರ್ಟಿಂಗ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬಂದ ಗೂಳಿಯೊಂದು ಕೋಪದಿಂದ ರಿಪೋರ್ಟರ್‌ಗೆ ಗುಮ್ಮಿದೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು ತುಂಬಾನೇ ಆಘಾತಕಾರಿ ದೃಶ್ಯವಾಗಿದೆ. ಎಲ್ಲಾ ಕ್ಷೇತ್ರದಲ್ಲೂ ಮೊದಲು ನಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್