Trending News: ಮುಟ್ಟಿನ ಅವಧಿಯಲ್ಲಿ ಕೆಂಪು ಸ್ಟಿಕರ್ ಧರಿಸಲು ಹೇಳಿದ ಕೆಫೆ ಮಾಲಿಕ

Woman wear red sticker : ಮುಟ್ಟಿನ ದಿನಗಳಲ್ಲಿ ಮಹಿಳೆಯರು ವಿಶ್ರಾಂತಿ ಪಡೆಯಲೆಂದು ಕೆಲ ಕಂಪೆನಿಗಳು ರಜೆ ನೀಡುತ್ತವೆ. ಆದರೆ ಇಲ್ಲೊಬ್ಬ ತನ್ನ ವಿಕಾರವನ್ನು ಹೇಗೆ ಹೊರಗೆಡಹಿದ್ದಾನೆ ಓದಿ.

Trending News: ಮುಟ್ಟಿನ ಅವಧಿಯಲ್ಲಿ ಕೆಂಪು ಸ್ಟಿಕರ್ ಧರಿಸಲು ಹೇಳಿದ ಕೆಫೆ ಮಾಲಿಕ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 22, 2022 | 1:38 PM

Woman : ಮಹಿಳಾ ಸಿಬ್ಬಂದಿಯು ಮುಟ್ಟಾದ ದಿನಗಳಲ್ಲಿ ಕೆಂಪು ಸ್ಟಿಕರ್ ಧರಿಸಬೇಕು ಎಂಬ ವಿಲಕ್ಷಣ ಹೇಳಿಕೆ ನೀಡಿದ ಆಸ್ಟ್ರೇಲಿಯಾದ ಕೆಫೆ ಮಾಲಿಕನ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಲ್ ಮತ್ತು ಜಾಕಿ ಓ ಶೋನಲ್ಲಿ ಭಾಗವಹಿಸಿದ್ದ ಆ್ಯಂಟನಿಯೇ ಈ ಹೇಳಿಕೆ ನೀಡಿದ ಮಹಾನುಭಾವ. ಮುಟ್ಟಿನ ಅವಧಿಯಲ್ಲಿ ಮಹಿಳೆಯರು ಹಾರ್ಮೋನ್​ ಏರುಪೇರಿನಿಂದ ಭಾವನಾತ್ಮಕವಾಗಿ ಒತ್ತಡಕ್ಕೊಳಗಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ಅವಧಿಯಲ್ಲಿ ಕೆಂಪು ಸ್ಟಿಕರ್ ಧರಿಸಿದರೆ ಉಳಿದವರು ಅವರೊಂದಿಗೆ ಜಾಗ್ರತೆಯಿಂದ ವ್ಯವಹರಿಸಲು ಸೂಚನೆ ಸಿಕ್ಕಂತಾಗುತ್ತದೆ. ಏಕೆಂದರೆ ಇಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ತಾನು ಗ್ರಾಹಕರೆದುರೇ ಈ ವಿಷಯವಾಗಿ ಸಮಸ್ಯೆ ಎದುರಿಸಿದ್ದೇನೆ ಎಂದು ಶೋನಲ್ಲಿ ಹೇಳಿಕೊಂಡಿದ್ಧಾನೆ. ಕೆಂಪು ಸ್ಟಿಕರ್ ಧರಿಸಬೇಕು ಎಂಬ ಹೇಳಿಕೆಗೆ ರೇಡಿಯೋ ಜಾಕಿ ಪೂರ್ತಿ ಆಘಾತ ಮತ್ತು ಗೊಂದಲಕ್ಕೆ ಒಳಗಾಗಿದ್ದಾನೆ.

ಆ್ಯಂಟನಿಯ ಈ ಅರ್ಥಹೀನ ಪ್ರಸ್ತಾಪವನ್ನು ಅನೇಕರು ಟೀಕಿಸಿದ್ದಾರೆ. ಇವನ ಈ ಕಲ್ಪನೆಯೇ ಮಹಿಳೆಯರಿಗೆ ಅವಮಾನಕರ ಎಂದಿದ್ದಾರೆ. ಮಹಿಳೆಯರಿಗೆ ತಮ್ಮ ಮುಟ್ಟಿನ ದಿನಗಳನ್ನು ಬಹಿರಂಪಡಿಸಲು ಒತ್ತಾಯ ಮಾಡಬಾರದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಆ್ಯಂಟನಿಗೆ ಗಂಭೀರವಾದ ಸಮಸ್ಯೆಗಳಿವೆ ಎಂದು ಕಿಡಿಕಾರಿದ್ದಾರೆ ಹಲವಾರು ಜನರು.

ಆ್ಯಂಟನಿ ಹೀಗೆ ಹೇಳಿಕೆ ನೀಡಿರುವುದು ಹೆಣ್ಣಿನ ವೈಯಕ್ತಿಕ ಮತ್ತು ಆತ್ಮಗೌರವನ್ನು ಕೆಣಕಿದಂತಾಗಿದೆ. ಕೆಲ ಮನೋವಿಕಾರಿಗಳು ಒಂದಿಲ್ಲಾ ಒಂದು ದಿನ ಹೀಗೆ ತಾವಾಗಿಯೇ ತಮ್ಮ ಮನಸ್ಥಿತಿಯನ್ನು ಪ್ರದರ್ಶಿಸಿಕೊಳ್ಳುತ್ತಾರೆ ಎನ್ನುವುದಕ್ಕೆ ಇದು ಸೂಕ್ತ ನಿದರ್ಶನ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್​ ಮಾಡಿ

Published On - 1:36 pm, Mon, 22 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ