AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ

ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ ಸಿಬ್ಬಂದಿಯೇ ಕದ್ದಿರುವುದು ಬೆಳಕಿಗೆ ಬಂದಿದೆ.

Andhra Pradesh: ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ
ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಲಕ್ಷಾಂತರ ನಗದು ನಾಪತ್ತೆ
Follow us
ಅಕ್ಷತಾ ವರ್ಕಾಡಿ
|

Updated on: May 02, 2024 | 10:37 AM

ಆಂಧ್ರಪ್ರದೇಶ: ಮನೆಯಲ್ಲಿ ದರೋಡೆಯಾದರೆ ತಕ್ಷಣ ಪೊಲೀಸರಿಗೆ ಕರೆ ಮಾಡಿ ದೂರು ದಾಖಲಿಸುತ್ತೇವೆ. ಆದರೆ ಇದೀಗ ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿದೆ. ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ನಗದು ಕಾಣಿಯಾಗಿದೆ. ಬೀರುವಿನ ಲಾಕರ್‌ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿವೆ.

ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ. ಬೀಗಗಳು ಇದ್ದಂತೆಯೇ ಇದ್ದುದ್ದರಿಂದ ಇದು ಹೊರಗಿನವರ ಕೆಲಸವಲ್ಲ, ಠಾಣೆಯ ಒಳಗಿನವರ ಕೆಲಸ ಎಂದು ಸ್ಪಷ್ಟವಾಗಿದೆ. ಈ ವೇಳೆ ತನಿಖೆ ನಡೆಸಿದಾಗ ಬೀರುವಿನಲ್ಲಿದ್ದ ಹಣವನ್ನು ಗೃಹರಕ್ಷಕ ದಳದ ಸಿಬ್ಬಂದಿಯೇ ಕದ್ದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬನ್ನಿ ಮತದಾನ ಮಾಡಿ; ವಜ್ರದ ಉಂಗುರ,ಟಿವಿ, ಫ್ರಿಜ್, ಸ್ಕೂಟರ್ ಗೆಲ್ಲಿರಿ

ಬಹಳ ನಂಬಿಕಸ್ಥನಾಗಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮನೋಜ್ ಹೋಮ್ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ವಿವಿಧ ಪ್ರಕರಣಗಳಲ್ಲಿ ಸಿಕ್ಕ ನಗದನ್ನು ನೋಡಿಕೊಳ್ಳಲು ಮನೋಜ್ ಅವರಿಗೆ ಜವಬ್ದಾರಿ ನೀಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ 5.63 ಲಕ್ಷ ರೂ ದೋಚಿ ತನಗೇನೂ ಗೊತ್ತಿಲ್ಲದವರಂತೆ ಪೊಲೀಸ್​ ಠಾಣೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ಆದರೆ ಬೀರುವಿನಲ್ಲಿದ್ದ ಹಣದ ಲೆಕ್ಕಾಚಾರದಲ್ಲಿ ವ್ಯತ್ಯಾಸ ಪೊಲೀಸರನ್ನು ಕಾಡತೊಡಗಿದೆ. ಇದಾದ ಬಳಿಕ ಗೃಹರಕ್ಷಕ ದಳದ ಸಿಬ್ಬಂದಿ ಮನೋಜ್ ನನ್ನು ವಶಕ್ಕೆ ಪಡೆದಿದ್ದು, ತಾನು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಆತನಿಂದ 3 ಲಕ್ಷ ನಗದು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ರಿಮಾಂಡ್‌ಗೆ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!