Video: ಕಾರು ಹರಿದು 4 ವರ್ಷದ ಮಗು ಸಾವು: ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆ

|

Updated on: Apr 04, 2024 | 5:02 PM

ಲಕ್ನೋದ ಬಿಜ್ನೋರ್ ಪ್ರದೇಶದಲ್ಲಿ ಬುಧವಾರ (ಏಪ್ರಿಲ್ 3) ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಗು ಮೇಲೆ ಕಾರು ಹರಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಕಾರಿನ ಅಡಿಗೆ ಸಿಲುಕಿ 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ಘಟನೆ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ‘ಮಹೀಂದ್ರಾ XUV700’ ಮಗುವಿನ ಮೇಲೆ ಹರಿದು ಹೋಗಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಲಕ್ನೋದ ಬಿಜ್ನೋರ್ ಪ್ರದೇಶದಲ್ಲಿ ಬುಧವಾರ (ಏಪ್ರಿಲ್ 3) ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಗು ರಸ್ತೆಯಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. @SachinGuptaUP ಎಂಬ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಏಪ್ರಿಲ್​​ 04ರಂದು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದು ಗಂಟೆಯಲ್ಲಿ 2ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us on