CCTV Footage: ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಕಾರು ಹರಿದು ಸಾವು

|

Updated on: Mar 22, 2024 | 1:03 PM

ಮನೆ ಮುಂದೆ ಕಸ ಗುಡಿಸುತ್ತಿರುವ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಮಹಿಳೆಗೆ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

CCTV Footage: ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಕಾರು ಹರಿದು ಸಾವು
CCTV Footage
Image Credit source: Twitter
Follow us on

ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರು ಅನಿರೀಕ್ಷಿತ ಅಪಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಸದ್ಯ ಈ ಭಯಾನಕ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಗೀತಾ ಕಾಲೋನಿಯ ಜಾನಕಿ ಕುಮಾರಿ(65) ತಮ್ಮ ಮನೆ ಮುಂದೆ ಕಸ ಗುಡಿಸುತ್ತಿರುವ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಹಿಳೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಡಿಯೋದಲ್ಲಿ ಮಹಿಳೆ ತನ್ನ ಮನೆ ಮುಂದೆ ಕಸ ಗುಡಿಸುತ್ತಿರುವ ವೇಳೆ ಕಾರು ಬಂದು ನೇರವಾಗಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಕಂಡುಬಂದಿವೆ.

ವಿಡಿಯೋ ಇಲ್ಲಿದೆ ನೋಡಿ:

ಸ್ಥಳೀಯರ ದೂರಿನ ಮೇರೆಗೆ ಕಾರಿನ ಚಾಲಕ ಮುಕುಲ್ ರಾಥೋಡ್(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರೇಕ್‌ ಹೊಡೆಯಲು ಯತ್ನಿಸಿದ ಆತ ಆಕ್ಸಿಲರೇಟರ್‌ ಬಟನ್‌ ಒತ್ತಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅದೇ ಈ ಅವಘಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಘಟನೆಯನ್ನು ನೋಡಿದ ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು, ಅಜಾಗರೂಕ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಥೋಡ್ ಅವರು ಗಾಜಿಯಾಬಾದ್‌ನ ಗ್ರಾಫಿಕ್ ಡಿಸೈನಿಂಗ್ ಸಂಸ್ಥೆಯೊಂದರಲ್ಲಿ ಇಂಟರ್ನ್ ಆಗಿ ಕೆಲಸ ಮಾಡುತ್ತಿದ್ದು, ಮೃತರ ಮನೆಯ ಪಕ್ಕದಲ್ಲೇ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ