CCTV Footage: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬೈಕ್‌ನಲ್ಲಿ ಬಂದ ಖದೀಮರು , ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಬಲವಾಗಿ ಸರ ಎಳೆದ ಪರಿಣಾಮ ಮಹಿಳೆ ನೆಲಕ್ಕೆ ಬಿದ್ದಿದ್ದಾರೆ. ಇಡೀ ಘಟನೆಗೆ ಸಂಬಂಧಿಸಿದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

CCTV Footage: ಹಾಡು ಹಗಲೇ  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Jul 06, 2024 | 2:57 PM

ಗಾಜಿಯಾಬಾದ್: ಹಾಡು ಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದಲ್ಲಿ ನಡೆದಿದೆ. ಈ ಘಟನೆಯು ಜುಲೈ 5, ಶುಕ್ರವಾರ, ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿ ವರದಿಯಾಗಿದೆ. ಇಡೀ ಘಟನೆಗೆ ಸಂಬಂಧಿಸಿದ ವಿಡಿಯೋ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ವೀಡಿಯೋದಲ್ಲಿ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳು ವೇಗವಾಗಿ ಬೈಕ್‌ನಲ್ಲಿ ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಕಿತ್ತು ಕದೀಮರು ಪರಾರಿಯಾಗಿದ್ದಾರೆ. ಬಲವಾಗಿ ಸರ ಎಳೆದಿರುವ ಪರಿಣಾಮ ಮಹಿಳೆ ನೆಲಕ್ಕೆ ಬಿದ್ದಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಮಹಿಳೆ ಹತ್ತಿರದ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.

ಸರ ಕಳ್ಳತನದ ಸಿಸಿಟಿವಿ ದೃಶ್ಯವಳಿ ಇಲ್ಲಿದೆ ನೋಡಿ:

ಇದನ್ನೂ ಓದಿ: ಶೂ ಒಳಗೆ ಬೆಚ್ಚಗೆ ಕುಳಿತಿದ್ದ ನಾಗರ ಹಾವು; ಬೆಚ್ಚಿ ಬಿದ್ದ ಯುವತಿ

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು @SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇಂದು (ಜು.06) ಹಂಚಿಕೊಂಡಿರುವ ವಿಡಿಯೋ ಕೆಲವೇ ಘಂಟೆಗಳಲ್ಲಿ 10 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮಹಿಳೆಯರೇ ನಿಮ್ಮ ಆಭರಣಗಳ ಬಗ್ಗೆ ಹೆಚ್ಚಿನ ಜಾಗ್ರತೆಯಿಂದಿರಿ ಎಂದು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ