Viral: ಕರ್ತವ್ಯದ ವೇಳೆಯಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಚೆನ್ನೈನ ಹೃದಯ ಶಸ್ತ್ರಚಿಕಿತ್ಸಕ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಯುವಕರು ಮತ್ತು ಹದಿಹರೆಯದವರೇ ಹೆಚ್ಚಾಗಿ ಹಾರ್ಟ್ ಅಟ್ಯಾಕ್‌ಗೆ ತುತ್ತಾಗುತ್ತಿದ್ದಾರೆ. ದೈಹಿಕ ಚಟುವಟಿಕೆ, ನಿಯಮಿತ ತಪಾಸಣೆಯ ಕೊರತೆಯಿಂದ ಇದೆಲ್ಲಾ ಸಂಭವಿಸುತ್ತದೆ ಅಂತ ಹೇಳುತ್ತಾರೆ. ಆದ್ರೆ ವಿಚಿತ್ರ ಏನೆಂದರೆ ಇಲ್ಲೊಬ್ಬರು ಹೃದಯ ಶಸ್ತ್ರಚಿಕಿತ್ಸಕರೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಭಾರೀ ವೈರಲ್ ಆಗುತ್ತಿದೆ.

ಚೆನ್ನೈ, ಆ. 30: ಪ್ರತಿನಿತ್ಯ ಒಂದಲ್ಲಾ ಒಂದು ಹೃದಯಾಘಾತದ (Heart Attack) ಪ್ರಕರಣಗಳು ಕೇಳಿ ಬರುತ್ತಿರುತ್ತವೆ. ಅದರಲ್ಲೂ ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾಯುವವರ ಸಂಖ್ಯೆ ತೀರಾ ಹೆಚ್ಚಾಗುತ್ತಿದೆ. ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಮತ್ತು ವೈದ್ಯರ ಬಳಿ ನಿಯಮಿತವಾಗಿ ತಪಾಸಣೆಗಳನ್ನು ಮಾಡದಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದ್ರೆ ವಿಚಿತ್ರ ಏನೆಂದರೆ ಇಲ್ಲೊಬ್ಬರು ಹೃದಯ ಶಸ್ತ್ರಚಿಕಿತ್ಸಕರೇ ಹೃದಯಾಘಾತಕ್ಕೆ (heart surgeon dies of heart attack) ಬಲಿಯಾಗಿದ್ದಾರೆ. ಚೈನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಹಾರ್ಟ್ ಸರ್ಜನ್ ಆಗಿದ್ದ 39 ವರ್ಷ ವಯಸ್ಸಿನ ಡಾ. ಗ್ರಾಡ್ಲಿನ್ ರಾಯ್ ಎಂಬವರು ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕುತ್ತಾ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿಯೇ ಹಠಾತ್ತನೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಸುದ್ದಿ ಇದೀಗ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಹೃದಯಾಘಾತಕ್ಕೆ ಬಲಿಯಾದ ಹಾರ್ಟ್ ಸರ್ಜನ್:
ಚೆನ್ನೈನ ಸವಿತಾ ವೈದ್ಯಕೀಯ ಕಾಲೇಜಿನಲ್ಲಿ ಹೃದಯ ಶಸ್ತ್ರಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಗ್ರಾಡ್ಲಿನ್ ರಾಯ್ ಎಂಬವರು ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕುತ್ತಾ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿಯೇ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಸಹದ್ಯೋಗಿಗಳು ಅವರನ್ನು ಬದುಕಿಸಲು ಪ್ರಯತ್ನಪಟ್ಟರೂ ಅದು ವಿಫಲವಾಗಿದೆ. ಈ ಆಘಾತಕಾರಿ ಸುದ್ದಿಯನ್ನು ಹೈದರಾಬಾದ್ ಮೂಲಕ ನರವಿಜ್ಞಾನಿ ಡಾ. ಸುಧೀರ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
“ಡಾ. ರಾಯ್ ಅವರ ಸಹೋದ್ಯೋಗಿಗಳು ಅವರ ಜೀವ ಉಳಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿದರು. ಸಿಪಿಆರ್, ತುರ್ತು ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟಿಂಗ್, ಇಂಟ್ರಾ-ಅಯೋರ್ಟಿಕ್ ಬಲೂನ್ ಪಂಪ್ ಮತ್ತು ಇಸಿಎಂಒ ಅನ್ನು ಸಹ ಬಳಸಲಾಯಿತು. ಆದರೆ ಅವರನ್ನು ಉಳಿಸಲು ಮಾತ್ರ ಸಾಧ್ಯವಾಗಲಿಲ್ಲ” ಎಂದು ಡಾ. ಸುಧೀರ್ ಹೇಳಿದ್ದಾರೆ.
ವೈರಲ್ ಪೋಸ್ಟ್ ಇಲ್ಲಿದೆ ನೋಡಿ:
When the Healer Falls: A Wake-Up Call for Doctors’ Heart Health 💔Yesterday morning brought heartbreaking news. Dr. Gradlin Roy, a 39-year-old cardiac surgeon, collapsed during ward rounds. Colleagues fought valiantly-CPR, urgent angioplasty with stenting, intra-aortic balloon… pic.twitter.com/cS8ViaYeYv
— Dr Sudhir Kumar MD DM (@hyderabaddoctor) August 28, 2025
ಇತ್ತೀಚಿನ ದಿನಗಳಲ್ಲಿ 30 ರಿಂದ 40 ಹರೆಯದವರೇ ಹೆಚ್ಚಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ವಿಪರ್ಯಾಸ ಏನೆಂದರೆ ಇತರರ ಹೃದಯಗಳನ್ನು ಉಳಿಸಲು, ಜೀವಗಳನ್ನು ಕಾಪಾಡಲು ಶ್ರಮಿಸುತ್ತಿರುವವರೇ ತಮ್ಮ ಹೃದಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನಿದ್ರಾಹೀನತೆ, ಅನಿಯಮಿತ ಕೆಲಸ, ಅನಿಯಮಿತ ಊಟ, ಆಸ್ಪತ್ರೆ ಕ್ಯಾಂಟಿನ್ ಆಹಾರ ಸೇವನೆ, ಕೆಫಿನ್ ಸೇವನೆ, ಮಾನಸಿಕ ಹೊರೆ ಇವೆಲ್ಲವೂ ಹೃದಯಾಘಾತಕ್ಕೆ ತುತ್ತಾಗಲು ಮುಖ್ಯ ಕಾರಣ. ಹಾಗಾಗಿ ಇತರ ಜೀವಗಳನ್ನು ಕಾಪಾಡಲು ಶ್ರಮಿಸುವ ವೈದ್ಯರು ತಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತ ಆರೋಗ್ಯ ತಪಾಸಣೆ ಮಾಡಬೇಕು, ನಿದ್ರೆಗೆ ಆದ್ಯತೆ ನೀಡಬೇಕು, ದೈಹಿಕ ಚಟುವಟಿಕೆಯಲ್ಲಿ ತೊಡಗಬೇಕು, ಒತ್ತಡವನ್ನು ನಿರ್ವಹಿಸಲು ಧ್ಯಾನ ಮಾಡಬೇಕು, ಪೋಷಕಾಂಶಯುಕ್ತ ಆಹಾರ ಸೇವನೆ ಮಾಡಬೇಕು, ವಿರಾಮ ತೆಗೆದುಕೊಂಡು ಕುಟುಂಬ ಸ್ನೇಹಿತರೊಂದಿಗೆ ಸಮಯ ಕಳೆಯಬೇಕು ಎಂದು ಡಾ. ಸುಧೀರ್ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್; ಶಾಕಿಂಗ್ ವಿಡಿಯೋ ವೈರಲ್
ಆಗಸ್ಟ್ 28 ರಂದು ಶೇರ್ ಮಾಡಲಾದ ಈ ಪೋಸ್ಟ್ 85 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಸುದ್ದಿ ಕೇಳಿ ತುಂಬಾ ದುಃಖವಾಯಿತು. ಒತ್ತಡವೇ ಇದಕ್ಕೆಲ್ಲಾ ಕಾರಣ ಎಂದು ಕಾಣಿಸುತ್ತದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼವೈದ್ಯರ ಆರೋಗ್ಯವೂ ತುಂಬಾನೇ ಮುಖ್ಯ ಈ ಬಗ್ಗೆ ಸರ್ಕಾರ ಗಮನಹರಿಸಬೇಕುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಜೀವ ಕಾಪಾಡುವ ವೈದ್ಯರೇ ಹೃದಯಾಘಾತಕ್ಕೆ ಬಲಿಯಾದ ಈ ಸುದ್ದಿಯನ್ನು ಕೇಳಿ ಶಾಕ್ ಆಗಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








