Video Viral: ಮುಂದಿನಿಂದ ಬಂದ ಕಾರು ಸ್ಕೂಟರ್​​​ಗೆ ಡಿಕ್ಕಿ ಹೊಡೆದ ರಭಸಕ್ಕೆ 30 ಅಡಿ ದೂರಕ್ಕೆ ಹೋಗಿ ಬಿದ್ದ ಮಹಿಳಾ ಪೇದೆ

ಪೋರೂರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪವಿತ್ರಾ, ಬುಧವಾರ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಮಹಿಳಾ ಪೇದೆ ಪವಿತ್ರಾ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Follow us
ಅಕ್ಷತಾ ವರ್ಕಾಡಿ
|

Updated on: Jul 19, 2024 | 11:56 AM

ತಮಿಳುನಾಡು: ನಿಯಂತ್ರಣ ತಪ್ಪಿದ ಕಾರು ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್​​ನಲ್ಲಿದ್ದ ಮಹಿಳಾ ಪೇದೆ 30 ಅಡಿ ದೂರಕ್ಕೆ ಹೋಗಿ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳಾ ಪೇದೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

ತಿರುಮುಲ್ಲೈವಾಯಲ್ ಪ್ರದೇಶದ ಪವಿತ್ರಾ ಪೋರೂರ್(24) ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ಕರ್ತವ್ಯ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು ಮತ್ತೊಂದು ಗ್ಯಾಸ್ ಸಿಲಿಂಡರ್ ತುಂಬಿದ್ದ ಟೆಂಪೋಗೆ ಡಿಕ್ಕಿ ಹೊಡೆದಿದೆ. ಆದರೆ ಅದೃಷ್ಟವಶಾತ್ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ. ಇದರಿಂದ ದೊಡ್ಡ ಅಪಾಯ ತಪ್ಪಿದೆ.

ಇದನ್ನೂ ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಅಪಘಾತದ ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳಾ ಪೇದೆ ಪವಿತ್ರಾ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಶೋಧ ನಡೆಯುತ್ತಿದೆ. ಇದೇ ವೇಳೆ ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ