Viral: ಸಹಪಾಠಿಯ ಹುಟ್ಟುಹಬ್ಬ, ಶಾಲೆಯಲ್ಲಿ ಭರ್ಜರಿ ಬೀಯರ್‌ ಪಾರ್ಟಿ ಮಾಡಿದ ಹೈಸ್ಕೂಲ್‌ ಹುಡುಗೀರು

ಶಾಲೆಗಳಲ್ಲಿ ಕೇಕ್‌ ಕಟ್‌ ಮಾಡಿ ಅಥವಾ ಚಾಕೊಲೇಟ್‌ ಹಂಚಿ ಹುಟ್ಟುಹಬ್ಬವನ್ನು ಆಚರಿಸಿರುವುದನ್ನು ನೋಡಿರುತ್ತೇವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಸಹಪಾಠಿಯ ಹುಟ್ಟುಹಬ್ಬದ ಸಲುವಾಗಿ ಶಾಲಾ ಕೊಠಡಿಯಲ್ಲಿಯೇ ಭರ್ಜರಿ ಬಿಯರ್‌ ಪಾರ್ಟಿ ಮಾಡಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

Viral: ಸಹಪಾಠಿಯ ಹುಟ್ಟುಹಬ್ಬ, ಶಾಲೆಯಲ್ಲಿ ಭರ್ಜರಿ ಬೀಯರ್‌ ಪಾರ್ಟಿ ಮಾಡಿದ ಹೈಸ್ಕೂಲ್‌ ಹುಡುಗೀರು
ವೈರಲ್​​ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 11, 2024 | 12:33 PM

ಹೆತ್ತವರು ಮಕ್ಕಳು ಚೆನ್ನಾಗಿ ಓದಿ ಒಂದೊಳ್ಳೆ ಉದ್ಯೋಗವನ್ನು ಪಡೆದುಕೊಳ್ಳಲಿ ಎಂದು ಶಾಲೆಗೆ ಕಲಿಸುತ್ತಾರೆ. ಆದ್ರೆ ಶಾಲೆಯಲ್ಲಿ ವಿದ್ಯಾರ್ಥಿಗಳು ಮಾಡುವ ಕೆಲವೊಂದು ಕಿತಾಪತಿಗಳು ಹೆತ್ತವರ ಮನಸ್ಸಿಗೆ ತುಂಬಾನೇ ಬೇಸರ ತರಿಸುತ್ತದೆ. ಇದೀಗ ಅಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಸಹಪಾಠಿಯ ಹುಟ್ಟುಹಬ್ಬದ ಸಲುವಾಗಿ ಶಾಲಾ ಕೊಠಡಿಯಲ್ಲಿಯೇ ಭರ್ಜರಿ ಬಿಯರ್‌ ಪಾರ್ಟಿ ಮಾಡಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಈ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಮಸ್ತೂರಿ ಪ್ರದೇಶದ ಭಚೌರಾ ಗ್ರಾಮದ ಸರ್ಕಾರಿ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರು ಸಹಪಾಠಿಯ ಹುಟ್ಟುಹಬ್ಬದ ಸಲುವಾಗಿ ಶಾಲಾ ಕೊಠಡಿಯಲ್ಲಿಯೇ ಬಿಯರ್‌ ಪಾರ್ಟಿ ಮಾಡಿದ್ದಾರೆ. ಜುಲೈ 29 ರಂದು ಈ ಘಟನೆ ನಡೆದಿದ್ದು, ಅಧಿಕೃತ ಮೂಲಗಳ ಪ್ರಕಾರ ಕೆಲ ವಿದ್ಯಾರ್ಥಿನಿಯರು ಜುಲೈ 29 ರಂಧೂ ತರಗತಿಯ ಒಳಗೆ ಸಹಪಾಠಿಯ ಹುಟ್ಟುಹಬ್ಬವನ್ನು ಆಚರಿಸಿ ಬಿಯರ್‌ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪಾರ್ಟಿಯ ವಿಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾಳೆ.

ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಬಿಲಾಸ್‌ಪುರದ ಜಿಲ್ಲಾ ಶಿಕ್ಷಣಾಧಿಕಾರಿ ಟಿ.ಆರ್‌ ಸಾಹು ಮೂವರು ಸದಸ್ಯರ ಸಮಿತಿಯನ್ನು ರಚಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಸಂಬಂಧಪಟ್ಟ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಮೋಜಿಗಾಗಿ ಬಿಯರ್‌ ಬಾಟಲಿಗಳನ್ನು ಹಿಡಿದು ವಿಡಿಯೋ ಮಾಡಿದ್ದು, ಆದ್ರೆ ನಾವು ಬಿಯರ್‌ ಸೇವಿಸಿಲ್ಲ ಎಂದು ವಿದ್ಯಾರ್ಥಿನಿಯರು ತನಿಖಾ ತಂಡಕ್ಕೆ ತಿಳಿಸಿದ್ದಾರೆ ಎಂದು ಸಾಹು ಹೇಳಿದ್ದಾರೆ. “ಇನ್ನು ಮುಂದೆ ಶಾಲೆಗಳಲ್ಲಿ ಇಂತಹ ಘಟನೆಗಳು ಮುರುಕಳಿಸದಂತೆ ನೋಡಿಕೊಳ್ಳಲು ಪ್ರಾಂಶುಪಾಲರು ಮತ್ತು ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ಇದರಲ್ಲಿ ಭಾಗಿಯಾದ ವಿದ್ಯಾರ್ಥಿನಿಯರ ಪೋಷಕರಿಗೆ ನೋಟಿಸಗ ಕಳುಹಿಸಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಎಕ್ಸ್​​ ಖಾತೆ ಪೋಸ್ಟ್​​ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಸೂರ್ಯ ಪ್ರಕಾಶ್‌ ಸೂರ್ಯಕಾಂತ್‌ (SPsuryakant) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ಚಿತ್ರದಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ಶಾಲಾ ಕೊಠಡಿಯೊಳಗೆ ಬಿಯರ್‌ ಸೇವಿಸಿ ಬರ್ತ್‌ಡೇ ಪಾರ್ಟಿ ಮಾಡಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಷನ್‌ ಬರೆಯಲು ಆರಂಭಿಸಿದ ವೈದ್ಯರು;‌ ಇಲ್ಲಿದೆ ವೈರಲ್‌ ಫೋಟೋಸ್‌

ಸೆಪ್ಟೆಂಬರ್‌ 10 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೆಲ್ಲಾ ಮಹಿಳಾ ಸಬಲೀಕರಣದ ದುರುಪಯೋಗʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಪೋಷಕರಿಗೆ ಬಹಳ ಹೆಮ್ಮೆ ತರುವ ಘನಕಾರ್ಯ ಮಾಡಿದ್ದಾರೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಎತ್ತ ಸಾಗುತ್ತಿದೆ ಸಮಾಜʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ವೈರಲ್​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ