AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಕೈಯಿಂದ ಹಾರದೆ ದೊಪ್ಪನೆ ಕೆಳ ಬಿದ್ದ ಪಾರಿವಾಳ

ಆಗಸ್ಟ್ 15 ರಂದು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗಿದೆ. ಮತ್ತು ಈ ದಿನದಂದು ಶಾಂತಿ ಮತ್ತು ಸ್ವಾತಂತ್ರ್ಯದ ಸಾಂಕೇತಿಕ ಸೂಚಕವಾಗಿ ಪಾರಿವಾಳಗಳನ್ನು ಹಾರಿಸಲಾಗುತ್ತದೆ. ಆದ್ರೆ ಇಲ್ಲೊಂದು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾರಿವಾಳಗಳನ್ನು ಹಾರಿಸುವ ಅದರಲ್ಲಿ ಒಂದು ಒಂದು ಪಾರಿವಾಳ ಹಾರುವ ಬದಲು ದೊಪ್ಪನೆ ಕೆಳ ಬಿದ್ದಿದೆ. ಈ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಇದು ಪಂಚಾಯತ್-3 ಚಿತ್ರದ ದೃಶ್ಯವನ್ನು ನೆನಪಿಸುತ್ತಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

Video : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಕೈಯಿಂದ ಹಾರದೆ ದೊಪ್ಪನೆ ಕೆಳ ಬಿದ್ದ ಪಾರಿವಾಳ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 21, 2024 | 11:57 AM

Share

ಒಟಿಟಿಯಲ್ಲಿ ಪಂಚಾಯತ್‌ ಅತ್ಯಂತ ಜನಪ್ರಿಯ ಹಾಸ್ಯ ವೆಬ್‌ ಸರಣಿಯಾಗಿದೆ. ಚಿತ್ರ ಪ್ರೇಮಿಗಳ ನೆಚ್ಚಿನ ಸೀರೀಸ್ ಇದಾಗಿದೆ. ಇದರ ಸೀಸನ್ 3 ಸರಣಿಯಲ್ಲಿ ಒಂದು ಕಾರ್ಯಕ್ರಮದಲ್ಲಿ ಸುಖ, ಶಾಂತಿ, ಸಮೃದ್ಧಿಗಾಗಿ ಪಾರಿವಾಳ ಹಾರಿಸುವ ದೃಶ್ಯವಿದೆ. ಹೀಗೆ ಪಾರಿವಾಳ ಹಾರಿಸುವಾಗ ಅದು ಹಾರದೆ ಕೆಳಗೆ ಬೀಳುತ್ತದೆ. ಅದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾರಿವಾಳಗಳನ್ನು ಹಾರಿಸುವಾಗ ಅದರಲ್ಲಿ ಒಂದು ಪಾರಿವಾಳ ಹಾರದೆ ಕೆಳಗೆ ಬಿದ್ದಿದೆ. ಈ ದೃಶ್ಯ ಇದೀಗ ಸಖತ್ ವೈರಲ್ ಆಗಿದ್ದು, ಇದು ಪಂಚಾಯತ್-3 ಚಿತ್ರದ ದೃಶ್ಯವನ್ನು ನೆನಪಿಸುತ್ತಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಈ ಘಟನೆ ಛತ್ತೀಸ್‌ಗಢದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಡೆದಿದ್ದು, ಎಸ್ಪಿ ಕೈಯಲ್ಲಿದ್ದ ಪಾರಿವಾಳವೊಂದು ಹಾರದೆ ಕೆಳ ಬಿದ್ದಿದೆ. ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಮತ್ತು ಶಾಂತಿಯ ಭಾಗವಾಗಿ ಪಾರಿವಾಳಗಳನ್ನು ಹಾರಿಸಲಾಯಿತು. ಅಲ್ಲಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗಿರ್ಜಾ ಶಂಕರ್ ಜೈಸ್ವಾಲ್ ಅವರು ಪಾರಿವಾಳವನ್ನು ಹಾರಿಸುವಾಗ ಅದು ಹಾರದೇ ಪಂಚಾಯತ್ 3 ವೆಬ್ ಸರಣಿಯ ಗೋ ಕಬೂತರ್ ಗೋ’ ದೃಶ್ಯದಂತೆ ದೊಪ್ಪನೆ ಕೆಳಗೆ ಬಿದ್ದಿದೆ.

ವೈರಲ್​​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್ ಒಂದನ್ನು gharkekalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಪಂಚಾಯತ್-3 ಛತ್ತೀಸ್‌ಗಢ ಆವೃತ್ತಿ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಗಣ್ಯರು ಪಾರಿವಾಳ ಹಾರಿಸುವಾಗ ಅದರಲ್ಲಿ ಒಂದು ಪಾರಿವಾಳ ಹಾರದೆ ಕೆಳ ಬೀಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಆಗಸ್ಟ್ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಇದು ರಿಯಲ್ ಲೈಫ್ ಪಂಚಾಯತ್ 3 ದೃಶ್ಯ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಇದು ವಾಸ್ತವವಾಗಿ ಅಪರಾಧವಾಗಿದೆ’ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?