Viral: ತನ್ನ ಮೊಬೈಲ್​ ​ಹುಡುಕಲು 21 ಲಕ್ಷ ಲೀಟರ್​ ನೀರುಪೋಲು ಮಾಡಿದ ಛತ್ತೀಸ್​ಗಢ ಅಧಿಕಾರಿ ಅಮಾನತು

Chhattisgarh : ಮೂರು ದಿನಗಳ ಕಾಲ ಎರಡು 30hp ಡೀಸಲ್​ ಪಂಪ್​ಗಳ ಸಹಾಯದಿಂದ ನೀರು ಹರಿಬಿಡಲಾಗಿದೆ. ಇದರಿಂದಾಗಿ ಬೇಸಿಗೆಯ ಈ ದಿನಗಳಲ್ಲಿ ನೀರಿನ ಕೊರತೆ ಉಂಟಾಗಲಿದೆ ಎಂಬ ಆತಂಕ ಸ್ಥಳೀಯರಲ್ಲಿ ನಿರ್ಮಾಣವಾಗಿದೆ.

Viral: ತನ್ನ ಮೊಬೈಲ್​ ​ಹುಡುಕಲು 21 ಲಕ್ಷ ಲೀಟರ್​ ನೀರುಪೋಲು ಮಾಡಿದ ಛತ್ತೀಸ್​ಗಢ ಅಧಿಕಾರಿ ಅಮಾನತು
ಅಮಾನತುಗೊಂಡ ಛತ್ತೀಸ್​ಗಢದ ಅಧಿಕಾರಿ ರಾಜೇಶ್ ಬಿಸ್ವಾಸ್
Follow us
| Updated By: ಶ್ರೀದೇವಿ ಕಳಸದ

Updated on:May 27, 2023 | 12:01 PM

Viral: ಅಧಿಕಾರಿಗಳು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರ ಆಸ್ತಿಪಾಸ್ತಿ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಳ್ಳುವ ಸಾಕಷ್ಟು ಉದಾಹರಣೆಗಳನ್ನು ನೋಡುತ್ತಲೇ ಇರುತ್ತೇವೆ. ಇದೀಗ ಇಂಥವುಗಳ ಪಟ್ಟಿಗೆ ಈ ಪ್ರಕರಣವೂ ಸೇರಿದೆ. ಕಳೆದು ಹೋದ ತನ್ನ ದುಬಾರಿ ಫೋನ್ ಹುಡುಕಲು ಜಲಾಶಯದಿಂದ 21 ಲಕ್ಷ ಲೀಟರ್ ನೀರನ್ನು ಛತ್ತೀಸ್‌ಗಢ (Chhattisgarh) ಅಧಿಕಾರಿ ರಾಜೇಶ್ ಬಿಸ್ವಾಸ್​ ( Rajesh Biswas) ಪೋಲು ಮಾಡಿದ್ದಾರೆ. ಇಷ್ಟೇ ಅಲ್ಲ ಇದಕ್ಕೆ ತಕ್ಕ ಶಿಕ್ಷೆಯನ್ನೂ ಸರ್ಕಾರದಿಂದ ಅವರು ಪಡೆದಿದ್ದಾರೆ.

ಕೊಯಿಲೀಬೇಡಾದ ಕಂಕೇರ ಜಿಲ್ಲೆಯ ಆಹಾರ ವಿಭಾಗದ ಅಧಿಕಾರಿ ರಾಜೇಶ್​ ಬಿಸ್ವಾಸ್ ಎನ್ನುವವರ ರೂ. 1 ಲಕ್ಷ ಮೌಲ್ಯದ ಫೋನ್​ ಅಕಸ್ಮಾತ್​ ಆಗಿ ಜಲಾಶಯದಲ್ಲಿ ಬಿದ್ದ ಪರಿಣಾಮ, ಅದನ್ನು ಮರಳಿ ಪಡೆಯುವ ಪ್ರಯತ್ನಕ್ಕೆ ತೊಡಗಿಕೊಂಡರು. ‘ಹತ್ತಿರದ ನಾಲೆಗೆ ನೀರನ್ನು ಹರಿಬಿಟ್ಟು ನನ್ನ ಫೋನ್​ನ್ನು ಹುಡುಕಬೇಕೆಂದುಕೊಂಡಿದ್ದೇನೆ ಎಂದು ಮೌಖಿಕವಾಗಿ ಸ್ಥಳೀಯ ಉಪವಿಭಾಗಾಧಿಕಾರಿಗಳ ಬಳಿ ಕೇಳಿಕೊಂಡೆ. ಆಗ ಅವರು, ಮೂರರಿಂದ ನಾಲ್ಕು ಅಡಿ ನೀರನ್ನು ಜಲಾಶಯದಿಂದ ಹರಿಬಿಟ್ಟರೆ ಸ್ಥಳೀಯ ರೈತರಿಗೂ ಪ್ರಯೋಜನವಾಗಬಹುದು ಆಗಲಿ ಎಂದು ಅನುಮತಿ ನೀಡಿದರು. ನಂತರ ಸ್ಥಳೀಯರ ಸಹಾಯದಿಂದ ಜಲಾಶಯದೊಳಗೆ ಬಿದ್ದ ಮೊಬೈಲ್​ ಅನ್ನು ಮರಳಿ ಪಡೆದುಕೊಂಡೆ’ ಎಂದಿದ್ದಾರೆ ರಾಜೇಶ್​.

ಇದನ್ನೂ ಓದಿ : Viral: ಲಾಟರಿಯಲ್ಲಿ ಗೆದ್ದ ರೂ. 82 ಲಕ್ಷವನ್ನು ಶಾಲಾ ಮಕ್ಕಳಿಗೆ ಸಹಾಯ ಮಾಡುತ್ತೇನೆ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಆದರೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಯು ಐದು ಅಡಿಗಳವರೆಗೆ ನೀರು ಹರಿಬಿಡಲು ಮಾತ್ರ ಅನುಮತಿ ನೀಡಿದ್ದರು ಎನ್ನುವುದು ತಿಳಿದುಬಂದಿದೆ. ಉಳಿದಂತೆ ರಾಜೇಶ್ ಬಿಸ್ವಾಸ್  ಅವರ ಈ ನಡೆಯಿಂದ ಈ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಬಹುದೆಂಬ ಆತಂಕ ಸ್ಥಳೀಯರನ್ನು ಕಾಡುತ್ತಿದೆ. ಏಕೆಂದರೆ ಬೇಸಿಗೆಕಾಲದಲ್ಲಿ ಇಲ್ಲಿನ ಜನ ಟ್ಯಾಂಕರ್​ಗಳ ಮೇಲೆ ಅವಲಂಬಿತರಾಗಿರುತ್ತಾರೆ.

ಇದನ್ನೂ ಓದಿ : Viral Video: ಈ ಧಗೆಯಲ್ಲಿ ಪ್ರೇಮಿಗಳಿಗೆ ತಂಪನೆರೆಯುವ ಪ್ರಗತಿ ಬಡಿಗೇರಳ ಈ ಭಾವಗೀತೆ

ಆರಂಭದಲ್ಲಿ ಸ್ಥಳೀಯ ನಿವಾಸಿಗಳು ನೀರಿಗೆ ಧುಮುಕಿ ಮೊಬೈಲ್​ ಅನ್ನು ಹುಡುಕಲು ಪ್ರಯತ್ನಿಸಿದ್ದಾರೆ. ಆದರೆ ನೀರಿನಾಳ ಹೆಚ್ಚಿದುದರಿಂದ ಪ್ರಯತ್ನ ವಿಫಲವಾಗಿದೆ. ಆಗ ಈ ಅಧಿಕಾರಿ ತನ್ನ ಫೋನ್​ ಅನ್ನು ಮರಳಿ ಪಡೆಯಲೇಬೇಕು ಎಂಬ ಜಿದ್ದಿಗೆ ಬಿದ್ದು ಇಂಥ ಅರ್ಥಹೀನ ಆಲೋಚನೆಯನ್ನು ಕಾರ್ಯಗತಗೊಳಿಸಿದ್ದಾರೆ. ಸತತ ಮೂರು ದಿನಗಳ ಕಾಲ ಎರಡು 30hp ಡೀಸಲ್​ ಪಂಪ್​ಗಳ ಸಹಾಯದಿಂದ ನೀರುಹರಿಬಿಡುವಿಕೆಯ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಇದನ್ನೂ ಓದಿ : Viral: ಹಿಟ್ಲರನಿಗೆ ಜಯವಾಗಲಿ! ಎಂದು ಕೆಲಸಗೇಡಿ ಕೆಲಸ ಕಳೆದುಕೊಂಡ ಕತೆ

ವಿಷಯ ತಿಳಿದ ನಂತರ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಪಂಪ್​ಗಳನ್ನು ಸ್ಥಗಿತಗೊಳಿಸಿದ್ದಾರಾದರೂ 21 ಲಕ್ಷ ಲೀಟರಿಗೂ ಹೆಚ್ಚು ನೀರು ಪೋಲಾಗಿದೆ. ಆದರೆ ಜಲಾಯಶಯದಿಂದ ಹರಿಬಿಟ್ಟ ನೀರನ್ನು 1,500 ಎಕರೆ ಕೃಷಿ ಭೂಮಿಗಾಗಿ ಬಳಸಬಹುದಾಗಿತ್ತಲ್ಲವೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:39 am, Sat, 27 May 23