Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ಇತ್ತೀಚಿಗೆ ಮನುಷ್ಯನಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 29, 2024 | 3:41 PM

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಕಷ್ಟದಲ್ಲಿರುವವರಿಗೆ ಸಹಾಯವನ್ನೂ ಮಾಡದೇ, ದಯೆಯನ್ನೂ ತೋರದೆ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದೀಗ ಅಂತಹದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದು ತಿಂದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕ್ಯಾಂಟೀನ್‌ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಅಮಾನವೀಯ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದ್ದು, ರೈಲ್ವೆ ಕ್ಯಾಂಟೀನ್‌‌ನಲ್ಲಿ ಬಿಸ್ಕೆಟ್‌ ಕದ್ದನೆಂಬ ಆರೋಪದ ಮೇಲೆ ಯುವಕನಿಗೆ ಕ್ಯಾಂಟೀನ್‌ ನೌಕರರು ಮನಬಂದಂತೆ ಥಳಿಸಿದ್ದಾರೆ. ಮಯಾಂಕ್‌ ತಿವಾರಿ ಎಂಬ ಯುವಕ ಹಸಿವು ನೀಗಿಸಲು ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಕ್ಯಾಂಟೀನ್‌ ಮಾಲೀಕನ ಕೈಗೆ ಸಿಕ್ಕಿಬೀಳುತ್ತಾನೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ನೌಕರರ ಜೊತೆ ಸೇರಿ ಆ ಯುವಕನಿಗೆ ಮನಬಂದಂತೆ ಥಳಿಸಿದ್ದು ಮಾತ್ರವಲ್ಲದೆ, ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕ್ಯಾಂಟೀನ್‌ ಮಾಲೀಕ ಅಂಕಿತ್‌ ಮಿಶ್ರಾ, ನೌಕರರಾದ ಅಶುತೋಷ್‌ ಶುಕ್ಲಾ, ಸುನಿಲ್‌ ಶುಕ್ಲಾ ಮತ್ತು ಬಸಂತ್‌ ಪ್ರಧಾನ್‌ನನ್ನು ಬಂಧಿಸಲಾಗಿದೆ. ಮತ್ತು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವಾಗ ಈ ಘಟನೆಯನ್ನು ನೋಡಿಯೂ ನಿರ್ಲಕ್ಷ್ಯ ವಹಿಸಿದ ಆರ್‌ಪಿಎಫ್‌ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಪ್ರಿಯಾ ಸಿಂಗ್‌ (priyarajputlive) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದ ಯುವಕನನ್ನು ಮಾಲೀಕರು ಅಮಾನುಷವಾಗಿ ಥಳಿಸಿ ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ಯುವ ಮೂಲಕ ಅಮಾನವೀಯವಾಗಿ ವರ್ತಿಸಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ

ಜುಲೈ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 14 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼನಿಜವಾಗಿಯೂ ಮಾನವೀಯತೆ ಸತ್ತು ಹೋಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ