AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮರಿಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಎತ್ತರದ ಗೋಡೆ ಏರಿದ ತಾಯಿ ಬೆಕ್ಕು

ಮೂಕ ಪ್ರಾಣಿಗಳು ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ. ಅಪಾಯದಲ್ಲಿ ಸಿಲುಕಿದಾಗ ಪ್ರಾಣದ ಹಂಗನ್ನು ತೊರೆದು ಅವುಗಳನ್ನು ರಕ್ಷಿಸುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಎತ್ತರದ ಗೋಡೆಯಲ್ಲಿ ಮರಿಗಳು ಸಿಲುಕಿಕೊಂಡಿವೆ. ಇದನ್ನುನೋಡಿದ ತಾಯಿ ಬೆಕ್ಕು ತನ್ನ ಪ್ರಾಣವನ್ನು ಲೆಕ್ಕಿಸದೇ ಎತ್ತರದ ಗೋಡೆ ಏರಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮರಿಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಎತ್ತರದ ಗೋಡೆ ಏರಿದ ತಾಯಿ ಬೆಕ್ಕು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 09, 2026 | 11:25 AM

Share

ತಾಯಿ ಪ್ರೀತಿಗೆ (mother love) ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಹಿತಕ್ಕಾಗಿ ಎಂತಹ ಕಷ್ಟವನ್ನಾದರೂ ಹೆತ್ತಮ್ಮ ಸಹಿಸಿಕೊಳ್ಳುತ್ತಾಳೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ತಾಯಿ ಬೆಕ್ಕೊಂದು ಅಪಾಯದಲ್ಲಿ ಸಿಲುಕಿದ್ದ ತನ್ನ ಮರಿಗಳನ್ನು ಕಾಪಾಡಲು ಪ್ರಾಣವನ್ನೇ ಪಣಕ್ಕಿಟ್ಟಿದೆ. ಹೌದು, ತನ್ನ ಕಂದಮ್ಮನನ್ನು ರಕ್ಷಿಸಲು ಎತ್ತರದ ಗೋಡೆ ಏರಿದ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ ಎನ್ನಲಾಗಿದೆ. ವೈರಲ್ ಆದ ವಿಡಿಯೋಗೆ ನೆಟ್ಟಿಗರು ಕಾಮೆಂಟ್‌ ತಾಯಿ ಪ್ರೀತಿ, ಕಾಳಜಿಯನ್ನು ಹಾಡಿ ಹೊಗಳಿದ್ದಾರೆ.

ಬುಫ್ಲಿಲೆಕ್ಸ್ (Bufflylex) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಎತ್ತರದ ಗೋಡೆಯೊಂದರ ಸಣ್ಣ ರಂಧ್ರದಲ್ಲಿ ಬೆಕ್ಕಿನ ಮರಿಗಳು ಸಿಲುಕಿಕೊಂಡಿದ್ದು ಕೂಗುತ್ತಿವೆ. ತನ್ನ ಕಂದಮ್ಮಗಳ ಕೂಗು ಕೇಳುತ್ತಿದ್ದಂತೆ ತಾಯಿ ಬೆಕ್ಕು ಪ್ರಾಣ ಲೆಕ್ಕಿಸದೇ ಎತ್ತರದ ಗೋಡೆ ಏರಲು ಮುಂದಾಗಿದೆ. ತನ್ನ ಉಗುರುಗಳ ಸಹಾಯದಿಂದ ಹಿಡಿದು  ಗೋಡೆ ಹಿಡಿದು ಮೇಲಕ್ಕೆ ಮೆಲ್ಲನೆ  ಹತ್ತಿ ತನ್ನ ಮರಿಗಳಿರುವ ಜಾಗವನ್ನು ಸೇರಿದೆ. ಈ ದೃಶ್ಯವನ್ನು ನೋಡುತ್ತಾ ನಿಂತವರು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Buffylex (@buffylex)

ಇದನ್ನೂ ಓದಿ: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ನಲ್ವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಾಯಿ ಪ್ರೀತಿ ಅಂದ್ರೆ ಹಾಗೆಯೇ ಎಂದಿದ್ದಾರೆ. ಇನ್ನೊಬ್ಬರು, ಕಣ್ಣಲ್ಲಿ ನೀರು ಬಂತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕರುಳ ಬಳ್ಳಿಗೆ ತೊಂದರೆ ತಾಯಿ ಹೃದಯ ಎಷ್ಟು ಚಡಪಡಿಸುತ್ತದೆ ಎನ್ನುವುದಕ್ಕೆ ಈ ದೃಶ್ಯ ಸಾಕ್ಷಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sun, 9 August 26

Follow Us
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ