Viral: ಎಲ್‌ಎಲ್‌ಬಿ ವಿದ್ಯಾರ್ಥಿಗಳಿಬ್ಬರ 50 ನೇ ವರ್ಷ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಸಹಪಾಠಿಗಳು; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವು ಕೆಲವೊಂದು ದೃಶ್ಯಗಳು ನಮ್ಮ ಮನಸ್ಸನ್ನು ಗೆಲ್ಲುತ್ತವೆ. ಸದ್ಯ ಅಂತಹದ್ದೊಂದು ಹೃದಯಸ್ಪರ್ಶಿ ವಿಡಿಯೋ ವೈರಲ್‌ ಆಗಿದ್ದು, ಎಲ್‌.ಎಲ್.ಬಿ ವಿದ್ಯಾರ್ಥಿಗಳೆಲ್ಲರೂ ಸೇರಿ ತಮ್ಮ ಇಬ್ಬರು ಸಹಪಾಠಿಗಳ 50 ನೇ ವರ್ಷದ ಹುಟ್ಟುಹಬ್ಬವನ್ನು ಸರ್ಪ್ರೈಸ್‌ ಆಗಿ ಆಚರಿಸಿದ್ದಾರೆ. ಈ ಭಾವನಾತ್ಮಕ ದೃಶ್ಯ ಇದೀಗ ಎಲ್ಲರ ಮನಗೆದ್ದಿದೆ.

Viral: ಎಲ್‌ಎಲ್‌ಬಿ ವಿದ್ಯಾರ್ಥಿಗಳಿಬ್ಬರ 50 ನೇ ವರ್ಷ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಸಹಪಾಠಿಗಳು; ವಿಡಿಯೋ ವೈರಲ್‌
Surprise Birthday Celebration
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Dec 22, 2024 | 2:51 PM

ಕಲಿಕೆ ಎಂಬುದು ನಿರಂತರವಾಗಿರುತ್ತದೆ, ಕಲಿಕೆಗೆ ಯಾವುದೇ ವಯಸ್ಸಿನ ಮಿತಿಯಿಲ್ಲ ಎಂದು ಹೇಳುತ್ತಾರೆ. ಈ ಮಾತಿಗನುಗುಣವಾಗಿ ತಮ್ಮ ಮಧ್ಯವಯಸ್ಸಿನಲ್ಲಿ, ಇಳಿ ವಯಸ್ಸಲ್ಲೂ ಕಾಲೇಜಿಗೆ ಹೋಗಿ ಓದಿದವರಿದ್ದಾರೆ. ಅದೇ ರೀತಿ ಇಲ್ಲಿಬ್ಬರು ವಿದ್ಯಾರ್ಥಿಗಳು ಕೂಡಾ ವಯಸ್ಸಿನ ಮಿತಿಯಿಲ್ಲದೆ ಎಲ್‌.ಎಲ್‌.ಬಿ ಓದಲು ಬಂದಿದ್ದು, ಈ ಇಬ್ಬರು ವಿದ್ಯಾರ್ಥಿಗಳ 50 ನೇ ವರ್ಷದ ಹುಟ್ಟುಹಬ್ಬವನ್ನು ಸಹಪಾಠಿಗಳೆಲ್ಲರೂ ಸೇರಿ ಸರ್ಪ್ರೈಸ್‌ ಆಗಿ ಆಚರಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ನೆಟ್ಟಿಗರ ಮನಗೆದ್ದಿದೆ.

ಎಲ್‌ಎಲ್‌ಬಿ ವಿದ್ಯಾರ್ಥಿಗಳಾದ ಹರಿದಾಸನ್‌ ಮತ್ತು ರಾಮನ್‌ ಅವರ 50 ನೇ ವರ್ಷದ ಹುಟ್ಟುಹಬ್ಬವನ್ನು ಅವರ ಸಹಪಾಠಿಗಳು ಸರ್ಪ್ರೈಸ್‌ ಆಗಿ ಆಚರಿಸಿದ್ದಾರೆ. ರಾಧಿಕ ಮಂಗಲ್‌ (radhika_mangal) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಎಲ್‌ಎಲ್‌ಬಿ ಯಾವುದೇ ವಯಸ್ಸಿನ ಮಿತಿಯನ್ನು ಹೊಂದಿಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವ ವಿದ್ಯಾರ್ಥಿಗಳೆಲ್ಲರೂ ಸೇರಿ ತಮ್ಮ ಸಹಪಾಠಿಗಳಿಬ್ಬರ 50 ನೇ ವರ್ಷದ ಬರ್ತ್‌ಡೇ ಸೆಲೆಬ್ರೇಟ್‌ ಮಾಡುವಂತಹದ ದೃಶ್ಯವನ್ನು ಕಾಣಬಹುದು. ಕೇಕ್‌ ಕಟ್‌ ಮಾಡಿಸುವ ಮೂಲಕ ಹುಟ್ಟು ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ.

ಇದನ್ನೂ ಓದಿ: ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಐಫೋನ್;‌ ಸಿಮ್‌ ಕೊಡ್ಬೋದು ಆದ್ರೆ ಫೋನ್‌ ಕೊಡಲು ಸಾಧ್ಯವಿಲ್ಲ ಎಂದ ದೇವಸ್ಥಾನ ಆಡಳಿತ ಮಂಡಳಿ

ಡಿಸೆಂಬರ್‌ 11 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯ ನೋಡಿ ನಿಜಕ್ಕೂ ನನ್ನ ಮನಸ್ಸಿಗೆ ತುಂಬಾನೇ ಸಂತೋಷವಾಯಿತುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಹಾ… ಎಂತಹ ಸುಂದರ ದೃಶ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಈ ಹೃದಯಸ್ಪರ್ಶಿ ದೃಶ್ಯವನ್ನು ಕಂಡು ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?