Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ

ಬಿ.ಎಂ.ಟಿ.ಸಿ ಬಸ್ ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂದು ಪ್ರಯಾಣಿಕರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ
ವೈರಲ್​​ ಪೋಸ್ಟ್​​​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 17, 2024 | 11:46 AM

ಸಾಮಾನ್ಯವಾಗಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ಆಗಾಗ್ಗೆ ಜಗಳಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಕಂಡಕ್ಟರ್ ಗಳು  ಚಿಲ್ಲರೆ ಕೊಟ್ಟು ಸಹಕರಿಸಿ ಎಂದು ಕೇಳಿಕೊಳ್ಳುತ್ತಾರೆ. ಏನಾದ್ರೂ ಬಸ್ ಟಿಕೆಟ್ 19 ರೂ. ಇದ್ದರೆ ಕೆಲವೊಂದು ಕಂಡಕ್ಟರ್ 1 ರೂಪಾಯಿ ಚಿಲ್ಲರೆ ಹಣವನ್ನು ಮತ್ತೆ ಕೊಡುತ್ತೇನೆ ಎಂದು ಪ್ರಯಾಣಿಕರಿಗೆ ವಾಪಸ್ ಹಿಂದಿರುಗಿಸೋದೇ ಇಲ್ಲ. ಇದೀಗ ಅದೇ ರೀತಿಯ ಘಟನೆಯೊಂದು ಬೆಂಗಳೂರಿನ ಬಿ.ಎಂ.ಟಿ.ಸಿ ಬಸ್ ಒಂದರಲ್ಲಿ ನಡೆದಿದ್ದು, ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣ ವಾಪಸ್ ಕೊಟ್ಟಿಲ್ಲ ಎಂದು ಆ ಪ್ರಯಾಣಿಕ  ತನ್ನ ಅಸಮಾಧಾನವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾನೆ. ಈ ಕುರಿತ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಈ ಪೋಸ್ಟ್​​ನ್ನು ನಿತೀನ್ ಕೃಷ್ಣ (N_4_NITHIN) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕಂಡಕ್ಟರ್ ಬಳಿ 1 ರೂಪಾಯಿ ಚೇಂಜ್ ಕೂಡಾ ಇಲ್ಲವೇ? ನಾನು ನನ್ನ 5 ರೂಪಾಯಿ ಹಣವನ್ನು ಕಳೆದುಕೊಂಡೆ, ಇದಕ್ಕೆ ಏನಾದರೂ ಪರಿಹಾರ ಇದೆಯೇ?” ಎಂದು ಬಿ.ಎಂ.ಟಿ.ಸಿಯ ಅಧೀಕೃತ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ನಿತೀನ್ ಅವರು ಬಿ.ಎಂ.ಟಿ.ಸಿ ಬಸ್ಸಿನಲ್ಲಿ ರಾಗಿಗುಡ್ಡ ದೇವಸ್ಥಾನದಿಂದ ಹೆಚ್.ಎಸ್.ಆರ್ ಡಿಪೋದ ಕಡೆ ಹೋಗುತ್ತಾರೆ. ಟಿಕೆಟ್ ಬೆಲೆ ರೂಪಾಯಿ 15 ಆಗಿದ್ದರಿಂದ ನಿತೀನ್ 20 ರೂಪಾಯಿ ನೋಟನ್ನು ಕಂಡಕ್ಟರ್ ಗೆ ನೀಡುತ್ತಾರೆ. ಆದರೆ ಆ ಕಂಡಕ್ಟರ್ ವಾಪಸ್ 5 ರೂಪಾಯಿ ಚಿಲ್ಲರೆ ಹಣವನ್ನು ನೀಡಲೇ ಇಲ್ಲ. ಹೀಗೆ ಕಂಡಕ್ಟರ್  ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂಬ ವಿಚಾರವನ್ನು ನಿತೀನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಸಂಗಾತಿಯೊಂದಿಗೆ ಸ್ನಾನ ಮಾಡಿ ನೀರು ಉಳಿಸಿ; ಸರ್ಕಾರ ಘೋಷಣೆ

ಏಪ್ರಿಲ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 72 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ರೀತಿ ಸಮಸ್ಯೆಯಾಗಬಾರದೆಂದರೆ UPI ಮೂಲಕ ಟಿಕೆಟ್ ಹಣ ನೀಡಬೇಕು ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Wed, 17 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್