AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಿಟಕಿಯಿಂದ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ನೀರೆರಚಿದ ಯುವಕ; ಒದ್ದು ಬುದ್ಧಿ ಕಲಿಸಿದ ಪೊಲೀಸ್

ಕೆಲವೊಂದಿಷ್ಟು ಜನ ಇತರರಿಗೆ ತೊಂದರೆ ಕೊಟ್ಟು ಅದರಲ್ಲಿ ತಾವು ಮಜಾ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇಲ್ಲೊಬ್ಬ ರೈಲ್ವೆ ಸ್ಟೇಷನ್‌ನಲ್ಲಿ ನಿಂತಿದ್ದ ಯುವಕ ಕಿಟಕಿಯಿಂದ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ಬಾಟಲಿಯಲ್ಲಿದ್ದ ನೀರೆರಚಿ ತೊಂದರೆ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಪೊಲೀಸ್‌, ಆ ಪುಂಡ ಯುವಕನ ಕಾಲರ್‌ ಹಿಡಿದು ದರದರನೇ ಎಳೆದುಕೊಂಡು ಹೋಗಿ ಸರಿಯಾಗಿ ಏಟು ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಇಂತಹ ಪುಂಡರಿಗೆ ಹೀಗೆಯೇ ಆಗ್ಬೇಕು ಎಂದು ಪೊಲೀಸಪ್ಪನ ಕಾರ್ಯಕ್ಕೆ ನೆಟ್ಟಿಗರು ಭೇಷ್‌ ಎಂದಿದ್ದಾರೆ.

Viral: ಕಿಟಕಿಯಿಂದ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ನೀರೆರಚಿದ ಯುವಕ; ಒದ್ದು ಬುದ್ಧಿ ಕಲಿಸಿದ ಪೊಲೀಸ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Feb 27, 2025 | 10:27 AM

Share

ರೈಲ್ವೆ ನಿಲ್ದಾಣದಲ್ಲಿ, ರೈಲಿನೊಳಗೆ ಕೆಲವೊಂದಿಷ್ಟು ಪ್ರಯಾಣಿಕರು ಮಾಡುವಂತಹ ಅವಾಂತರಗಳಿಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇತ್ತೀಚಿಗಷ್ಟೆ ಪ್ರಯಾಣಿಕರು ರೈಲಿನ ಗಾಜು ಒಡೆದು ಹಾಕಿದಂತಹ ಸುದ್ದಿಯೊಂದು ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದೀಗ ಇಲ್ಲೊಂದು ವಿಡಿಯೋ ವೈರಲ್‌ ಆಗಿದ್ದು, ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಯುವಕನೊಬ್ಬ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ಬಾಟಲಿಯಲ್ಲಿದ್ದ ನೀರನ್ನು ಎರಚುವ ಮೂಲಕ ಪುಂಡಾಟಿಕೆ ಮೆರೆದಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಪೊಲೀಸ್‌, ಆ ಪುಂಡ ಯುವಕನ ಕಾಲರ್‌ ಹಿಡಿದು ದರದರನೇ ಎಳೆದುಕೊಂಡು ಹೋಗಿ ಸರಿಯಾಗಿ ಏಟು ಕೊಟ್ಟಿದ್ದು, ಇಂತಹ ಪುಂಡರಿಗೆ ಹೀಗೆಯೇ ಆಗ್ಬೇಕು ಎಂದು ಪೊಲೀಸಪ್ಪನ ಕಾರ್ಯಕ್ಕೆ ನೆಟ್ಟಿಗರು ಭೇಷ್‌ ಎಂದಿದ್ದಾರೆ.

ರೈಲ್ವೆ ಸ್ಟೇಷನ್‌ನಿಂದ ರೈಲು ಹೊರಡುವ ಸಂದರ್ಭದಲ್ಲಿ ಅಲ್ಲಿ ನಿಂತಿ ಯುವಕನೊಬ್ಬ ತನ್ನ ಬ್ಯಾಗ್‌ನಿಂದ ಬಾಟಲಿಯನ್ನು ತೆಗೆದು ಅದರಲ್ಲಿದ್ದ ನೀರನ್ನು ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ಎರಚಿದ್ದಾನೆ. ಆ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ಕೈಗೆ ಆತ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದು ಮಾಡಿದ ತಪ್ಪಿಗೆ ಸರಿಯಾಗಿ ಏಟು ತಿಂದಿದ್ದಾನೆ.

ಇದನ್ನೂ ಓದಿ
Image
ಆಟೋ ಚಾಲಕನ ಜೊತೆ ರಿಕ್ಷಾದಲ್ಲಿ ಮುದ್ದು ಶ್ವಾನದ ಸಿಟಿ ರೌಂಡ್ಸ್‌
Image
ಕಟ್ಟಡದ ಮೇಲಿಂದ ಬೀಳುತ್ತಿದ್ದ ಸ್ನೇಹಿತನ ಜೀವ ಉಳಿಸಿದ ಸ್ನೇಹಿತ
Image
ವಿಡಿಯೋ ಕಾಲ್‌ ಮೂಲಕ ಪಾಕ್ ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾದ ಭಾರತೀಯ ಯುವತಿ
Image
ಕ್ಯಾಬೇಜ್ ಗೋಬಿಗೆ 50 ರೂ., ಹೂಕೋಸು ಗೋಬಿಗೆ 70 ರೂ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಪತ್ರಕರ್ತ ಅಭಿಮನ್ಯು ಸಿಂಗ್‌ (Abhimanyu1305) ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಪುಂಡ ಯುವಕನೊಬ್ಬ ರೈಲಿನೊಳಗಿದ್ದ ಪ್ರಯಾಣಿಕರ ಮೇಲೆ ನೀರೆರಚುತ್ತಿರುವ ದೃಶ್ಯವನ್ನು ಕಾಣಬಹುದು. ಈತನ ಪುಂಡಾಟಿಕೆಯನ್ನು ಗಮನಿಸಿದ ಪೊಲೀಸ್‌ ಅಧಿಕಾರಿಯೊಬ್ಬರು ಆತನ ಕೊರಳ ಪಟ್ಟಿಯನ್ನು ಹಿಡಿದು ದರದರನೇ ಎಳೆದುಕೊಂಡು ಹೋಗಿ, ತಪ್ಪು ಮಾಡಿದ ಆ ಯುವಕನಿಗೆ ಸರಿಯಾಗಿ ಬುದ್ಧಿ ಕಲಿಸಿದ್ದಾರೆ.

ಇದನ್ನೂ ಓದಿ: ಆಟೋ ಚಾಲಕನ ಜೊತೆ ರಿಕ್ಷಾದಲ್ಲಿ ಮುದ್ದು ಶ್ವಾನದ ಸಿಟಿ ರೌಂಡ್ಸ್‌; ಹೇಗಿದೆ ನೋಡಿ ಕ್ಯೂಟ್‌ ಫೋಟೋ

ಫೆಬ್ರವರಿ 25 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ ಪೊಲೀಸ್‌ʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಷ್ಟು ಸಾಲದು ಚರ್ಮ ಕಿತ್ತು ಬರುವ ಹಾಗೆ ಏಟು ಕೊಡ್ಬೇಕುʼ ಎಂದು ಕಿಡಿ ಕಾರಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹವರಿಗೆ ಇದೇ ಒಳ್ಳೆಯ ಮದ್ದುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Thu, 27 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್