AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್; ಲವ್ ಬರ್ಡ್ಸ್ ಹುಚ್ಚಾಟಕ್ಕೆ ಛಿ ಛೀ ಎಂದ ನೆಟ್ಟಿಗರು

ಈ ಪ್ರೀತಿಗೆ ಕಣ್ಣಿಲ್ಲ, ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಈ ಮಾತು ನಿಜವೆಂದು ಇಲ್ಲೊಂದು ಜೋಡಿ ತೋರಿಸಿಕೊಟ್ಟಿದ್ದು, ಸಾರ್ವಜನಿಕರು ಪ್ರಯಾಣಿಸುತ್ತಿದ್ದಂತ ಬಸ್ಸಿನಲ್ಲಿಯೇ ಪ್ರೇಮಿಗಳಿಬ್ಬರು ರೊಮ್ಯಾನ್ಸ್ ಮಾಡುತ್ತಾ, ಅಸಭ್ಯವಾಗಿ ವರ್ತಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದ್ದು, ಇವರ ಹುಚ್ಚಾಟ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

Viral Video:ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್; ಲವ್ ಬರ್ಡ್ಸ್ ಹುಚ್ಚಾಟಕ್ಕೆ ಛಿ ಛೀ ಎಂದ ನೆಟ್ಟಿಗರು
ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್
ಮಾಲಾಶ್ರೀ ಅಂಚನ್​
| Edited By: |

Updated on: May 14, 2024 | 2:05 PM

Share

ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಕೆಲವೊಂದು ಪ್ರೇಮಿಗಳು ಈ ಮಾತು ನಿಜ ಎಂದು ಆಗಾಗ್ಗೆ ತೋರಿಸಿಕೊಡುತ್ತಿರುತ್ತಾರೆ. ಹೌದು ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ ಗಮನಿಸದೆ ಸಾರ್ವಜನಿಕ ಸ್ಥಳಗಳಲ್ಲಿ ರೊಮ್ಯಾನ್ಸ್ ಮಾಡುತ್ತಾ ಇತರರಿಗೂ ಮುಜುಗರವಾಗುವಂತೆ ವರ್ತಿಸುತ್ತಿರುತ್ತಾರೆ. ಹೀಗೆ ಪ್ರೇಮಿಗಳು ಪ್ರೀತಿಯ ಎಲ್ಲೆಗಳನ್ನು ಮೀರಿ ಅಸಭ್ಯವಾಗಿ ವರ್ತಿಸುವ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ಇದೀಗ ನಡೆದಿದ್ದು, ಪ್ರೇಮಿಗಳಿಬ್ಬರು ಪ್ರಯಾಣಿಕರು ತುಂಬಿದ್ದ ಬಸ್ಸಿನಲ್ಲೇ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

ಈ ಘಟನೆ ಒಡಿಶಾದಲ್ಲಿ ನಡೆದಿದ್ದು, ಇಲ್ಲಿನ ರೂರ್ಕೆಲಾ ಎಂಬಲ್ಲಿ ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ಬಸ್ಸಿನಲ್ಲಿ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಈ ಕುರಿತ ವಿಡಿಯೋವೊಂದನ್ನು ಶುಭಮ್ ಶರ್ಮಾ (@Shubham_fd) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಮೆಟ್ರೋ ಆಯ್ತು ಇದೀಗ ಬಸ್ಸಿನಲ್ಲಿಯೂ ಇಂತಹ ಅಸಹ್ಯ ಘಟನೆಗಳು ನಡೆಯುತ್ತಿವೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: 5 ರೂ. ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್​​​ ನೀಡಿದ ಪತ್ನಿ

ವೈರಲ್ ವಿಡಿಯೋದಲ್ಲಿ ಪ್ರೇಮಿಗಳಿಬ್ಬರು ಬಸ್ಸಿನ ಹಿಂಬದಿಯ ಸೀಟಿನಲ್ಲಿ ಕುಳಿತು, ಲೋಕದ ಪರಿಜ್ಞಾನವೇ ಇಲ್ಲದೆ ಚುಂಬಿಸುತ್ತಾ, ರೊಮಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 20 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಛಿ ಛೀ… ಇದು ನಾಚಿಕೆಗೇಡಿನ ಸಂಗತಿ ಎಂದು ನೆಟ್ಟಿಗರು ಆ ಪ್ರೇಮಿಗಳ ವಿರುದ್ಧ ಗರಂ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು