Viral Photo: ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್​​​ ಪ್ರಿಂಟ್​​​; ವಿಡಿಯೋ ವೈರಲ್​​​

'ಆಧಾರ್ ಕಾರ್ಡ್' ಥೀಮ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಕಾರ್ಡ್ ಅನ್ನು ಮುದ್ರಿಸಿದ್ದಾರೆ. ಈ ಕಾರ್ಡ್ 2018ರಲ್ಲಿ ನಡೆದ ವಿವಾಹದಾಗಿದ್ದು, ಆದರೆ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Viral Photo: ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್​​​ ಪ್ರಿಂಟ್​​​; ವಿಡಿಯೋ ವೈರಲ್​​​
ಆಧಾರ್‌ ಕಾರ್ಡ್‌ ಮಾದರಿಯಲ್ಲಿ ವೆಡ್ಡಿಂಗ್​ ಕಾರ್ಡ್

Updated on: Mar 22, 2024 | 4:37 PM

ಪ್ರತಿ ದಿನ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫೋಟೋ, ವಿಡಿಯೋಗಳು ಹರಿದಾಡುತ್ತಿರುತ್ತವೆ. ಆದರೆ ಇತ್ತೀಚೆಗಷ್ಟೇ ಹಳೆಯ ವೀಡಿಯೋವೊಂದು ಭಾರೀ ವೈರಲ್​​ ಆಗಿದೆ. 2018ರ ಹೊಸ ಶೈಲಿಯ ವೆಡ್ಡಿಂಗ್ ಕಾರ್ಡ್ ನೆಟ್ಟಿಗರ ಕುತೂಹಲ ಕೆರಳಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೆಡ್ಡಿಂಗ್ ಕಾರ್ಡ್ ತುಂಬಾ ವಿಶಿಷ್ಟವಾಗಿದೆ. ‘ಆಧಾರ್ ಕಾರ್ಡ್’ ಥೀಮ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಕಾರ್ಡ್ ಅನ್ನು ಮುದ್ರಿಸಿದ್ದಾರೆ. ಈ ಕಾರ್ಡ್ 2018ರಲ್ಲಿ ನಡೆದ ವಿವಾಹದಾಗಿದ್ದು, ಆದರೆ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ವಿಶಿಷ್ಟವಾದ ಮದುವೆಯ ಆಮಂತ್ರಣ ಪತ್ರಿಕೆಯನ್ನು @roohaniyat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೆಬ್ರವರಿ 2ರಂದು ಹಂಚಿಕೊಳ್ಳಲಾಗಿದೆ. ಈ ವಿಶಿಷ್ಟ ಆಮಂತ್ರಣವನ್ನು ಇದೀಗಾಗಲೇ 11ಸಾವಿರಕ್ಕೂ ಹೆಚ್ಚು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಆಧಾರ್ ಕಾರ್ಡ್ ಮಾಡುವ ವ್ಯಕ್ತಿ ಮದುವೆಯಾಗಿರುವ ರೀತಿಯಲ್ಲಿದೆ ಈ ವೆಡ್ಡಿಂಗ್​ ಕಾರ್ಡ್​​ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us