ವರ್ಕೌಟ್​​ ವೇಳೆಯೂ ಮುತ್ತನಿಟ್ಟುಕೊಂಡ ಜೋಡಿ; ವಿಡಿಯೋ ವೈರಲ್​

ಇನ್ಸ್ಟಾಗ್ರಾಮ್​ನಲ್ಲಿ ಜೋಡಿಯೊಂದು ವರ್ಕೌಟ್​ ಮಾಡುವ ವೇಳೆ ಚುಂಬಿಸಿಕೊಳ್ಳುವ ವಿಡಿಯೋವೊಂದು ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರ್ಕೌಟ್​​ ವೇಳೆಯೂ ಮುತ್ತನಿಟ್ಟುಕೊಂಡ ಜೋಡಿ; ವಿಡಿಯೋ ವೈರಲ್​
ವರ್ಕೌಟ್​ ಮಾಡುತ್ತಿರುವ ಜೋಡಿ
Follow us
TV9 Web
| Updated By: Pavitra Bhat Jigalemane

Updated on: Jan 25, 2022 | 9:38 AM

ಸಾಮಾಜಿಕ ಜಾಲತಾಣದಲ್ಲಿ ಹೃದಯ ಸ್ಪರ್ಶಿ ವಿಡಿಯೋವೊಂದು ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​  (Instagram)  ನಲ್ಲಿ ಜೋಡಿಯೊಂದು ವರ್ಕೌಟ್​ ಮಾಡುವ ವೇಳೆ ಚುಂಬಿಸಿಕೊಳ್ಳುವ ವಿಡಿಯೋವೊಂದು ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಮ್​​ನಲ್ಲಿ ವಿಡಿಯೋ ವೈರಲ್ (Viral Video)​ ಆಗಿದೆ. ಗುಡ್​ ನ್ಯೂಸ್​ ಮೂಮೆಂಟ್ (Good News Movement)​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ. ಸದ್ಯ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು 1.4 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಮೇಲೆ ನಿಂತು ಪುಶ್​ಅಪ್ಸ್​ ಮಾಡುತ್ತಿರುತ್ತಾನೆ. ಕೆಳಗೆ ನೇತಾಡುತ್ತ ಪುಶ್​ಅಪ್ಸ್​ ಮಾಡುವ ಮಹಿಳೆ ಮೇಲೆ ಹೋಗಿ  ಪತಿಗೆ ಮುತ್ತನಿಕ್ಕುತ್ತಾಳೆ. ವರ್ಕೌಟ್​ ಮಾಡುವ ವೇಳೆಯಲ್ಲಿಯೂ ಅವರ ನಡುವಿನ ಬಾಂದವ್ಯ ಮತ್ತು ಪ್ರೀತಿಯನ್ನು ಕಂಡು ರಸ್ತೆಯಲ್ಲಿ ಹೋಗುವವರೂ ಕೂಡ ತಿರುಗಿ ನೋಡಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೇ ವಿಡಿಯೋದಲ್ಲಿ ಪಕ್ಕಕ್ಕೆ ವ್ಯಕ್ತಿಯೊಬ್ಬ ನಿಂತು ಜೋಡಿಯ ವರ್ಕೌಟ್​​ ನ್ನು ಚಿತ್ರೀಕರಣ ಮಾಡುವುದನ್ನು ಕಾಣಬಹುದು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ಸಖತ್​ ಶೇರ್​ ಆಗಿದೆ. ಯಂಗ್​ ಕಪಲ್​ನ ಪ್ರೀತಿಯ ವರ್ಕೌಟ್​​ಗೆ ನೋಡುಗರು ಫಿದಾ ಆಗಿದ್ದಾರೆ.

ಕೆಲವು ದಿನಗಳ ಹಿಂದೆ ಜೋಡಿಯೊಂದು ಮದುವೆಯಲ್ಲಿ ನೃತ್ಯ ಮಾಡಲು ಹೋಗಿ ಆಯತಪ್ಪಿ ಬಿದ್ದ ವಿಡಿಯೋ ವೈರ್​ ಆಗಿತ್ತು. ಪ್ರೀತಿ ಎಷ್ಟೇ ಇದ್ದರೂ ಸಂಗಾಥಿಯನ್ನು ಎತ್ತುವ ಶಕ್ತಿ ಇರಬೇಕು ಎಂದು ನೆಟ್ಟಿಗರು ಕಾಮೆಂಟ್​​ ಮಾಡಿದ್ದರು. ಇದೀಗ ವರ್ಕೌಟ್​ ವೇಳೆಯಲ್ಲಿಯೂ ಪ್ರೀತಿಯಿಂದ ಇರುವ ಜೋಡಿ ನೋಡಿ ಸಾಮಾಜಿಕ ಜಾಲತಾಣ ಬಳಕೆದಾರರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

ಸಾಕು ನಾಯಿಯನ್ನು ಉಳಿಸಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿ; ಅಷ್ಟಕ್ಕೂ ಮುಂದೆ ಆಗಿದ್ದೇನು ಇಲ್ಲಿದೆ ವೈರಲ್ ವಿಡಿಯೋ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ