ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ
Follow us
|

Updated on: Apr 03, 2024 | 12:08 PM

ಕೆಲಸದ ಹೊರೆ ನಡುವೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ದಂಪತಿಯೊಂದು ತಮ್ಮ ಮೂರು ತಿಂಗಳ ಮಗುವನ್ನು ದತ್ತು ನೀಡಿದೆ. ಈ ಕುರಿತು ಪತಿ ಅನಾಮಧೇಯವಾಗಿ ರೆಡ್ಡಿಟ್​​ನಲ್ಲಿ ತಮ್ಮ ಕಥೆಯನ್ನು ಹಂಚಿಕೊಂಡಿದ್ದು, ಸದ್ಯ  ಎಲ್ಲೆಡೆ ವೈರಲ್​ ಆಗಿದೆ. “ನನ್ನ ಪತ್ನಿ ಕ್ಯಾಥರೀನ್ ತಮ್ಮ ಮೂರು ತಿಂಗಳ ಮಗಳು ಎಲಿಜಬೆತ್ ಆರೈಕೆ ಮತ್ತು ಕೆಲಸದ ನಡುವೆ ಸಾಕಷ್ಟು ಒತ್ತಡವನ್ನು ಅನುಭವಿಸುತ್ತಿದ್ದಾಳೆ. ಆದರೆ ಅವಳು ಕೆಲಸ ಬಿಡಲು ಸಿದ್ದಲಿಲ್ಲ. ಇದರಿಂದಾಗಿ ನಾವಿಬ್ಬರು ಮಗುವನ್ನು ದತ್ತು ನೀಡಲು ತೀರ್ಮಾನಿಸಿದೆವು” ಎಂದು ಪತಿ ಹೇಳಿಕೊಂಡಿದ್ದಾನೆ.

ಆದರೆ ಅದೃಷ್ಟವಶಾತ್, ಕ್ಯಾಥರೀನ್ ಕೆಲಸದಲ್ಲಿ ನಿರತರಾಗಿದ್ದಾಗ ಕ್ಯಾಥರೀನ್ ಅವರ ತಾಯಿ ಮಗುವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಮಗುವನ್ನು ನೋಡಲು ಯಾರು ಇಲ್ಲ,ನನಗೆ ನನ್ನ ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಮತ್ತಷ್ಟು ಓದಿ:ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಈ ಇಡೀ ವಿಷಯದಲ್ಲಿ ಸಮಾಧಾನದ ವಿಷಯವೆಂದರೆ ಮಗುವನ್ನು ದತ್ತು ಪಡೆದಿರುವುದು ಕ್ಯಾಥರೀನ್ ಅವರ ತಾಯಿ. ಇದೀಗಾ ಮಗಳ ಕಷ್ಟ ಕಂಡು ಮಗುವಿನ ಸ್ವಂತ ಅಜ್ಜಿ ಮಗುವನ್ನು ದತ್ತು ಪಡೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ