Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಆದರೆ ಈ ಮಹಿಳೆ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!
Mother puts newborn baby in ovenImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Feb 11, 2024 | 1:00 PM

ಹೃದಯ ವಿದ್ರಾವಕ ಘಟನೆಯೊಂದು ಅಮೆರಿಕದ ಮಿಸೌರಿಯಲ್ಲಿ ನಡೆದಿದೆ. ತಾಯಿಯೊಬ್ಬಳು ತನ್ನ ಮಗುವನ್ನು ಸುಟ್ಟು ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆದರೆ ತಾನು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿಲ್ಲವೆಂದು ಹೇಳಿದ್ದರೂ ಕೂಡ ಮಹಿಳೆಯ ಮೇಲೆ ಪೊಲೀಸರಿಗೆ ಅನುಮಾನ ಹುಟ್ಟಿಕೊಂಡಿದ್ದು, ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ತಾಯಿಯ ಹೇಳಿಕೆಯ ಪ್ರಕಾರ ಮಗುವನ್ನು ತೊಟ್ಟಿಲಲ್ಲಿ ಮಲಗಿಸುವ ಬದಲು ಓವಲ್​​ನಲ್ಲಿಟ್ಟು ಸ್ವಿಚ್ ಹಾಕಿ ಮಲಗಿದ್ದಳು . ಇದರಿಂದ  ಮಗು  ಸುಟ್ಟು ಕರಕಲಾಗಿ ಸಾವನ್ನಪ್ಪಿದೆ. ಇದೀಗ ತಾಯಿ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾಳೆಯೇ ಅಥವಾ ಆಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾಳೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾನ್ಸಾಸ್ ನಗರದಲ್ಲಿ ಈ ಘಟನೆ ನಡೆದಿದೆ. ಸುದ್ದಿ ಸಂಸ್ಥೆಯೊಂದರ ಪ್ರಕಾರ, ಮರಿಯಾ ಥಾಮಸ್ ತನ್ನ ನವಜಾತ ಮಗುವನ್ನು ಕೊಂದ ಆರೋಪ ಹೊತ್ತಿದ್ದಾರೆ. ಶುಕ್ರವಾರ, ಕಾನ್ಸಾಸ್ ಸಿಟಿ ಪೊಲೀಸರಿಗೆ ಮರಿಯಾ ಎಂಬ ಮಹಿಳೆ ತನ್ನ ಮಗುವನ್ನು ಒಲೆಯಲ್ಲಿ ಸುಟ್ಟು ಸಾಯಿಸಿದ್ದಳು ಎಂಬ ಮಾಹಿತಿ ಸಿಕ್ಕಿತು. ಪೊಲೀಸರು ತನಿಖೆ ಆರಂಭಿಸಿದಾಗ, ರಾತ್ರಿ ಮಗುವಿಗೆ ಹಾಲುಣಿಸಿದ ನಂತರ ತೊಟ್ಟಿಲಲ್ಲಿ ಮಲಗಿಸುವ ಬದಲು ಓವನ್​​ನಲ್ಲಿ ಮಲಗಿಸಿದ್ದೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಗೆಳೆಯನೊಂದಿಗೆ ಸರಸ ಸಲ್ಲಾಪಕ್ಕೆ ಅಡ್ಡಿಯಾಗಿದ್ದ 5-ವರ್ಷದ ಅಂಗವಿಕಲ ಮಗಳನ್ನು ವಿಚ್ಛೇದಿತ ಮಹಿಳೆ ಕೊಂದೇಬಿಟ್ಟಳು!

ಬೆಳಗ್ಗೆ ಎದ್ದಾಗ ಅಕಸ್ಮಾತ್ ಮಗುವನ್ನು ಒಲೆಯಲ್ಲಿ ಮಲಗಿಸಿರುವುದು ಅರಿವಾಯಿತು. ಓವಮ್​​ ತೆರೆದು ನೋಡಿದಾಗ ಅದರಲ್ಲಿ ಮಗು ಸುಟ್ಟು ಕರಕಲಾಗಿರುವುದು ಕಂಡು ಬಂದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಉಸಿರುಗಟ್ಟಿಸಿ ಸುಟ್ಟು ಕರಕಲಾದ ಕಾರಣ ಮಗು ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.

ಸದ್ಯ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಅಲ್ಲದೆ, ಆಕೆಯ ಫೋನ್ ವಶಪಡಿಸಿಕೊಂಡು ತನಿಖೆಗೆ ಕಳುಹಿಸಲಾಗಿದೆ. ಈ ಘಟನೆಯ ನಂತರ ಇಡೀ ಕಾನ್ಸಾಸ್ ನಗರದಲ್ಲಿ ಸಂಚಲನ ಮೂಡಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sun, 11 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್