Viral: ವಾಹನ ಸವಾರರರೇ ಎಚ್ಚರ… ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿ ತೋಡಿದೆ

ಅಲ್ಲಲ್ಲಿ ಹೊಂಡ ಬಿದ್ದಿರುವ ರಸ್ತೆಗಳನ್ನು ಆದಷ್ಟು ಬೇಗ ಸರಿ ಪಡಿಸಿ ಎಂದು ಸಾರ್ವಜನಿಕರು ಮನವಿ ಮಾಡಿದರೂ ಸರ್ಕಾರ ಮತ್ತು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆಲ್ಲಾ ಕ್ಯಾರೇ ಅನ್ನುತ್ತಿಲ್ಲ. ಇಲ್ಲೊಂದು ಕಡೆ ಇದರಿಂದ ಬೇಸತ್ತ ಜನ ಸರ್ಕಾರದ ಕಣ್ತೆರೆಸಲು ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿ ತೋಡಿದೆ ಆದ್ದರಿಂದ ವಾಹನ ಸವಾರರು ನಿಧಾನವಾಗಿ ಚಲಿಸಿ ಎಂಬ ಎಚ್ಚರಿಕೆಯ ಫಲಕವನ್ನು ರಸ್ತೆ ಬದಿ ಅಳವಡಿಸಿದ್ದಾರೆ. ಈ ಬ್ಯಾನರ್‌ ಇದೀಗ ಸಖತ್‌ ವೈರಲ್‌ ಆಗ್ತಿದೆ.

Viral: ವಾಹನ ಸವಾರರರೇ ಎಚ್ಚರ… ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿ ತೋಡಿದೆ
ವೈರಲ್​​ ಪೋಸ್ಟ್​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 13, 2024 | 11:36 AM

ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ ಸಮಸ್ಯೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯದಿಂದ ಹಿಡಿದು ಕೈಕಂಬದವರೆಗಿನ ರಸ್ತೆಯ ಅವಸ್ಥೆಗಳನ್ನು ಕೇಳುವುದೇ ಬೇಡ. ಈ ಗುಂಡಿ ಬಿದ್ದ ರಸ್ತೆಯಲ್ಲಿ ವಾಹನ ಸವಾರರರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ವಾಹನ ಚಲಾಯಿಸುವಂತ ಪರಿಸ್ಥಿತಿ ಬಂದಿದೆ. ರಸ್ತೆ ಗುಂಡಿಗಳನ್ನು ಸರಿ ಪಡಿಸಿ ಎಂದು ಮನವಿ ಮಾಡಿದರೂ ಸಂಬಂಧಪಟ್ಟವರು ಇದಕ್ಕೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ಹೈರಾಣದ ಅಲ್ಲಿನ ಜನ ಇದಕ್ಕೆ ಸಂಬಂಧಪಟ್ಟವರು ಆದಷ್ಟು ಬೇಗ ಕಣ್ತೆರೆಯಲಿ ಎಂದು ರಸ್ತೆಯ ಪಕ್ಕದಲ್ಲಿಯೇ ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿ ತೋಡಿ ಹಾಗೇ ಬಿಟ್ಟಿವೆ ಹಾಗಾಗಿ ವಾಹನ ಸವಾರರು ನಿಧಾನವಾಗಿ ಚಲಿಸಿ ಎಂಬ ಎಚ್ಚರಿಕೆಯ ಫಲಕವನ್ನು ಅಳವಡಿಸಿದ್ದಾರೆ. ಈ ಬ್ಯಾನರ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಕೈಕಂಬದಿಂದ ಕುಕ್ಕೆ ಸುಬ್ರಮಣ್ಯದವರೆಗಿನ ಹೊಂಡ ಬಿದ್ದ ಹಾಗೂ ಹದಗೆಟ್ಟ ರಸ್ತೆಯನ್ನು ಇನ್ನೂ ಕೂಡಾ ಸರಿ ಪಡಿಸದೇ ಇರುವ ಕಾರಣ ಇದರಿಂದ ಬೇಸತ್ತ ಸ್ಥಳೀಯ ಜನ “ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ರಸ್ತೆಯ ಅಲ್ಲಲ್ಲಿ ಗುಂಡಿಗಳನ್ನು ತೋಡಿವೆ. ಹೀಗಾಗಿ ರಸ್ತೆಯಲ್ಲಿ ಗುಂಡಿಗಳಿರುವ ಕಾರಣ ಪ್ರಯಾಣಿಕರು ನಿಧಾನವಾಗಿ ಎಚ್ಚರಿಕೆಯಿಂದ ಚಲಿಸಿ” ಎಂದು ರಸ್ತೆಯ ಪಕ್ಕದಲ್ಲಿಯೇ ದೊಡ್ಡದಾಗಿ ಬ್ಯಾನರ್‌ ಅಳವಡಿಸಿದ್ದಾರೆ. ಈ ಬ್ಯಾನರ್‌ ಅಂತೂ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು mangalore_today_ ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ವಾಹನ ಸವಾರರೇ ನಿಧಾನವಾಗಿ ಚಲಿಸಿ, ನಿಧಿ ಹುಡುಕಲು ರಾಜ್ಯ ಸರ್ಕಾರ ರಸ್ತೆ ಮಧ್ಯೆಯೇ ಅಲ್ಲಲ್ಲಿ ದೊಡ್ಡ ಹೊಂಡ ತೋಡಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ಫೋಟೋದಲ್ಲಿ “ಎಚ್ಚರಿಕೆಯ ಫಲಕ; ಯಾರೋ ಮಾಂತ್ರಿಕರು ಕೈಕಂಬದಿಂದ-ಕುಕ್ಕೆ ಸುಬ್ರಮಣ್ಯವರೆಗಿನ ರಸ್ತೆಯಲ್ಲಿ ನಿಧಿ ಇದೆ ಎಂದು ಹೇಳಿದ ಕಾರಣ ಎಚ್ಚೆತ್ತ ರಾಜ್ಯ ಸರ್ಕಾರ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕಿಸುವ ಕಾರಣದಿಂದ ಅಲ್ಲಲ್ಲಿ ರಸ್ತೆ ಮಧ್ಯೆಯೇ ದೊಡ್ಡ ಹೊಂಡಗಳನ್ನು ತೋಡಿಸಿ ಹಾಗೆಯೇ ಬಿಟ್ಟಿದ್ದಾರೆ, ಹಾಗಾಗಿ ನಿಧಾನವಾಗಿ ಚಲಿಸಿ” ಎಂಬ ಬರಹವನ್ನು ಬರೆದಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬಾಳೆಗಿಡ ನೆಟ್ಟು ಪುತ್ತೂರು ರಸ್ತೆ ಗುಂಡಿ ಮುಚ್ಚಿದ ಜನ; ವಿಡಿಯೋ ವೈರಲ್‌

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 4,800 ಕ್ಕೂ ಹೆಚ್ಚು ಲೈಕ್ಸ್‌ ಮತ್ತು ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಧಿ ಇದ್ದರೂ ಇರಬಹುದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಳ ಭಾಗದಲ್ಲಿ ಚಿನ್ನ ಸಿಗುವ ಸಾಧ್ಯತೆ ಇರುವುದರಿಂದ ಮೈನಿಂಗ್‌ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಯಿದೆʼ ಎಂದು ತಮಾಷೆ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:01 am, Wed, 13 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ