ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ ಸಮಸ್ಯೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯದಿಂದ ಹಿಡಿದು ಕೈಕಂಬದವರೆಗಿನ ರಸ್ತೆಯ ಅವಸ್ಥೆಗಳನ್ನು ಕೇಳುವುದೇ ಬೇಡ. ಈ ಗುಂಡಿ ಬಿದ್ದ ರಸ್ತೆಯಲ್ಲಿ ವಾಹನ ಸವಾರರರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ವಾಹನ ಚಲಾಯಿಸುವಂತ ಪರಿಸ್ಥಿತಿ ಬಂದಿದೆ. ರಸ್ತೆ ಗುಂಡಿಗಳನ್ನು ಸರಿ ಪಡಿಸಿ ಎಂದು ಮನವಿ ಮಾಡಿದರೂ ಸಂಬಂಧಪಟ್ಟವರು ಇದಕ್ಕೆ ಕ್ಯಾರೇ ಅನ್ನುತ್ತಿಲ್ಲ. ಇದರಿಂದ ಹೈರಾಣದ ಅಲ್ಲಿನ ಜನ ಇದಕ್ಕೆ ಸಂಬಂಧಪಟ್ಟವರು ಆದಷ್ಟು ಬೇಗ ಕಣ್ತೆರೆಯಲಿ ಎಂದು ರಸ್ತೆಯ ಪಕ್ಕದಲ್ಲಿಯೇ ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ಅಲ್ಲಲ್ಲಿ ರಸ್ತೆ ಮಧ್ಯೆ ಗುಂಡಿ ತೋಡಿ ಹಾಗೇ ಬಿಟ್ಟಿವೆ ಹಾಗಾಗಿ ವಾಹನ ಸವಾರರು ನಿಧಾನವಾಗಿ ಚಲಿಸಿ ಎಂಬ ಎಚ್ಚರಿಕೆಯ ಫಲಕವನ್ನು ಅಳವಡಿಸಿದ್ದಾರೆ. ಈ ಬ್ಯಾನರ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಕೈಕಂಬದಿಂದ ಕುಕ್ಕೆ ಸುಬ್ರಮಣ್ಯದವರೆಗಿನ ಹೊಂಡ ಬಿದ್ದ ಹಾಗೂ ಹದಗೆಟ್ಟ ರಸ್ತೆಯನ್ನು ಇನ್ನೂ ಕೂಡಾ ಸರಿ ಪಡಿಸದೇ ಇರುವ ಕಾರಣ ಇದರಿಂದ ಬೇಸತ್ತ ಸ್ಥಳೀಯ ಜನ “ನಿಧಿ ಹುಡುಕುವ ಸಲುವಾಗಿ ರಾಜ್ಯ ಸರ್ಕಾರ ರಸ್ತೆಯ ಅಲ್ಲಲ್ಲಿ ಗುಂಡಿಗಳನ್ನು ತೋಡಿವೆ. ಹೀಗಾಗಿ ರಸ್ತೆಯಲ್ಲಿ ಗುಂಡಿಗಳಿರುವ ಕಾರಣ ಪ್ರಯಾಣಿಕರು ನಿಧಾನವಾಗಿ ಎಚ್ಚರಿಕೆಯಿಂದ ಚಲಿಸಿ” ಎಂದು ರಸ್ತೆಯ ಪಕ್ಕದಲ್ಲಿಯೇ ದೊಡ್ಡದಾಗಿ ಬ್ಯಾನರ್ ಅಳವಡಿಸಿದ್ದಾರೆ. ಈ ಬ್ಯಾನರ್ ಅಂತೂ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ಕುರಿತ ಪೋಸ್ಟ್ ಒಂದನ್ನು mangalore_today_ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ವಾಹನ ಸವಾರರೇ ನಿಧಾನವಾಗಿ ಚಲಿಸಿ, ನಿಧಿ ಹುಡುಕಲು ರಾಜ್ಯ ಸರ್ಕಾರ ರಸ್ತೆ ಮಧ್ಯೆಯೇ ಅಲ್ಲಲ್ಲಿ ದೊಡ್ಡ ಹೊಂಡ ತೋಡಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.
ವೈರಲ್ ಆಗುತ್ತಿರುವ ಫೋಟೋದಲ್ಲಿ “ಎಚ್ಚರಿಕೆಯ ಫಲಕ; ಯಾರೋ ಮಾಂತ್ರಿಕರು ಕೈಕಂಬದಿಂದ-ಕುಕ್ಕೆ ಸುಬ್ರಮಣ್ಯವರೆಗಿನ ರಸ್ತೆಯಲ್ಲಿ ನಿಧಿ ಇದೆ ಎಂದು ಹೇಳಿದ ಕಾರಣ ಎಚ್ಚೆತ್ತ ರಾಜ್ಯ ಸರ್ಕಾರ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕಿಸುವ ಕಾರಣದಿಂದ ಅಲ್ಲಲ್ಲಿ ರಸ್ತೆ ಮಧ್ಯೆಯೇ ದೊಡ್ಡ ಹೊಂಡಗಳನ್ನು ತೋಡಿಸಿ ಹಾಗೆಯೇ ಬಿಟ್ಟಿದ್ದಾರೆ, ಹಾಗಾಗಿ ನಿಧಾನವಾಗಿ ಚಲಿಸಿ” ಎಂಬ ಬರಹವನ್ನು ಬರೆದಿರುವುದನ್ನು ಕಾಣಬಹುದು.
ಇದನ್ನೂ ಓದಿ: ಬಾಳೆಗಿಡ ನೆಟ್ಟು ಪುತ್ತೂರು ರಸ್ತೆ ಗುಂಡಿ ಮುಚ್ಚಿದ ಜನ; ವಿಡಿಯೋ ವೈರಲ್
ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್ 4,800 ಕ್ಕೂ ಹೆಚ್ಚು ಲೈಕ್ಸ್ ಮತ್ತು ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಧಿ ಇದ್ದರೂ ಇರಬಹುದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼತಳ ಭಾಗದಲ್ಲಿ ಚಿನ್ನ ಸಿಗುವ ಸಾಧ್ಯತೆ ಇರುವುದರಿಂದ ಮೈನಿಂಗ್ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಯಿದೆʼ ಎಂದು ತಮಾಷೆ ಮಾಡಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:01 am, Wed, 13 November 24