AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು

ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ಕಟ್ಟುಹಾಕಿ ಅಲುಗಾಡಿಸಿದ್ದಾರೆ. 30 ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video: ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು
ನೀರಿನಲ್ಲಿ ಮುಳುಗಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ನೇತು ಹಾಕಿದ ಗ್ರಾಮಸ್ಥರು
TV9 Web
| Edited By: |

Updated on:Aug 25, 2021 | 12:28 PM

Share

ಮಧ್ಯ ಪ್ರದೇಶ: ಈಜಲು ಹೋಗಿ ನೀರಿನಲ್ಲಿ ಮುಳುಗಿದ ವ್ಯಕ್ತಿಯ ದೇಹದಿಂದ ನೀರು ಹೊರ ತೆಗೆಯಲು ಮೃತದೇಹವನ್ನು ಮರಕ್ಕೆ ತಲೆಕೆಳಗಾಗಿ ನೇತು ಹಾಕಿದ ಘಟನೆ ನಡೆದಿದೆ. ಈ ಕುರಿತಂತೆ ಸ್ಥಳೀಯ ವರದಿಗಳಿಂದ ಮಾಹಿತಿ ತಿಳಿದು ಬಂದಿದೆ. ಗುಣಾ ಜಿಲ್ಲೆಯ ಕುಂಬ್ರಾಜ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಜೋಗಿಪುರ ಹಳ್ಳಿಯಲ್ಲಿ ಕಳೆದ ಮಂಗಳವಾರ ಘಟನೆ ನಡೆದಿದೆ.

ಮೃತದೇಹವನ್ನು ತಲೆಕೆಳಗಾಗಿ ಮರಕ್ಕೆ ಕಟ್ಟುಹಾಕಿ ಅಲುಗಾಡಿಸಿದ್ದಾರೆ. 30 ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭನ್ವರ್​ಲಾಲ್​ ಭಂಜರಾ ಎಂಬ ಹೆಸರಿನ ವ್ಯಕ್ತಿ ಈಜಲು ನದಿಗೆ ಹೋಗಿದ್ದಾರೆ. ಆ ಸಮಯದಲ್ಲಿ ನೀರಿನಲ್ಲಿ ಮುಳುಗಿದ್ದಾರೆ. ತಕ್ಷಣ ನೋಡಿದ ಸ್ಥಳೀಯರು ಅವರನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.

ಅಲ್ಲಿದ್ದ ಕೆಲವರು ದೇಹವನ್ನು ತಲೆಕೆಳಗಾಗಿ ಇರಿಸಬೇಕು ಅದರಿಂದ ನೀರು ಹೊರ ಬರಬಹುದು ಎಂದು ಸಲಹೆ ನೀಡಿದ್ದಾರೆ. ಗ್ರಾಮಸ್ಥರು ಕೆಲಹೊತ್ತು ವ್ಯಕ್ತಿಯ ಮೃತದೇಹವನ್ನು ತಲೆಕೆಳಗಾಗಿ ನೇತು ಹಾಕಿದ್ದಾರೆ.

ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ. ನೀರಿನಲ್ಲಿ ಮುಳುಗಿದ ವ್ಯಕ್ತಿ ಉಸಿರಾಡುತ್ತಿದ್ದಾರೆ, ದೇಹದಿಂದ ನೀರು ಹೊರಹಾಕಿದರೆ ವ್ಯಕ್ತಿ ಉಳಿಯುತ್ತಾನೆ ಎಂದು ಗ್ರಾಮಸ್ಥರು ಹೇಳಿದರು. ಹಾಗೆ ಮಾಡದಂತೆ ನಾನು ಮನವೊಲಿಸಿದೆ. ಆದರೆ ಯಾರೂ ಕೇಳಲು ತಯಾರಿರಲಿಲ್ಲ. ದೇಹವನ್ನು ಮರದ ಕೊಂಬೆಗೆ ತಲೆಕೆಳಗಾಗಿ ನೇತುಹಾಕಿದ್ದಾರೆ ಎಂದು ಪೊಲೀಸ್ ಹೊರಠಾಣೆ ಉಸ್ತುವಾರಿ ತೋರಣ್ ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿದಾಗ ಈ ಘಟನೆಯ ಬಗ್ಗೆ ತಿಳಿದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಭಾಗಿಯಾಗಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಮೆಡಿಕೊಲೆಗಲ್ ಸಂಸ್ಥೆಯ ಮಾಜಿ ನಿರ್ದೇಶಕ ಹೇಳಿದ್ದಾರೆ.

ಇದನ್ನೂ ಓದಿ:

Viral Video: ಬೇರೊಂದು ಯುವತಿ ಜತೆ ತಿರುಗಾಡುತ್ತಿದ್ದ ಗಂಡನನ್ನು ನೋಡಿದ ಹೆಂಡತಿ ಏನು ಮಾಡ್ತಾಳೆ ನೋಡಿ! ವಿಡಿಯೋ ವೈರಲ್​

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Dead body drowned man hanged down For drain out water from lungs in madhya pradesh)

Published On - 12:18 pm, Wed, 25 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ