Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

Viral News: ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆ; ಪೋಸ್ಟ್​​ ವೈರಲ್​​
Dead Frog Found in Hostel's FoodImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Sep 24, 2023 | 1:00 PM

ಒಡಿಶಾ: ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್‌ನ ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಫೋಟೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಆಹಾರದಲ್ಲಿ ಸತ್ತ ಕಪ್ಪೆ ಪತ್ತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವುದರ ಜೊತೆಗೆ, ಎಂಜಿನಿಯರಿಂಗ್ ಪದವಿ ಪಡೆಯಲು ಪೋಷಕರು ಸುಮಾರು 17.5 ಲಕ್ಷ ರೂಪಾಯಿಗಳನ್ನು ಪಾವತಿಸುತ್ತಾರೆ. ಇಷ್ಟು ದೊಡ್ಡ ಮೊತ್ತದ ಹೊರತಾಗಿಯೂ ಕಾಲೇಜು ಹಾಸ್ಟೆಲ್‌ನಲ್ಲಿ ನೀಡಲಾಗುತ್ತಿರುವ ಆಹಾರದಲ್ಲಿ ಬೇಜಾವಬ್ದಾರಿ ತೋರಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗಳ ನಂತರ ತಪ್ಪಿಗೆ ಕಾಲೇಜು ಪ್ರತಿಕ್ರಿಯಿಸಿದೆ. ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಮೆಸ್ ಪ್ರೊವೈಡರ್ ಕಂಪನಿಯಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ. ತಪ್ಪಿಗೆ ಪರಿಹಾರವಾಗಿ ಮೆಸ್ ಸೇವಾ ಪೂರೈಕೆದಾರರಿಂದ ಒಂದು ದಿನದ ಪಾವತಿಯನ್ನು ಕಡಿತಗೊಳಿಸಲು ನಿರ್ಧರಿಸಿರುವುದು ಮತ್ತೊಂದು ಪೋಸ್ಟ್​​​ನಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕಂಡೀರಾ ಚೀನಾದ ಈ ಬಾಲಬಾಣಸಿಗನ; ಅಚ್ಚರಿಗೊಂಡ ನೆಟ್ಟಿಗರು

ಕಾಲೇಜು ಪ್ರತಿಕ್ರಿಯಿಸಿದ ಪೋಸ್ಟ್​​​ ಇಲ್ಲಿದೆ:

ಹಾಸ್ಟೆಲ್‌ ಆಹಾರದಲ್ಲಿನ ಬೇಜಾವಬ್ದಾರಿತನಕ್ಕೆ, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಕ್ಯಾಂಟೀನ್ ಗುತ್ತಿಗೆದಾರ, ಉಸ್ತುವಾರಿ ಎಲ್ಲರ ಮೇಲೆ ಮೊಕದ್ದಮೆ ಹೂಡಬೇಕು, ತಪ್ಪಿಗೆ ಅಮಾನತುಗೊಳಿಸಬೇಕು ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಒಮ್ಮೆ ನಮ್ಮ ಹಾಸ್ಟೆಲ್ ಮೆಸ್‌ನಲ್ಲಿ ಆಹಾರದಲ್ಲಿ ಹಲ್ಲಿ ಸಿಕ್ಕಿತು. ಅದರ ನಂತರ ಇಡೀ ಸೆಮಿಸ್ಟರ್‌ಗೆ ಮೆಸ್‌ನಲ್ಲಿ ತಿನ್ನಲಿಲ್ಲ, ”ಎಂದು ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ